ಶಿವಲಿಂಗೇಗೌಡ 
ರಾಜಕೀಯ

ನೀವೆಲ್ಲ ಗಲಾಟೆ ಮಾಡೋಕ್ ಬಂದಿದ್ದೀರಾ? ಶ್ರೇಯಸ್‌ ಪಟೇಲ್ ಬೆಂಬಲಿಗರ ವಿರುದ್ಧ ಸಚಿವ ಶಿವಲಿಂಗೇಗೌಡ ಆಕ್ರೋಶ

ನೀವೆಲ್ಲ ಇಲ್ಲಿಗೆ ಗಲಾಟೆ ಮಾಡಲು ಬಂದಿದ್ದೀರಾ? ನಾನು ಇಂತಹದ್ದನ್ನು ತುಂಬಾ ನೋಡಿದ್ದೀನಿ ಸುಮ್ಮನೆ ಕುಳಿತುಕೊಳ್ಳಿ ಎಂದು ಸಿಟ್ಟನ್ನು ಹೊರಹಾಕಿದ್ದಾರೆ.

ಹಾಸನ: ಸಂಸದ ಶ್ರೇಯಸ್‌ ಪಟೇಲ್‌ ಅವರ ಬೆಂಬಲಿಗರು ಕಾಂಗ್ರೆಸ್‌ನ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಗಲಾಟೆ ಮಾಡಿದ್ದಕ್ಕೆ ಸಚಿವ ಶಿವಲಿಂಗೇಗೌಡ ಅವರು ಗರಂ ಆಗಿದ್ದಾರೆ.

ಗಲಾಟೆಯಿಂದಾಗಿ ಕೆಲಕಾಲ ಸಭೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಾರ್ಯಕ್ರಮದಲ್ಲಿ ಸಂಸದರ ಹೆಸರು ಪ್ರಸ್ತಾಪಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಬೆಂಬಲಿಗರ ಮೇಲೆ ಸಚಿವರು ಗರಂ ಆಗಿದ್ದಾರೆ. ನೀವೆಲ್ಲ ಇಲ್ಲಿಗೆ ಗಲಾಟೆ ಮಾಡಲು ಬಂದಿದ್ದೀರಾ? ನಾನು ಇಂತಹದ್ದನ್ನು ತುಂಬಾ ನೋಡಿದ್ದೀನಿ ಸುಮ್ಮನೆ ಕುಳಿತುಕೊಳ್ಳಿ ಎಂದು ಸಿಟ್ಟನ್ನು ಹೊರಹಾಕಿದ್ದಾರೆ.

ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ನೂತನ ಜಿಲ್ಲಾಧ್ಯಕ್ಷ ಜಿ.ಬಿ. ಶಶಿಧರ್ ಅವರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್‌ ಪಟೇಲ್ ಅವರ ಹೆಸರನ್ನು ಹೇಳದಿರುವುದಕ್ಕೆ ಅವರ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೆ, ಸಂಸದರು ಕಾರ್ಯಕ್ರಮಕ್ಕೆ ಬರುವವರೆಗೂ ಉದ್ಘಾಟನೆ ಮಾಡದಂತೆ ಪಟ್ಟುಹಿಡಿದು ಕಾರ್ಯಕರ್ತರು ಗಲಾಟೆ ಹಾಗೂ ಅಡ್ಡಿಪಡಿಸಲು ಮುಂದಾದರು.

ಕಾರ್ಯಕರ್ತರ ಈ ವರ್ತನೆಯಿಂದ ಸಿಟ್ಟಿಗೆದ್ದ ಸಚಿವ ಕೆ.ಎಂ. ಶಿವಲಿಂಗೇಗೌಡರು ಗರಂ ಆಗಿ,ನೀವೆಲ್ಲ ಇಲ್ಲಿಗೆ ಗಲಾಟೆ ಮಾಡಲು ಬಂದಿದ್ದೀರಾ? ನಾನು ಇಂತಹದ್ದನ್ನೆಲ್ಲಾ ತುಂಬಾ ನೋಡಿದ್ದೀನಿ, ಸುಮ್ಮನೆ ಕುಳಿತುಕೊಳ್ಳಿ ಎಂದು ಗದರಿದರು. ಬಳಿಕ ಸಮಾಧಾನಪಡಿಸಲು ಯತ್ನಿಸುತ್ತಾ, ನೀವೇ ಹೋಗಿ ಶ್ರೇಯಸ್‌ ಪಟೇಲ್ ಅವರನ್ನು ಕರೆದು ತನ್ನಿ, ಆಮೇಲೆ ಕಾರ್ಯಕ್ರಮ ಉದ್ಘಾಟನೆ ಮಾಡೋಣ ಎಂದು ಹೇಳಿದರು.

ನಂತರ ಕಾರ್ಯಕರ್ತರ ಅಸಮಾಧಾನದ ಮಧ್ಯೆಯೂ ಸಚಿವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಆದರೆ, ಉದ್ಘಾಟನೆಯ ಬಳಿಕವೂ ಕೆಲಕಾಲ ಗಲಾಟೆ ಹಾಗೂ ಮಾತಿನ ಚಕಮಕಿ ಮುಂದುವರಿದ ಕಾರಣ ಕಾರ್ಯಕ್ರಮವನ್ನು ಕೆಲಕಾಲ ಸ್ಥಗಿತಗೊಳಿಸಬೇಕಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!