ಪ್ರದೀಪ್ ಈಶ್ವರ್ 
ರಾಜಕೀಯ

Congress MLA ಪ್ರದೀಪ್ ಈಶ್ವರ್ ವಿರುದ್ಧ ಸ್ವಪಕ್ಷದಲ್ಲೇ ಅಸಮಾಧಾನ ಸ್ಫೋಟ: ಅಮಾನತಿಗೆ ಹೆಚ್ಚಿದ ಒತ್ತಡ

ಕಾಂಗ್ರೆಸ್​ನಲ್ಲಿ ಶಾಸಕ ಕಿತ್ತಾಟ ತಾರಕಕ್ಕೇರಿದೆ. ಬಂಗಾರಪೇಟೆ ಶಾಸಕ ಎಸ್.ಎನ್‌. ನಾರಾಯಣಸ್ವಾಮಿ ಮತ್ತು ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಮಧ್ಯೆ ಸದನದಲ್ಲೇ ಮಾತಿನ ಚಕಮಕಿ ನಡೆದಿತ್ತು.

ಬೆಂಗಳೂರು: ಕಾಂಗ್ರೆಸ್​ನಲ್ಲಿ ಶಾಸಕ ಕಿತ್ತಾಟ ತಾರಕಕ್ಕೇರಿದೆ. ಬಂಗಾರಪೇಟೆ ಶಾಸಕ ಎಸ್.ಎನ್‌. ನಾರಾಯಣಸ್ವಾಮಿ ಮತ್ತು ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಮಧ್ಯೆ ಸದನದಲ್ಲೇ ಮಾತಿನ ಚಕಮಕಿ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಚಿವ ಎಂ.ಸಿ ಸುಧಾಕರ್ ನಡುವಿನ ಆರೋಪ ಪ್ರತ್ಯಾರೋಪಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.

ಮುಂದಿನ ಚುನಾವಣೆಯಲ್ಲಿ ಶಾಸಕ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬಾರದು. ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಜಾತಿ ಸಂಘರ್ಷ ಇಲ್ಲ. ಸವರ್ಣೀಯರು, ದಲಿತರು, ಅಲ್ಪಸಂಖ್ಯಾತರು ಸಾಮರಸ್ಯದಿಂದ ಇದ್ದಾರೆ. ಆದರೆ ಪ್ರದೀಪ್ ಈಶ್ವರ್ ಹೇಳಿಕೆಗಳು ಪಕ್ಷ ಮುಜುಗರಕ್ಕೀಡಾಗುವಂತೆ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಆರೋಪಿಸಿದ್ದಾರೆ.

ಅಲ್ಲದೆ, ಶಾಸಕ ಪ್ರದೀಪ್ ಈಶ್ವರ್ ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದಾರೆ. ಪ್ರದೀಪ್ ಈಶ್ವರ್‌ ಶಿಕ್ಷಣ ಸಂಸ್ಥೆಯನ್ನು ಕಟ್ಟುವುದರಿಂದ ಹಿಡಿದು ಅವರು ಶಾಸಕರು ಆಗುವವರೆಗೂ ಡಾ.ಎಂ.ಸಿ ಸುಧಾಕರ್ ನೆರವಿದೆ. ಆದರೆ ಇದೆಲ್ಲವನ್ನು ಮರೆತು ಪ್ರದೀಪ್ ಈಶ್ವರ್ ಸಾಮಾಜಿಕ ಜಾಲತಾಣಗಳ ಮೂಲಕ ಸುಧಾಕರ್​ಗೆ ಸವಾಲು ಹಾಕಿದ್ದರು. ಇನ್ನು ಪ್ರದೀಪ್ ಈಶ್ವರ್ ವಿರುದ್ಧ ತಿರುಗಿಬಿದ್ದಿರುವ ಸುಧಾಕರ್ ಬೆಂಬಲಿಗರು ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಪ್ರದೀಪ್ ಈಶ್ವರ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ನಮ್ಮದೇ ಸರ್ಕಾರವಿದ್ದರೂ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರದೀಪ್ ಈಶ್ವರ್ ಬಹಿರಂಗವಾಗಿ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿಗೆ ಎಂ.ಸಿ. ಸುಧಾಕರ್ ಬಣ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪ್ರದೀಪ್ ಈಶ್ವರ್ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಬಾರದು ಎಂದು ಕೆಪಿಸಿಸಿಗೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ