ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಂಗಳವಾರ ನಡೆದ ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭಾಗವಹಿಸಿದರು. 
ರಾಜಕೀಯ

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ ಕುಮಾರಸ್ವಾಮಿ ಆರೋಪ

ಸುಮಾರು 90 ಸಾವಿರ ಮತದಾರರ ಹೆಸರುಗಳನ್ನು ಅಳಿಸುವಂತೆ ಅರ್ಜಿಗಳು ಬಂದಿವೆ ಎಂದು ಹೇಳಲಾಗುತ್ತಿದ್ದರೂ, ಅವುಗಳ ಪರಿಶೀಲನೆ ಮತ್ತು ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಹಾಗಿದ್ದರೆ ಮುಖ್ಯಮಂತ್ರಿ ಬಳಿ ಯಾವ ಮಾಹಿತಿ ಇದೆ?

ಮುಳಬಾಗಿಲು (ಕೋಲಾರ): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ‘ಮತಗಳ ಕಳ್ಳತನ’ದ ಆರೋಪವನ್ನು ಮುಂದಿಟ್ಟುಕೊಂಡು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಮುಳಬಾಗಿಲಿನಲ್ಲಿ ಮಂಗಳವಾರ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆ ಆರಂಭವಾದ ಬಳಿಕ ಈ ಕುರಿತು ವ್ಯಾಪಕ ಚರ್ಚೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಸುಮಾರು 90 ಸಾವಿರ ಮತದಾರರ ಹೆಸರುಗಳನ್ನು ಅಳಿಸುವಂತೆ ಅರ್ಜಿಗಳು ಬಂದಿವೆ ಎಂದು ಹೇಳಲಾಗುತ್ತಿದ್ದರೂ, ಅವುಗಳ ಪರಿಶೀಲನೆ ಮತ್ತು ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಹಾಗಿದ್ದರೆ ಮುಖ್ಯಮಂತ್ರಿ ಬಳಿ ಯಾವ ಮಾಹಿತಿ ಇದೆ? ಯಾವ ಆಧಾರದ ಮೇಲೆ ನವದೆಹಲಿಯ ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರಶ್ನಿಸಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆ ಹಾಸನ ಜಿಲ್ಲೆಯನ್ನು ದಾಟಿ ಮುಂದೆ ಸಾಗಿಲ್ಲ. 10 ಟಿಎಂಸಿ ಅಡಿ ನೀರು ತರುವುದಾಗಿ ಭರವಸೆ ನೀಡಿದ್ದವರು ಇದೀಗ ಅದನ್ನು 2 ಟಿಎಂಸಿ ಅಡಿಗೆ ಇಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ‘ಮುಂದಿನ ವರ್ಷ’ ಎಂದು ಹೇಳುತ್ತಾ ಯೋಜನೆಯನ್ನು ಮುಂದೂಡಲಾಗುತ್ತಿದೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ 100 ದಿನಗಳಲ್ಲಿ ಮಾಡಿರುವ ಸಾಧನೆಗಳೇನು ಎಂಬುದನ್ನು ಜನರ ಮುಂದೆ ಮಂಡಿಸಬೇಕು. ‘ಸಧೃಢ ಸಂಕಲ್ಪ’ದಂತಹ ಯೋಜನೆಗಳನ್ನು ಘೋಷಿಸಲಾಗಿದ್ದರೂ, ಅವುಗಳಿಗೆ ಅಗತ್ಯ ಅನುದಾನ ಮೀಸಲಿಡಲಾಗಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದರು.

ಇದೇ ವೇಳೆ ಐದು ಗ್ಯಾರಂಟಿ ಯೋಜನೆಗಳ ಬಗ್ಗೆಯೂ ಅವರು ವಾಗ್ದಾಳಿ ನಡೆಸಿದರು. ‘ಗೃಹಲಕ್ಷ್ಮಿ’ ಯೋಜನೆಯ ಸ್ಥಿತಿ ಏನಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇದೀಗ ಸರ್ಕಾರ ಹಾಲಿನ ದರ ಹೆಚ್ಚಿಸುವ ಅನಿವಾರ್ಯತೆಗೂ ಸಿಲುಕಿದೆ ಎಂದು ಹೇಳಿದರು.

ರೈತರಿಗೆ ನೀಡಬೇಕಾದ ಪರಿಹಾರ ಕ್ರಮಗಳನ್ನು ಸರ್ಕಾರ ಸರಿಯಾಗಿ ನಿರ್ವಹಿಸಬೇಕು. ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಕಾರಣಕ್ಕೆ ಬರ ಘೋಷಣೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.

ಮುಖ್ಯಮಂತ್ರಿ ಹಾಗೂ ಶಾಸಕರು ಪಕ್ಷದ ಹೈಕಮಾಂಡ್‌ನಿಂದ ಸೂಚನೆ ಪಡೆಯಲು ಅತಿಯಾದ ಸಮಯವನ್ನು ದೆಹಲಿ ಪ್ರವಾಸದಲ್ಲೇ ಕಳೆಯುತ್ತಿದ್ದಾರೆ. ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆಯೂ ಜನರಿಗೆ ತಿಳಿದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!