ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ 
ರಾಜಕೀಯ

HDK ಹೇಳಿಕೆ ಆಧಾರರಹಿತ, ರಾಜಕೀಯ ಪ್ರೇರಿತ: ‘ಸ್ಟಿಂಗ್ ಆಪರೇಷನ್‌’ ಮೂಲಕ ಸಿದ್ದು ಪದಚ್ಯುತಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು..!

ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸು ಹಾಗೂ ಜನಬೆಂಬಲ ಯಾವುದೇ ‘ರಹಸ್ಯ ಕಾರ್ಯಾಚರಣೆ’ ಅಥವಾ ಪಿತೂರಿಯನ್ನು ಅವಲಂಬಿಸಿಲ್ಲ. ಕಾಂಗ್ರೆಸ್‌ನಲ್ಲಿ ನಿರ್ಧಾರಗಳನ್ನು ಪಕ್ಷದ ನಿಗದಿತ ಪ್ರಕ್ರಿಯೆಗಳ ಮೂಲಕವೇ ಕೈಗೊಳ್ಳಲಾಗುತ್ತದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸ್ಟಿಂಗ್ ಆಪರೇಷನ್‌’ ಮೂಲಕ ಹುದ್ದೆಯಿಂದ ಕೆಳಗಿಳಿಸಲಾಯಿತು ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಕುಮಾರಸ್ವಾಮಿ ಅವರ ಹೇಳಿಕೆ ಆಧಾರರಹಿತ ಹಾಗೂ ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್‌ನಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಇಂತಹ ಆರೋಪ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸು ಹಾಗೂ ಜನಬೆಂಬಲ ಯಾವುದೇ ‘ರಹಸ್ಯ ಕಾರ್ಯಾಚರಣೆ’ ಅಥವಾ ಪಿತೂರಿಯನ್ನು ಅವಲಂಬಿಸಿಲ್ಲ. ಕಾಂಗ್ರೆಸ್‌ನಲ್ಲಿ ನಿರ್ಧಾರಗಳನ್ನು ಪಕ್ಷದ ನಿಗದಿತ ಪ್ರಕ್ರಿಯೆಗಳ ಮೂಲಕವೇ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕುಮಾರಸ್ವಾಮಿ ವಿರುದ್ಧ ತಿರುಗೇಟು ನೀಡಿದ ಅವರು, ಹಿಂದೆ ಕೇಳಿಬಂದಿರುವ ಆಡಿಯೋ ರೆಕಾರ್ಡಿಂಗ್‌ಗಳು, ಫೋನ್ ಕದ್ದಾಲಿಕೆ ಹಾಗೂ ಸ್ಟಿಂಗ್ ಆಪರೇಷನ್‌ಗಳಿಗೆ ಸಂಬಂಧಿಸಿದ ವಿವಾದಗಳನ್ನು ಉಲ್ಲೇಖಿಸಿದರು.

ಆಡಿಯೋ ರೆಕಾರ್ಡಿಂಗ್, ಫೋನ್ ಕದ್ದಾಲಿಕೆ ಮತ್ತು ಸ್ಟಿಂಗ್ ಆಪರೇಷನ್‌ಗಳಿಗೆ ಸಂಬಂಧಿಸಿದ ವಿವಾದಗಳನ್ನು ಸ್ವತಃ ಎದುರಿಸಿರುವ ಕುಮಾರಸ್ವಾಮಿ, ಇದೀಗ ಇತರರಿಗೆ ರಾಜಕೀಯ ನೈತಿಕತೆಯ ಪಾಠ ಹೇಳುತ್ತಿರುವುದು ವಿಪರ್ಯಾಸ” ಎಂದು ಹೇಳಿದರು.

ಕುಮಾರಸ್ವಾಮಿ ಅವರ ಹೇಳಿಕೆಗಳು ತಮ್ಮ ಮಿತ್ರ ಪಕ್ಷ ಬಿಜೆಪಿಯನ್ನು ಮೆಚ್ಚಿಸುವ ಹಾಗೂ ಕೇಂದ್ರ ಸರ್ಕಾರದಲ್ಲಿನ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಉದ್ದೇಶ ಹೊಂದಿವೆ ಗ್ರೆಸ್‌ನಲ್ಲಿ ಕಾಲ್ಪನಿಕ ಪಿತೂರಿಗಳನ್ನು ಸೃಷ್ಟಿಸುವ ಬದಲು ಕುಮಾರಸ್ವಾಮಿ ಮೊದಲು ತಮ್ಮದೇ ರಾಜಕೀಯ ಮನೆಯನ್ನು ಸರಿಪಡಿಸಿಕೊಳ್ಳಲಿ. ಕಾಂಗ್ರೆಸ್ ಒಗ್ಗಟ್ಟಿನಿಂದಿದ್ದು, ಇಂತಹ ಹೇಳಿಕೆಗಳ ಮೂಲಕ ಪಕ್ಷದೊಳಗೆ ವಿಭಜನೆ ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್