ಪ್ರದೀಪ್ ಈಶ್ವರ್ ಹಾಗೂ ಸಚಿವ ನರೇಂದ್ರಸ್ವಾಮಿ 
ರಾಜಕೀಯ

ದಲಿತರು ದೇಶಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ, ಆ ಸಮುದಾಯದ ಸಚಿವರನ್ನು ತಡೆದದ್ದು ಖಂಡನೀಯ: ಪ್ರದೀಪ್ ಈಶ್ವರ್ ಆಕ್ರೋಶ

ಇದೀಗ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ದಲಿತ ಸಮುದಾಯದ ಮೂವರು ಸಚಿವರ ಪರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೇಳೆ ಪೊಲೀಸರ್ ಅಧಿಕಾರಿಯೊಬ್ಬರು ದಲಿತ ಸಮುದಾಯದ ಮೂವರು ಸಚಿವರನ್ನು ತಡೆದ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದೀಗ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ದಲಿತ ಸಮುದಾಯದ ಮೂವರು ಸಚಿವರ ಪರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ದಲಿತ ಸಮುದಾಯದ ಸಚಿವರ ಪರವಾಗಿ ಧ್ವನಿ ಎತ್ತಿರುವ ಪ್ರದೀಪ್ ಈಶ್ವರ್ ಅವರು, ದಲಿತ ಸಮುದಾಯದ ಹಿರಿಯ ಸಚಿವರಾದ ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ ಮತ್ತು ಬಸವಂತಪ್ಪ ಅವರನ್ನು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬ ನಿನ್ನೆ ನಡೆದ ದಸರಾ ಕಾರ್ಯಕ್ರಮದಲ್ಲಿ ತಡೆದಿದ್ದಾರೆ. ಇದು ಖಂಡಿತವಾಗಿಯೂ ಬೇಸರದ ಸಂಗತಿ. ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ರಾಜ್ಯ ಸರ್ಕಾರ ಹಾಗೂ ನಮ್ಮ ಮುಖ್ಯಮಂತ್ರಿಗಳಲ್ಲಿ ವಿನಂತಿಸುತ್ತೇನೆ, ದಯವಿಟ್ಟು ಆ ಪೊಲೀಸ್ ಅಧಿಕಾರಿಯ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿಸುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ದಲಿತ ಸಮುದಾಯವು ನಮ್ಮ ನಾಡಿಗೆ ಮತ್ತು ದೇಶಕ್ಕೆ ನೀಡಿರುವ ಕೊಡುಗೆ ಅದ್ಭುತವಾದದ್ದು. ನಾನೊಬ್ಬ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಕ್ತನಾಗಿ, ಅನುಯಾಯಿಯಾಗಿ, ದಲಿತರ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದೇನೆ. ದಯವಿಟ್ಟು ನಮ್ಮ ಸರ್ಕಾರವನ್ನು ಮತ್ತೊಮ್ಮೆ ವಿನಂತಿಸುತ್ತೇನೆ, ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ ಎಂದು ಪ್ರದೀಪ್ ಈಶ್ವರ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಅರೇಬಿಯಾ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರ ಸಾವು, 8 ಮಂದಿಗೆ ಗಾಯ..!

ಮೈಸೂರು ದಸರಾ ಜಂಬೂಸವಾರಿ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ! ICUನಲ್ಲಿ ಸಾವು-ಬದುಕಿನ ಹೋರಾಟ!

ರೂ. 500 ಕೋಟಿ ವಿವಾದ: ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ ಜಾರಂಗೆ! ಡೀಲ್ ನಿರಾಕರಿಸಿದ ಶಿಂಧೆ

ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಹರಕೆ ತೀರಿಸಲು ಮುಂಬೈಗೆ ಬಂದಿದ್ದ ಮಹಿಳೆ! ಕುಟುಂಬ ಹೇಳಿದ್ದೇನು?

1st T20I: ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್: ಹ್ಯಾಗ್ಲೇ ಓವಲ್ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಕಿವೀಸ್!