ಸಿದ್ದರಾಮಯ್ಯ, ಯತ್ನಾಳ್ 
ರಾಜಕೀಯ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಸ್ಟಿಂಗ್ ಮಾಡಲಾಗಿದೆ ಎಂಬ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್ ಅವರು, ಕುಮಾರಸ್ವಾಮಿ ಬಳಿ ಬಹಳ ಮಾಹಿತಿಯಿದೆ.

ವಿಜಯಪುರ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ತೀವ್ರ ಸಂಚಲನ ಸೃಷ್ಟಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಡಿ ತೋರಿಸಿ ಅವರ ರಾಜೀನಾಮೆ ಪಡೆಯಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಅವರು ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಸ್ಟಿಂಗ್ ಮಾಡಲಾಗಿದೆ ಎಂಬ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್ ಅವರು, ಕುಮಾರಸ್ವಾಮಿ ಬಳಿ ಬಹಳ ಮಾಹಿತಿಯಿದೆ. ಅವರು ಯಾವ ಹೋಟೆಲ್​ನಲ್ಲಿದ್ದರು, ಎಲ್ಲಿ ಊಟ ಮಾಡಿದರು, ಎಷ್ಟು ಹಣ ಕೊಟ್ಟರು ಸೇರಿ ಎಲ್ಲ ಎಚ್​ಡಿಕೆ ಬಳಿಯಿವೆ. ಅದನ್ನೆಲ್ಲಾ ಹಿಡಿದು ಬಿಟ್ಟು ಮಾಡುವ ಬದಲು ಎಲ್ಲವನ್ನೂ ಬಹಿರಂಗ ಮಾಡಬೇಕು. ದೊಡ್ಡ ಸ್ಕ್ರೀನ್​ನಲ್ಲಿ ಹಾಕಿ ಜನರಿಗೆ ತೋರಿಸಬೇಕು. ಆಗ ಎಷ್ಟು ಹಲ್ಕಾ ಕೆಲಸ ಮಾಡುತ್ತಾರೆಂದು ಜನರಿಗೆ ಗೊತ್ತಾಗುತ್ತದೆ ಎಂದರು.

ಇನ್ನು ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸುವ ಹಿಂದಿನ ದಿನ ಮಧ್ಯರಾತ್ರಿವರೆಗೆ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ. ಅಹಿಂದ ನಾಯಕ ನೀವೇ, ದೊಡ್ಡ ನಾಯಕ ಎಂದು ರಾಹುಲ್ ಹೇಳಿದ್ದಾರೆ. ಆದರೆ ಆ ಬಳಿಕ ಪ್ರಿಯಾಂಕಾ ಗಾಂಧಿ, ಸೋನಿಯಾ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯಗೂ ಸಿಡಿ ತೋರಿಸಿ ರಾಜೀನಾಮೆ ನೀಡುವಂತೆ ಹೇಳಿದ್ದರಂತೆ. ಇಂತಹ ಕೆಲಸ ಮಾಡಿದವರನ್ನು ಯಾವುದೇ ದೊಡ್ಡ ಹುದ್ದೆಯಲ್ಲಿದ್ದರೂ ವಜಾ ಮಾಡಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರನ್ನೂ ಅದೇ ಟೀಂ ಇಡಿಗೆ ಸಿಲುಕಿಸಿದೆ. ಸಿಎಂ ಸ್ಟಿಂಗ್ ಬಗ್ಗೆ ಹುಷಾರಾಗಿರಬೇಕೆಂದು ಹೇಳುತ್ತಾರೆ. ಹಾಗಾದ್ರೆ ಸ್ಟಿಂಗ್ ಆಪರೇಷನ್ ಮಾಡಿದ್ದು ಸಿಎಂಗೆ ಹೇಗೆ ಗೊತ್ತಾಯ್ತು? ಎಂದು ಯತ್ನಾಳ್​​ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ