ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ; ಜ್ಞಾನೇಶ್ ಕುಮಾರ್ ವಜಾಗೊಳಿಸಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, "ನೀವು ಸಂವಿಧಾನಕ್ಕಿಂತ ದೊಡ್ಡವರೇ?" ಎಂದು ಪ್ರಶ್ನಿಸಿದರು ಮತ್ತು ಸರ್ಕಾರವು ಚುನಾವಣಾ ಆಯುಕ್ತರನ್ನು ಹೊಣೆಗಾರಿಕೆಯಿಂದ ರಕ್ಷಿಸುತ್ತಿದೆ ಎಂದು ಆರೋಪಿಸಿದರು.

ಕಲಬುರಗಿ: ನರೇಂದ್ರ ಮೋದಿ ಸರ್ಕಾರವು ಚುನಾವಣಾ ಆಯೋಗದ(EC) ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣಾ ಆಯುಕ್ತರಿಗೆ ಕಾನೂನು ರಕ್ಷಣೆ(immunity) ನೀಡುವ 2023ರ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಬುಧವಾರ ಆಗ್ರಹಿಸಿದ್ದಾರೆ. ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿಬೇಕು ಹಾಗೂ ಮತ್ತೆ ಮತಪತ್ರ (ballot papers) ಪದ್ಧತಿಗೆ ಮರಳಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, "ನೀವು ಸಂವಿಧಾನಕ್ಕಿಂತ ದೊಡ್ಡವರೇ?" ಎಂದು ಪ್ರಶ್ನಿಸಿದರು ಮತ್ತು ಸರ್ಕಾರವು ಚುನಾವಣಾ ಆಯುಕ್ತರನ್ನು ಹೊಣೆಗಾರಿಕೆಯಿಂದ ರಕ್ಷಿಸುತ್ತಿದೆ ಎಂದು ಆರೋಪಿಸಿದರು.

'ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ(ನೇಮಕಾತಿ, ಸೇವೆಯ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ, 2023' ಅನ್ನು ಉಲ್ಲೇಖಿಸಿದ ಖರ್ಗೆ, "ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡಲು ನೀವು ತಂದಿರುವ ಕಾನೂನನ್ನು ರದ್ದುಗೊಳಿಸಿ" ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಈ ಕಾಯ್ದೆಯು, ಚುನಾವಣಾ ಆಯುಕ್ತರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಾಗ ಕೈಗೊಂಡ ಕ್ರಮಗಳು ಅಥವಾ ಆಡಿದ ಮಾತುಗಳಿಗೆ ಸಂಬಂಧಿಸಿದಂತೆ, ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ಅವರಿಗೆ ರಕ್ಷಣೆ ನೀಡುತ್ತದೆ.

"ಚುನಾವಣೆಗಳು ನಿಷ್ಪಕ್ಷಪಾತವಾಗಿ ಮತ್ತು ನ್ಯಾಯಯುತವಾಗಿ ನಡೆದರೆ, ಯಾರೇ ಗೆಲ್ಲಲಿ, ನಮಗೆ ಅಭ್ಯಂತರವಿಲ್ಲ. ಕಾಂಗ್ರೆಸ್ ಪಕ್ಷವೇ ಗೆಲ್ಲಬೇಕು ಅಥವಾ ನಿರ್ದಿಷ್ಟ ಪಕ್ಷವೊಂದೇ ಗೆಲ್ಲಬೇಕು ಎಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ," ಎಂದು ಅವರು ಹೇಳಿದರು.

ಯಾವುದೇ ವ್ಯಕ್ತಿ ಅಥವಾ ಪಕ್ಷಕ್ಕಾಗಿ ಅಲ್ಲ, ಬದಲಾಗಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಕಾಪಾಡಲು ವಿರೋಧ ಪಕ್ಷಗಳು ಹೋರಾಡುತ್ತಿವೆ ಎಂದು ಅವರು ಪ್ರತಿಪಾದಿಸಿದರು.

ಪ್ರಧಾನಿ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರು ಬರೆದ ಪತ್ರಗಳಿಗೆ ಅವರು ನೇರವಾಗಿ ಉತ್ತರಿಸದೆ, ಬೇರೆಯವರ ಮೂಲಕ ಉತ್ತರ ಕೊಡಿಸುತ್ತಿದ್ದಾರೆ ಎಂದು ಖರ್ಗೆ ಟೀಕಿಸಿದರು.

ಮೋದಿ ಅವರಿಗೆ ತಾವು ಬರೆದ ಪತ್ರಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೀಡಿರುವ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಖರ್ಗೆ, ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳದ ಹೊರತು, ಇಂತಹ ಉತ್ತರಗಳಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಅವರು ಹೇಳಿದರು.

"ನೀವು ಏಕಪಕ್ಷೀಯವಾಗಿ ಅಥವಾ ನಿರಂಕುಶವಾಗಿ ವರ್ತಿಸಲು ನಿರ್ಧರಿಸಿದ್ದರೆ, ಈ ದೇಶದ ಜನ ಸುಮ್ಮನೆ ಕೂರುವುದಿಲ್ಲ. ಅವರು ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ" ಎಂದು ಅವರು ಖರ್ಗೆ ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ; ಮೈಸೂರು ಪೇಟ ಧರಿಸಿ ನಂದಿಧ್ವಜ ಪೂಜೆ ನೆರವೇರಿಸಿದ ಸಿಎಂ; Live Video

ಕುಮಾರಸ್ವಾಮಿ ಪರವಾಗಿ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ ಕರಾವಳಿಯ ಜನತೆ, ಬ್ಯಾನರ್ ವೈರಲ್!

ರಾಹುಲ್ ಗಾಂಧಿ ವಿದೇಶ ಪ್ರವಾಸದ ಬಗ್ಗೆ ಹೇಳಲು ನಾನು 'ಟ್ರಾವೆಲ್ ಏಜೆಂಟ್ ಅಲ್ಲ': ನನ್ನನ್ನು ಕೇಳುವುದರಲ್ಲಿ ಅರ್ಥವಿಲ್ಲ; ಶಶಿ ತರೂರ್ ಆಕ್ರೋಶ

‘Expiry Date'ಮುಗಿಯುತ್ತಾ ಬಂದಿದೆ: ಪಿಎಂ-ದಕ್ಷ್ ಯೋಜನೆ ಅನುಷ್ಟಾನದಲ್ಲಿ ಲೋಪದ ಆರೋಪ,ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ: ಗಜಪಡೆಗೆ ಸಿಂಗಾರ, ಅಂಬಾರಿ ಹೊರಲು ಪ್ರಶಾಂತ ಸಜ್ಜು