ಪ್ರಿಯಾಂಕ್ ಖರ್ಗೆ 
ರಾಜಕೀಯ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವುದಕ್ಕೆ, ನ್ಯಾಯಕ್ಕಾಗಿ ಧ್ವನಿ ಎತ್ತುವುದಕ್ಕೆ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚಾರಿತ್ರ್ಯ ಹರಣ ಮಾಡುತ್ತಿರುವವರು ಯಾರು?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಷ್ಠೆಗೆ ಧಕ್ಕೆ ತರುವ ಸಂಚು ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದ ಸಿಬಿಐ ತನಿಖೆಯ ಬೇಡಿಕೆಯನ್ನು ತಳ್ಳಿಹಾಕಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಸ್ಟಿಂಗ್‌ ಆಪರೇಷನ್‌ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸುವುದು ತಪ್ಪೇ? ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ? ಎಂದು ಪ್ರಶ್ನಿಸಿದೆ.

ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವುದು? ನ್ಯಾಯಕ್ಕಾಗಿ ಧ್ವನಿ ಎತ್ತಲು ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚಾರಿತ್ರ್ಯ ಹರಣ ಮಾಡುತ್ತಿರುವವರು ಯಾರು? ಅವರ ವಿರುದ್ಧ ಸ್ಟಿಂಗ್‌ ಮಾಡಿದ ಆ ಮಹಾನಾಯಕ ಯಾರು? ಅವರ ಹೆಸರನ್ನು ಬಹಿರಂಗ ಪಡಿಸಲು ನಿಮ್ಮ ಕಾಂಗ್ರೆಸ್ ಸರ್ಕಾರ ಯಾಕೆ ಮೀನಾಮೇಷ ಎಣಿಸುತ್ತಿದೆ?

ನೀವು ಚಿತ್ತಾಪುರದಲ್ಲಿ ಗೆಲ್ಲಲು, ಗೃಹ ಸಚಿವರಾಗಲು ಸಿದ್ದರಾಮಯ್ಯರ ದುಡಿಮೆ ಇದೆ ಎನ್ನುವುದನ್ನು ಮರೆತು ಬಿಟ್ಟಿರಾ? ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಕಾರಣ ಏನು ಎಂಬುದನ್ನು ಬಹಿರಂಗ ಪಡಿಸುವ ಧೈರ್ಯ ನಿಮಗಿದೆಯೇ ಪ್ರಿಯಾಂಕ್‌ ಖರ್ಗೆ?

ಸ್ಟಿಂಗ್‌ ಆಪರೇಷನ್‌ ಬಗ್ಗೆ ಇಡೀ ದೇಶವೇ ಮಾತಾಡುತ್ತಿದೆ. ಗಳ ಮುಂದೆ ನಿಮ್ಮ ಒಣ ಪೌರುಷ ತೋರಿಸುವುದನ್ನು ಬಿಡಿ. ರಾಜ್ಯದ ಗೃಹ ಸಚಿವರಾಗಿ ಈ ಬಗ್ಗೆ ಬಾಯಿ ತೆರೆಯದೇ ಏಕೆ ಮೌನವಾಗಿದ್ದೀರಿ? ಸ್ಟಿಂಗ್‌ ಆಪರೇಷನ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಯಾಕೆ ಹೆದರಿಕೆ? ತಮ್ಮ ಸರ್ಕಾರದ ಹಾಗೂ ಮಹಾನಾಯಕನ ಬಂಡವಾಳ ಹೊರಗೆ ಬರುತ್ತದೆ ಎಂಬ ಭಯವೇ? ಎಂದು ಸರಣಿ ಪ್ರಶ್ನೆಗಳನ್ನು ಮಾಡಿದೆ.

ಇದೇ ವೇಳೆ ಸಿದ್ದಾರ್ಥ ಟ್ರಸ್ಟ್‌ಗೆ ಸಿಎ ನಿವೇಶನ ತೆಗೆದುಕೊಳ್ಳಲು ಇದ್ದ ನಿಮ್ಮ ಆತುರತೆ, ಸಿದ್ದರಾಮಯ್ಯರ ವರ್ಚಸ್ಸಿಗೆ ಮಸಿ ಬಳಿಯುತ್ತಿರುವಾಗ ಅವರಿಗೆ ನ್ಯಾಯ ಕೊಡಿಸಲು ಇಲ್ಲದಿರುವುದು ದುರಂತ ಎಂದೂ ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ