ಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಪ್ರತಿಯೊಬ್ಬರ ಮತದಾನದ ಹಕ್ಕನ್ನು ಉಳಿಸುವುದು ನಮ್ಮ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್

ಈಗಾಗಲೇ ಕೆಲವರು ದೇಶದ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ದೊಡ್ಡ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹೋರಾಟ ಕಾಂಗ್ರೆಸ್ ಪಕ್ಷದ್ದು, ಸರ್ಕಾರದ್ದು ಅಂತಲ್ಲ. ನಮ್ಮದು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಹಾಗೂ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಜಾರಿಗೊಳಿಸಿದ ಪಕ್ಷ.

ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಮತವೂ ಪ್ರತಿಯೊಬ್ಬ ನಾಗರಿಕರ ಹಕ್ಕು. ಈ ಮತದಾನದ ಹಕ್ಕನ್ನು ಯಾರೂ ಕಳೆದುಕೊಳ್ಳಬಾರದು. ಎಲ್ಲವನ್ನು ಉಳಿಸಬೇಕು ಎನ್ನುವುದು ನಮ್ಮ ಸರ್ಕಾರದ ಸಂಕಲ್ಪ"ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಈಗಾಗಲೇ ಕೆಲವರು ದೇಶದ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ದೊಡ್ಡ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದರಿಂದ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿದೆ ಎನ್ನುವುದು ದೇಶದ ಪ್ರತಿಯೊಬ್ಬ ಪ್ರಜೆಯ ಅರಿವಿಗೆ ಬಂದಿದೆ. ಹೀಗಾಗಿ ದೇಶಕ್ಕೆ ದೇಶವೇ ಹೋರಾಟ ಮಾಡುತ್ತಿದೆ" ಎಂದು ಹೇಳಿದರು.

"ಈ ಹೋರಾಟ ಕಾಂಗ್ರೆಸ್ ಪಕ್ಷದ್ದು, ಸರ್ಕಾರದ್ದು ಅಂತಲ್ಲ. ನಮ್ಮದು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಹಾಗೂ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಜಾರಿಗೊಳಿಸಿದ ಪಕ್ಷ. ಹೀಗಾಗಿ, ದೇಶದ ಪ್ರತಿಯೊಬ್ಬ ಪ್ರಜೆಯ ಮತದಾನದ ಹಕ್ಕನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದೇ ಭಾವಿಸಿದ್ದೇವೆ" ಎಂದರು.

ಪ್ರಜಾಪ್ರಭುತ್ವದ ಮೂಲ ಭಾರತ. ಪ್ರಜಾಪ್ರಭುತ್ವಕ್ಕೆ ನಾಲ್ಕು ಸ್ತಂಭಗಳು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕೆ- ಮಾಧ್ಯಮ. ಈ ಆಧಾರ ಸ್ತಂಭಗಳನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಹಿಂದೆ ರಾಜರಿದ್ದರು. ಈಗ ನಾವು ಜನರ ಪ್ರತಿನಿಧಿಗಳಾಗಿದ್ದೇವೆ. ಈಗಾಗಲೇ 150 ಕ್ಕೂ ಹೆಚ್ಚು ನಿವೃತ್ತ ಐಎಎಸ್ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಮೊನ್ನೆಯಿಂದಲೇ ದೆಹಲಿಗೆ ಯಾರೂ ಕೂಡ ಕಾಲಿಡಬಾರದು ಎಂದು ಎಲ್ಲಾ ರೀತಿಯಿಂದಲೂ ನಿರ್ಬಂಧ ಹೇರಲಾಗಿದೆ. ಇಂಟರ್ ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ. ಇದು ಸರಿಯಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

"ಹೀಗಾಗಿ, ಸೋಮವಾರದಂದು ನಮ್ಮ ಪಕ್ಷದ ಎಲ್ಲಾ ಹಿರಿಯ ನಾಯಕರು, ಸಂಸತ್ ಸದಸ್ಯರು, ಸಚಿವರು, ಶಾಸಕರು ಎಲ್ಲರೂ ಸೇರಿ ಹೋರಾಟ ಹಮ್ಮಿಕೊಡಿದ್ದೇವೆ. ಅದರಲ್ಲಿ ನಾನೂ ಕೂಡ ಪಾಲ್ಗೊಳ್ಳಲಿದ್ದೇನೆ" ಎಂದರು.

"ಕೊಪ್ಪಳದ ಗವಿಮಠದ ಶ್ರೀಗಳು ಹೇಳಿದಂತೆ ಎಲ್ಲಾ ಪವರ್ ಗಳಿಗಿಂತ ನಮ್ಮ ಈ ಚಾಮುಂಡಿ ತಾಯಿಯ ಪವರ್ ಬಹಳ ಶಕ್ತಿಶಾಲಿಯಾಗಿದೆ. ಆಕೆ ನಮ್ಮನ್ನು ಕಾಪಾಡುತ್ತಾಳೆ. ನಾವು ಪವಿತ್ರವಾದ ಸ್ಥಳದಲ್ಲಿ ನಿಂತಿದ್ದೇವೆ" ಎಂದರು. ಹೋಟೆಲ್ ಒಂದರಲ್ಲಿ ಸ್ಟಿಂಗ್ ಆಪರೇಷನ್ ನಡೆಸಿದ ವ್ಯಕ್ತಿ ಹೆಸರನ್ನು ಮುಖ್ಯಮಂತ್ರಿಗಳು ಬಹಿರಂಗ ಪಡಿಸಲಿ ಎಂದು ಕುಮಾರಸ್ವಾಮಿ ಹಾಕಿದ ಸವಾಲಿನ ಬಗ್ಗೆ ಕೇಳಿದಾಗ, "ಅದಕ್ಕೆಲ್ಲಾ ಕಾಲವೇ ಉತ್ತರ ನೀಡುತ್ತದೆ" ಎಂದರು.

ಪ್ರತಿಭಟನೆಗಳ ಮೇಲಿನ ನಿರ್ಬಂಧಗಳು, ಇಂಟರ್ನೆಟ್ ಸೇವೆಗಳ ಸ್ಥಗಿತ ಮತ್ತು ರಾಜಕೀಯ ಪ್ರತಿನಿಧಿಗಳ ಬಂಧನದ ವರದಿಗಳನ್ನು ಟೀಕಿಸಿದ ಶಿವಕುಮಾರ್, "ಈ ದೇಶದಲ್ಲಿ ನಡೆಯುತ್ತಿರುವುದು ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ ಎಂಬುದಕ್ಕೆ ಪ್ರಧಾನಿ ಉತ್ತರಿಸಬೇಕು" ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ನಾಗರಿಕರಿಗೆ ಶಾಂತಿಯುತವಾಗಿ ಪ್ರತಿಭಟಿಸುವ ಮತ್ತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕಿದೆ ಎಂದು ಅವರು ಹೇಳಿದರು. "ಪ್ರತಿಭಟಿಸಲು ಅವಕಾಶವಿದೆ. ಪ್ರತಿಭಟನೆಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದರೆ, ಅಂತಹ ಆದೇಶಗಳನ್ನು ಹೊರಡಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು" ಎಂದು ಅವರು ನುಡಿದರು.

ವಿಮಾನಗಳಿಂದ ಕೆಳಗಿಳಿಸಲ್ಪಟ್ಟವರು ಸೇರಿದಂತೆ ಜನಪ್ರತಿನಿಧಿಗಳ ಬಂಧನದ ವರದಿಗಳನ್ನು ದೇಶಕ್ಕೆ ಮಾಡಿದ ಅವಮಾನ ಎಂದು ಬಣ್ಣಿಸಿದ ಶಿವಕುಮಾರ್, ಇಂತಹ ಘಟನೆಗಳು ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತದ ಅಂತರರಾಷ್ಟ್ರೀಯ ವರ್ಚಸ್ಸಿಗೆ ಕಳಂಕ ತರುತ್ತವೆ ಎಂದು ಹೇಳಿದರು.

"ಪ್ರಪಂಚದಾದ್ಯಂತ ಎಲ್ಲರೂ ಭಾರತವನ್ನು ಒಂದು ಶ್ರೇಷ್ಠ ಪ್ರಜಾಪ್ರಭುತ್ವ ಎಂದು ಪರಿಗಣಿಸುತ್ತಾರೆ, ಆದರೆ ಇಂತಹ ಕ್ರಮಗಳು ಅದರ ಚಿತ್ರಣದ ಮೇಲೆ ದೊಡ್ಡ ಕಳಂಕವನ್ನು ಉಂಟುಮಾಡುತ್ತವೆ. ದೇಶದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ" ಎಂದು ಅವರು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ