ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ - ಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಡಿಕೆ ಶಿವಕುಮಾರ್ ಅವರು ಈಗ ತಮ್ಮ ಹಳೆ ಕಸಬು ಮತ್ತೆ ಶುರು ಮಾಡಿದ್ದು, ತಮ್ಮ ಸಚಿವರನ್ನು ನಿಯಂತ್ರಿಸಲು ಅದೇ ತಂತ್ರ ಬಳಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ತಮ್ಮ​ ಸರ್ಕಾರದ ಪ್ರಭಾವಿ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮುಖಾಂತರ ರಹಸ್ಯ ಕಾರ್ಯಚರಣೆ ನಡೆಸಲು ವಿಪಕ್ಷಗಳು ತೆರೆಮರೆಯಲ್ಲಿ ದೊಡ್ಡ ಮಟ್ಟದ ಕಸರತ್ತು ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಗೆ ನೀಡಿದ ವಿಚಾರವಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಅವರೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸುವ ಮೂಲಕವೇ ಮುಖ್ಯಮಂತ್ರಿಯಾದರು ಎಂದು ಕೆಲ ಕಾಂಗ್ರೆಸ್​​ ನಾಯಕರೇ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಡಿಕೆ ಶಿವಕುಮಾರ್ ಅವರು ಈಗ ತಮ್ಮ ಹಳೆ ಕಸಬು ಮತ್ತೆ ಶುರು ಮಾಡಿದ್ದು, ತಮ್ಮ ಸಚಿವರನ್ನು ನಿಯಂತ್ರಿಸಲು ಅದೇ ತಂತ್ರ ಬಳಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು, ಎರಡು ತಂಡಗಳಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರ ಚಲನವಲನದ ಮೇಲೆ ತೀವ್ರ ನಿಗಾ ಇಡಲಾಗಿದೆ, ಖಾಸಗಿ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರು ಹುಷಾರಾಗಿರುವಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ