ರಾಕೇಶ್ ಶೆಟ್ಟಿ  
ರಾಜಕೀಯ

ಸ್ಟಿಂಗ್ ಆಪರೇಷನ್ ಕೇಸ್: ವಿಚಾರಣೆಗೆ ರಾಕೇಶ್ ಶೆಟ್ಟಿ ವಶಕ್ಕೆ ಪಡೆದು ಬಿಡುಗಡೆ

ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆ ನಡೆಸಿ ಬಳಿಕ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹಾಜರಾಗುವಂತೆ ಅವರಿಗೆ ನೋಟಿಸ್ ಕೂಡ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದಂತೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತಿರುವ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.

ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆ ನಡೆಸಿ ಬಳಿಕ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹಾಜರಾಗುವಂತೆ ಅವರಿಗೆ ನೋಟಿಸ್ ಕೂಡ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಿರೀಕ್ಷಣಾ ಜಾಮೀನಿಗೆ ಅರ್ಜಿ

ಕಳೆದ ಒಂದು ವಾರದಿಂದ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸುತ್ತಿದ್ದ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ರಾಕೇಶ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ರಾಕೇಶ್ ಶೆಟ್ಟಿಯನ್ನು ಮೊನ್ನೆ ಬುಧವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದು, ನಿನ್ನೆ ಗುರುವಾರ ಮುಂಜಾನೆ ಬೆಂಗಳೂರಿಗೆ ಕರೆ ತಂದಿದ್ದಾರೆ.

ಸ್ಟಿಂಗ್ ಆಪರೇಷನ್ ಪ್ರಕರಣದ ಪ್ರಮುಖ ಆರೋಪಿ ರಾಕೇಶ್ ಶೆಟ್ಟಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷಕರಿಗೆ ದೂರು ಸಲ್ಲಿಸಿದ್ದರು.

ರಾಕೇಶ್ ಶೆಟ್ಟಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸಿಸಿಹೆಚ್ ನ್ಯಾಯಾಲಯವು ಇಂದಿಗೆ ಮುಂದೂಡಿದೆ.

ಟಿಬೆಟ್‌ನಲ್ಲಿ ಪ್ರಬಲ ಭೂಕಂಪ: ನೂರಾರು ಮನೆಗಳು ಧರಾಶಾಹಿ; ಕನಿಷ್ಟ 16 ಮಂದಿ ಸಾವು, 54ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

ಇಸ್ರೋದ ಉಪಗ್ರಹ ಉಡಾವಣೆ ವೈಫಲ್ಯಕ್ಕಿಂತ ಕಾಂಗ್ರೆಸ್ ನಾಯಕನ ರೀ ಲಾಂಚ್ ಫೈಲ್ಯೂರ್ ಹೆಚ್ಚಾಗಿದೆ : ಪ್ರಧಾನಿ ಮೋದಿ ವ್ಯಂಗ್ಯ; Video

ರಾಜ್ಯದಲ್ಲಿ ಭೀಕರ ಬರ: 62,481 ಕೋಟಿ ರೂ. ಬೆಳೆ ನಷ್ಟ, ನೆರವು ಕೋರಿ ಪ್ರಧಾನಿ ಮೋದಿಗೆ DCM ಪರಮೇಶ್ವರ್ ಪತ್ರ

Namma Metro ಪ್ರಯಾಣಿಕರಿಗೆ Good News: ಮುಂದಿನ 4-5 ದಿನಗಳಲ್ಲಿ Pink Line ಮೆಟ್ರೋ ಸಂಚಾರಕ್ಕೆ ಅನುಮತಿ ಸಾಧ್ಯತೆ..!

ನೀನು ಹುಟ್ಟಿದ ತಕ್ಷಣ ಸೂಟು-ಬೂಟು ಹಾಕಿ ಕಾನ್ವೆಂಟ್ ಗೆ ಕಳ್ಸಿದ್ದು ನಿಮ್ಮಪ್ಪ: ಹರಿದ ಚಡ್ಡಿಯಲ್ಲೇ ಶಾಲೆಗೆ ಹೋಗುತ್ತಿದ್ದ ನನ್ನಂಥ ಬಡವನನ್ನ ಎಂಎಲ್ಎ ಮಾಡಿದ್ದು HDK!