ಕುಮಾರಸ್ವಾಮಿ - ಸಿದ್ದರಾಮಯ್ಯ 
ರಾಜಕೀಯ

ನಾನೇ ವಿಡಿಯೋ ಮಾಡಿದ್ದೇನೆಂದು ಕಿಂಗ್ ಪಿನ್ ಹೇಳಿದ್ದಾರೆ; ಇದನ್ನೆಲ್ಲ ನೋಡಿ ಸಿದ್ದರಾಮಯ್ಯ ರಕ್ತ ಕುದಿಯುತ್ತಿಲ್ವಾ?: HDK

ಈ ಸಂಬಂಧ ಗುರುವಾರ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಧರಣಿ ನಡೆಸಿದ್ದ ಕುಮಾರಸ್ವಾಮಿ ಅವರು, ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ, ಸ್ಟಿಂಗ್‌ ಆಪರೇಷನ್‌ ರೂವಾರಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ 'ಸ್ಟಿಂಗ್' ಆಪರೇಷನ್ ಗೆ ಸಂಬಂಧಿಸಿದಂತೆ ಜೆಡಿ(ಎಸ್) ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಸ್ಟಿಂಗ್ ಆಪರೇಷನ್​ ಕಿಂಗ್​ಪಿನ್ ಬಂಧಿಸುವಂತೆ ಶನಿವಾರ ಆಗ್ರಹಿಸಿದ್ದಾರೆ.

ಈ ಸಂಬಂಧ ಗುರುವಾರ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಧರಣಿ ನಡೆಸಿದ್ದ ಕುಮಾರಸ್ವಾಮಿ ಅವರು, ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ, ಸ್ಟಿಂಗ್‌ ಆಪರೇಷನ್‌ ರೂವಾರಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎರಡು ದಿನಗಳಲ್ಲಿ ಮುಖ್ಯ ಆರೋಪಿ ಬಂಧಿಸುವಂತೆ ಕುಮಾರಸ್ವಾಮಿ ನೀಡಿದ್ದ ಡೆಡ್​ಲೈನ್ ಇಂದು ಅಂತ್ಯವಾಗಿದೆ. ಹೀಗಾಗಿ ಮತ್ತೊಂದು ಸುತ್ತಿನ ಸಮರ ಸಾರಿದ ಕುಮಾರಸ್ವಾಮಿ, ಇಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿ ಕಚೇರಿಗೆ ಪಾದಯಾತ್ರೆ ಮೂಲಕ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಫ್ರೀಡಂಪಾರ್ಕ್​ ಬಳಿಯೇ ಪೊಲೀಸರು ಕುಮಾರಸ್ವಾಮಿ ಅವರನ್ನು ತಡೆದಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಭಾರೀ ಹೈಡ್ರಾಮಾವೇ ನಡೆಯಿತು.

ಅಂತಿಮವಾಗಿ ಪೊಲೀಸ್ ಮಹಾ ನಿರ್ದೇಶಕ ಎಂಎ ಸಲೀಂ ಅವರನ್ನು ಭೇಟಿಯಾದ ಕುಮಾರಸ್ವಾಮಿ, ಸ್ಟಿಂಗ್ ಷಡ್ಯಂತ್ರ ನಡೆಸಿದವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಇದೇ ವೇಳೆ ಅನಾವಶ್ಯಕವಾಗಿ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸೂತ್ರಧಾರಿಯನ್ನು ಬಂಧಿಸದೆ, ಇನ್ಯಾರನ್ನೋ ಬಂಧಿಸಿ ಸರ್ಕಾರ ಕಳ್ಳಾಟ ಆಡುತ್ತಿದೆ. ತಕ್ಷಣವೇ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ನಾನೇ ವಿಡಿಯೋ ಮಾಡಿದ್ದೇನೆಂದು ಕಿಂಗ್ ಪಿನ್ ಹೇಳಿದ್ದಾರೆ. ಇದನ್ನೆಲ್ಲ ನೋಡಿ ಸಿದ್ದರಾಮಯ್ಯ ಅವರ ರಕ್ತ ಕುದಿಯುತ್ತಿಲ್ವಾ? ಸಿದ್ದರಾಮಯ್ಯ ಅವರು ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಮತ್ತು ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ!

ರಾಜಕೀಯವಾಗಿ ಸಿದ್ದರಾಮಯ್ಯರನ್ನು ಮುಗಿಸಿದರೆ ಕೆಲವರ ಹಾದಿ ಸುಲಭ: 'ಸ್ಟಿಂಗ್' ಹಿಂದಿನ ಲೆಕ್ಕಾಚಾರ ಬಿಚ್ಚಿಟ್ಟ ಎಚ್‌ ವಿಶ್ವನಾಥ್!

ಮುಖ್ಯಮಂತ್ರಿಯೂ ಬಲಿಪಶುವಾಗಿರಬಹುದು, ರಾಜಕೀಯ ನಾಯಕತ್ವ ನಿಯಂತ್ರಣಕ್ಕೆ 'ಸ್ಟಿಂಗ್ ಆಪರೇಷನ್' ವಿಡಿಯೋ ಬಳಕೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

'ಲಕ್ಷಾಂತರ ರೂ. ಕೊಟ್ಟು ಕರೆಸಿದರೆ 15 ನಿಮಿಷದಲ್ಲೇ ವೇದಿಕೆ ಬಿಟ್ಟು ಹೋದ್ಲು': ನಟಿ ಅಂಜಲಿ ವಿರುದ್ಧ ಆಯೋಜಕರ ಕಾನೂನು ಕ್ರಮ ಎಚ್ಚರಿಕೆ!

ರಾಯಚೂರು ಬಳಿ ಟ್ರಕ್ ಪಲ್ಟಿ; ಗಾಯಗೊಂಡವರಿಗೆ ನೆರವಾಗುವ ಬದಲು 15 ನಿಮಿಷದಲ್ಲಿ ಇಡೀ ಲಾರಿ ಈರುಳ್ಳಿ ದೋಚಿದ ಜನ!