ಪ್ರಾತಿನಿಧಿಕ ಚಿತ್ರ 
ರಾಜಕೀಯ

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಮೂಲಗಳ ಪ್ರಕಾರ, ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ವಿ ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಹೆಸರುಗಳು ಕೇಳಿಬರುತ್ತಿವೆ.

ಬೆಂಗಳೂರು: ನವೆಂಬರ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ನಂತರ, ಬಿಜೆಪಿ ರಾಜ್ಯದಲ್ಲಿನ ತನ್ನ ಸಾಂಸ್ಥಿಕ ರಚನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಪಕ್ಷದ ಸಂಘಟನಾ ಮಟ್ಟದಲ್ಲಿ ಹಾಗೂ ವಿಧಾನಸಭೆಯಲ್ಲಿ ಈ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.

ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಬದಲಿಗೆ ಹರೀಶ್ ದ್ವಿವೇದಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಘಟಕದ ಉಸ್ತುವಾರಿಯನ್ನಾಗಿ ನೇಮಿಸಿರುವುದರಿಂದ, ಪಕ್ಷದ ಹೈಕಮಾಂಡ್ ಉನ್ನತ ಮಟ್ಟದ ಎರಡು ಹುದ್ದೆಗಳಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿದೆ. ವಿಧಾನಸಭೆಯ ವಿರೋಧ ಪಕ್ಷದ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನವೆಂಬರ್‌ನಲ್ಲಿ ಮೂರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ.

ಬಿಜೆಪಿ ಹಿರಿಯ ನಾಯಕರೊಬ್ಬರು 'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್'ಗೆ ತಿಳಿಸಿದಂತೆ, ಪಕ್ಷವು ನಾಯಕತ್ವ ಬದಲಾವಣೆಯ ಕುರಿತು ಕಳೆದ ನಾಲ್ಕು ತಿಂಗಳುಗಳಿಂದಲೂ ಚರ್ಚೆ ನಡೆಸುತ್ತಿದೆ ಮತ್ತು ಅನೇಕ ನಾಯಕರು ಆಸಕ್ತಿ ವ್ಯಕ್ತಪಡಿಸಿದ್ದಾರೆ.

'ವಿಜಯೇಂದ್ರ ಅವರ ನಾಯಕತ್ವವು ನಿರೀಕ್ಷಿತ ಫಲಿತಾಂಶಗಳನ್ನು ನೀಡುವಲ್ಲಿ ವಿಫಲವಾಗಿದೆ; ಉಪಚುನಾವಣೆಗಳಲ್ಲಿ ಪಕ್ಷವು ಹಿನ್ನಡೆ ಅನುಭವಿಸಿದೆ ಹಾಗೂ ಆಡಳಿತಾರೂಢ ಕಾಂಗ್ರೆಸ್‌ನ 'ಭ್ರಷ್ಟಾಚಾರ'ದ ವಿರುದ್ಧದ ಹೋರಾಟದಲ್ಲೂ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಹೀಗಾಗಿ, ಅಕ್ಟೋಬರ್ 23 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗಳ ನಂತರ ಈ ಬದಲಾವಣೆ ನಡೆಯುವ ನಿರೀಕ್ಷೆಯಿದೆ' ಎಂದರು.

ಮೂಲಗಳ ಪ್ರಕಾರ, ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ವಿ ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಹೆಸರುಗಳು ಕೇಳಿಬರುತ್ತಿವೆ.

ರಾಜ್ಯ ಘಟಕದ ಉಪಾಧ್ಯಕ್ಷರಾಗಿರುವ ನಿರಾಣಿ ಅವರು ಈ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನಿರಾಣಿ ಅವರಿಗೆ ಉತ್ತಮ ಒಡನಾಟವಿದ್ದು, ಇದು ಅವರಿಗೆ ಪೂರಕವಾಗಬಹುದು ಎಂದು ಮೂಲಗಳು ತಿಳಿಸಿವೆ.

ನಿರಾಣಿ ಅವರು ಮಧ್ಯ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಪ್ರಬಲ ಅಸ್ತಿತ್ವವನ್ನು ಹೊಂದಿರುವ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಆದಾಗ್ಯೂ, ಪಕ್ಷದ ಸಾಂಸ್ಥಿಕ ರಚನೆಯಲ್ಲಿ ಯಡಿಯೂರಪ್ಪ ಅವರ ಕುಟುಂಬವನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಹಿರಿಯ ವಿಧಾನ ಪರಿಷತ್ ಸದಸ್ಯರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಯಡಿಯೂರಪ್ಪ ಅವರ ಪುತ್ರ ಹಾಗೂ ಶಿವಮೊಗ್ಗದ ಸಂಸದ ಬಿವೈ ರಾಘವೇಂದ್ರ ಅವರನ್ನು ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳುವ ಮತ್ತು ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಮತ್ತೊಬ್ಬ ನಾಯಕರಿಗೆ ನೀಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಜಾತಿ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು, ವಿಧಾನಸಭೆಯಲ್ಲಿನ ಪ್ರಮುಖ ಹುದ್ದೆಯೊಂದಕ್ಕೆ ಕಾರ್ಕಳದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರನ್ನು ಪರಿಗಣಿಸುವ ಸಾಧ್ಯತೆಯಿದೆ. ಇದರೊಂದಿಗೆ, ಹೊಸ ಮುಖವೊಂದನ್ನು ನೇಮಿಸುವ ಸಾಧ್ಯತೆಯನ್ನೂ ಪಕ್ಷದ ನಾಯಕತ್ವವು ಪರಿಶೀಲಿಸುತ್ತಿದೆ ಎನ್ನಲಾಗಿದೆ.

ಒಬಿಸಿ ಸಮುದಾಯದ ನಾಯಕರಾದ ಸುನಿಲ್ ಕುಮಾರ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಪಕ್ಷದ ಹೈಕಮಾಂಡ್ ಆಸಕ್ತಿ ಹೊಂದಿದೆ. ಹಾಗೆಯೇ, ಮಲ್ಲೇಶ್ವರಂ ಕ್ಷೇತ್ರದ ಶಾಸಕ ಹಾಗೂ ಒಕ್ಕಲಿಗ ಸಮುದಾಯದವರಾದ ಡಾ. ಸಿಎನ್ ಅಶ್ವತ್ಥ ನಾರಾಯಣ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಕೆಲವು ತಿಂಗಳುಗಳಲ್ಲಿ ರಾಜ್ಯದಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಹಾಗೂ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ'ದ ವ್ಯಾಪ್ತಿಯಲ್ಲಿ ಬರುವ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆಗಳು ನಡೆಯಲಿವೆ. 2028ರ ವಿಧಾನಸಭಾ ಚುನಾವಣೆಗೆ ಮುನ್ನ ಈ ಚುನಾವಣೆಗಳಲ್ಲಿ ಗೆಲುವು ಸಾಧಿಸುವುದು ಬಿಜೆಪಿಗೆ ಮುಖ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ