ಬೆಂಗಳೂರು/ಧಾರವಾಡ: ಬಿಜೆಪಿ ಹುಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ಮಾಡಿದ್ದು ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಯಾರೂ ಶಾಶ್ವತ ಮಿತ್ರರಲ್ಲ ಎಂಬುದು ಸಾಬೀತಾಗಿದೆ. ಧಾರವಾಡದ ಛಬ್ಬಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಉಭಯ ನಾಯಕರು ಪರಸ್ಪರ ಭೇಟಿಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಕು ಆರೋಪಗಳ ಮೇಲೆ ಆರೋಪ ಮಾಡಿದ್ದರಿಂದ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು. ವಿನಾಕಾರಣ ಆರೋಪಗಳನ್ನು ಮಾಡಬೇಡಿ ಎಂದು ಪಕ್ಷ ಹಲವು ಬಾರಿ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿತ್ತು. ಆದರೆ ಈ ನೋಟಿಸ್ ಗಳಿಗೆ ಸುಮ್ಮನಾಗದ ಯತ್ನಾಳ್ ಅವರು, ನಂತರ ಬಹಿರಂಗವಾಗಿಯೇ ಬಿಎಸ್ವೈ ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಿದ್ದರು.