ಸಿದ್ದರಾಮಯ್ಯ 
ರಾಜಕೀಯ

ಕಾಂಗ್ರೆಸ್‌ನಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು: ಸಿದ್ದರಾಮಯ್ಯರನ್ನು ಇಂತಹ ಸ್ಥಿತಿಗೆ ತಳ್ಳಬಾರದಿತ್ತು, ಕೋಟಿ ಕೋಟಿ ಹಣ ಎಲ್ಲಿಂದ ಬಂತು..?

ಈ ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರು ಎಂಬ ಸತ್ಯ ಹೊರಬಂದರೆ ದೊಡ್ಡ ಕೋಲಾಹಲವೇ ಸೃಷ್ಟಿಯಾಗಲಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲಿನ ನಂಬಿಕೆ ಕಳೆದುಹೋಗಲಿದೆ. ಜನರೇ ಇಡೀ ಪಕ್ಷವನ್ನು ದೂರ ತಳ್ಳಲಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವಿರುದ್ಧ ನಡೆದಿದೆಯೆನ್ನಲಾದ ಸ್ಟಿಂಗ್ ಆಪರೇಷನ್‌ಗೆ ಹಣಕಾಸು ಒದಗಿಸಿದ ಮೂಲದ ಬಗ್ಗೆ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಈ ಸ್ಟಿಂಗ್ ಆಪರೇಷನ್ ನಡೆಸಲು ಸುಮಾರು 10ರಿಂದ 15 ಕೋಟಿ ರೂ. ಖರ್ಚು ಮಾಡಲಾಗಿದೆ. “ಈ ಕಪ್ಪುಹಣ ಎಲ್ಲಿಂದ ಬಂತು? ಯಾರ ಹಣವನ್ನು ಲೂಟಿ ಮಾಡಲಾಗಿದೆ? ಈ ಎಲ್ಲ ವಿಚಾರಗಳು ಬಹಿರಂಗವಾಗಲು ತನಿಖೆ ನಡೆಸಬೇಕು. ತನಿಖೆಯ ಮೂಲಕ ಸತ್ಯ ಹೊರಬರಬೇಕು. ಇಲ್ಲದಿದ್ದರೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಗುಪ್ತಚರ ಇಲಾಖೆ ಮುಖ್ಯಮಂತ್ರಿಯವರ ಅಧೀನದಲ್ಲಿರುವುದರಿಂದ ಯಾವುದೇ ವಿಳಂಬವಿಲ್ಲದೆ ತನಿಖೆಗೆ ಆದೇಶಿಸಬೇಕು. ಈ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿಲ್ಲ. ಕಾಂಗ್ರೆಸ್‌ನ ಕೆಲ ನಾಯಕರು ಸಿದ್ದರಾಮಯ್ಯ ಅವರ ಪರವಾಗಿದ್ದರೆ, ಇನ್ನು ಕೆಲವರು ವಿರೋಧವಾಗಿದ್ದಾರೆ. ಮತ್ತೊಂದಷ್ಟು ನಾಯಕರು ತಟಸ್ಥ ನಿಲುವು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರು ಎಂಬ ಸತ್ಯ ಹೊರಬಂದರೆ ದೊಡ್ಡ ಕೋಲಾಹಲವೇ ಸೃಷ್ಟಿಯಾಗಲಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲಿನ ನಂಬಿಕೆ ಕಳೆದುಹೋಗಲಿದೆ. ಜನರೇ ಇಡೀ ಪಕ್ಷವನ್ನು ದೂರ ತಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಇಂತಹ ಪರಿಸ್ಥಿತಿಗೆ ಸಿಲುಕಿಸಬಾರದಿತ್ತು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lehra Do Tiranga ಮೆರವಣಿಗೆ: CEC ರಾಜೀನಾಮೆ ಆಗ್ರಹಿಸಿ ದೆಹಲಿಯಲ್ಲಿ ಹೈಡ್ರಾಮಾ; ಪ್ರತಿಭಟನೆಗೂ ಮುನ್ನ ವಶಕ್ಕೆ ಪಡೆದಿದ್ದ ನೆಹಾ ಬೋರಾ ಬಿಡುಗಡೆ, ಅಭಿಜೀತ್ ದೀಪ್ಕೆಗಿಲ್ಲ ರಿಲೀಫ್..!

BJP ಹಿರಿಯ ನಾಯಕ ಎಲ್‌ಕೆ ಅಡ್ವಾಣಿಗೆ ಅನಾರೋಗ್ಯ; ದೆಹಲಿ ಅಪೋಲೋ ಆಸ್ಪತ್ರೆಗೆ ದಾಖಲು..!

Sting operation ವಿವಾದ: ‘ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ’ ಎಂದ ಡಿಕೆಶಿ, ಗೃಹ ಸಚಿವರ ಜೊತೆ ಮಹತ್ವದ ಚರ್ಚೆ, ಪ್ರಿಯಾಂಕ್ ಖರ್ಗೆ ಹೆಗಲಿಗೆ ತನಿಖೆ ಜವಾಬ್ದಾರಿ..!

ಸ್ಟಿಂಗ್ ಆಪರೇಷನ್ ವಿಚಾರ ಪ್ರಸ್ತಾಪಿಸಿದ್ದು ಡಿಕೆ.ಶಿವಕುಮಾರ್, ತನಿಖೆಯಾಗದಿದ್ದರೆ ಅವರ ಮೇಲೆಯೇ ಅನುಮಾನ: ಸಂಸದ ಬೊಮ್ಮಾಯಿ

'ಅನಗತ್ಯ, ಮಾಹಿತಿ ರಹಿತ': SIR ಕುರಿತು ಭಾರತದ ವಿರುದ್ಧ ಅಮೆರಿಕ ಸಂಸದೆಯ ವಾಗ್ದಾಳಿ ಖಂಡಿಸಿದ ವಿದೇಶಾಂಗ ಸಚಿವಾಲಯ!