ಪ್ರಕಾಶ್ ರಾಜ್, ಪ್ರದೀಪ್ ಈಶ್ವರ್ ಮತ್ತು ಪ್ರತಾಪ್ ಸಿಂಹ 
ರಾಜಕೀಯ

'ಪರದೀಪ- ಪರಕಾಶ' ಇಬ್ಬರೂ ಹುಚ್ಚರು: ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆ ಡಿಕೆಶಿ ಟಿಕೆಟ್ ಕೊಡಲ್ಲ; ಪ್ರತಾಪ್ ಸಿಂಹ

ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡುವುದಿಲ್ಲ, ಹೀಗಾಗಿ ಹುಚ್ಚನಾಗಿ ಓಡಾಡುತ್ತಿದ್ದಾನೆ. ಅಲ್ಲಿ ಬೇರೆಯವರನ್ನು ಈಗಾಗಲೇ ಆಯ್ಕೆ ಮಾಡಿ ಇಡಲಾಗಿದೆ.

ಮೈಸೂರು: ನಟ ಪ್ರಕಾಶ್ ರಾಜ್ ಹಾಗೂ ಪ್ರದೀಪ್ ಈಶ್ವರ್ ಇಬ್ಬರನ್ನೂ ಸಮಾಜದವರೇ ಹುಚ್ಚರು ಎಂದು ದೂರ ಇಟ್ಟಿದ್ದಾರೆ. ಮೋದಿ ಅವರು 13 ವರ್ಷಗಳಿಂದ ತಮ್ಮನ್ನು ಬಂಧಿಸಿಲ್ಲ ಎಂದು ಪ್ರಕಾಶ್ ರಾಜ್ ಹೇಳುತ್ತಾರೆ. ಹುಚ್ಚರನ್ನು ಯಾರಾದರೂ ಬಂಧಿಸಿ ಜೈಲಿಗೆ ಹಾಕುತ್ತಾರಾ ಎಂದು ಬಿಜೆಪಿ ನಾಯಕ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೇಶದ್ರೋಹಿಗಳು ಎಂದು ನಟ ಪ್ರಕಾಶ್ ರಾಜ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಟ ಪ್ರಕಾಶ್ ರಾಜ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಇಬ್ಬರೂ ಹುಚ್ಚರು ಎಂದಿದ್ದಾರೆ. ಹುಚ್ಚರು ಎಂದರೆ ಎಲ್ಲರೂ ದೂರ ಇರ್ತಾರೆ, ಹಾಗಾಗಿ ನೀವು ಅವರಿಗೆ ಮೈಕ್ ಹಿಡಿಯೋಕೆ ಹೋಗಬೇಡಿ. ಸರ್ಕಾರ ಹುಚ್ಚರನ್ನು ಅರೆಸ್ಟ್ ಮಾಡಲು ಹೋಗೋದಿಲ್ಲ ಎಂದಿದ್ದಾರೆ.

ಒಬ್ಬರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿ ಕಳೆದು ಕೊಂಡಿದ್ದಾರೆ. ಮತ್ತೊಬ್ಬರು ಎಂಎಲ್‌ಎ, ಗ್ಯಾರಂಟಿ ಕೂಸು ಎಂದು ಪ್ರದೀಪ್ ಈಶ್ವರ್ ಅವರನ್ನು ಉಲ್ಲೇಖಿಸಿ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡುವುದಿಲ್ಲ, ಹೀಗಾಗಿ ಹುಚ್ಚನಾಗಿ ಓಡಾಡುತ್ತಿದ್ದಾನೆ.

ಅಲ್ಲಿ ಬೇರೆಯವರನ್ನು ಈಗಾಗಲೇ ಆಯ್ಕೆ ಮಾಡಿ ಇಡಲಾಗಿದೆ. ಐದು ವರ್ಷ ಏನೋ ಮಾತನಾಡಲಿ ಎಂದು ಸುಮ್ಮನೆ ಬಿಟ್ಟಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶಾಸನಬದ್ಧ ಕಾರ್ಯವಿಧಾನ ಅನುಸರಿಸದೆ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡುವಂತಿಲ್ಲ: ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಕೆಂಡ..!

Flydubai ವಿಮಾನ ಹೈಜಾಕ್'ಗೆ ಯತ್ನ; ಕಾಕ್‌ಪಿಟ್‌ನಲ್ಲೇ ಡೆಡ್ಲಿ ಫೈಟ್; 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..!

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಳ, ವಿಮಾನ ಇಂಧನವೂ ದುಬಾರಿ..!

ಕಾಂಗ್ರೆಸ್‌ನಲ್ಲಿ ಮತ್ತೆ ಸಂಪುಟ ಸರ್ಕಸ್: ದೆಹಲಿಯಲ್ಲಿ ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ, ಖಾಲಿ ಇರೋ 2 ಸಚಿವ ಸ್ಥಾನ ಭರ್ತಿಗೆ ಪಟ್ಟು..!

ಡಿಕೆಶಿ ಕನಸಿನ ಅವಳಿ ಸುರಂಗ ಮಾರ್ಗಕ್ಕೆ ಹೊಸ ಕಂಟಕ: ಹೆಬ್ಬಾಳ ಕೆರೆಯ 3.45 ಎಕರೆ ಜೌಗು ಪ್ರದೇಶ ನಾಶಕ್ಕೆ ಯತ್ನ, ಎದುರಾಯ್ತು ಕಾನೂನು ಸಂಕಷ್ಟ..!