ಹೆಚ್ ಡಿ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್  
ರಾಜಕೀಯ

'ಸ್ಟಿಂಗ್ ಆಪರೇಷನ್ ಮಾಡಿದ್ದು ಯಾರು, ಏಕೆ ಮಾಡಿದ್ರು ಎಂದು ನಾನು ಸಿಎಂ ಡಿಕೆಶಿ ಕೇಳಲು ಬಯಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ; Video

ಮಾಧ್ಯಮದ ಹೆಸರಿನಲ್ಲಿ ವಾಹಿನಿಯೊಂದನ್ನು ನಡೆಸುತ್ತಿರುವ ವ್ಯಕ್ತಿಯೊಬ್ಬರು ಕಾಂಗ್ರೆಸ್ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಹೇಗೆ ಮುಂದುವರಿಯಬೇಕು ಎಂಬ ಬಗ್ಗೆ ಮಾಹಿತಿ ಪಡೆಯಲು ಮುಖ್ಯಮಂತ್ರಿಯನ್ನು ಪದೇಪದೇ ಭೇಟಿಯಾಗುತ್ತಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿನ್ನೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಂದೆ ಸ್ಟಿಂಗ್ ಆಪರೇಷನ್ ವಿಚಾರವನ್ನು ಪದೇಪದೇ ಪ್ರಸ್ತಾಪಿಸುವ ಮೂಲಕ ಜೆಡಿಎಸ್ ಅನಗತ್ಯವಾಗಿ ಕಾಂಗ್ರೆಸ್ ನಾಯಕರ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ವಿಚಾರದಲ್ಲಿ ಜೆಡಿಎಸ್ ಪಕ್ಷವನ್ನೇ ದೂಷಿಸಿದ್ದಾರೆ, ಹಾಗಾದರೆ ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆ ಎಂದು ನಾನು ಸಿಎಂ ಅವರನ್ನು ಕೇಳಲು ಬಯಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯವರನ್ನು ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಇದೆಲ್ಲದರ ಹಿಂದೆ ಯಾರಿದ್ದಾರೆ? ಮಾಧ್ಯಮದ ಹೆಸರಿನಲ್ಲಿ ವಾಹಿನಿಯೊಂದನ್ನು ನಡೆಸುತ್ತಿರುವ ವ್ಯಕ್ತಿಯೊಬ್ಬರು ಕಾಂಗ್ರೆಸ್ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಹೇಗೆ ಮುಂದುವರಿಯಬೇಕು ಎಂಬ ಬಗ್ಗೆ ಮಾಹಿತಿ ಪಡೆಯಲು ಕರ್ನಾಟಕದ ಮುಖ್ಯಮಂತ್ರಿಯನ್ನು ಪದೇಪದೇ ಭೇಟಿಯಾಗುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್‌ ಆಪರೇಷನ್‌(Sting Operation) ಷಡ್ಯಂತ್ರದಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರೇ ನೇರ ಶಾಮೀಲಾಗಿದ್ದಾರೆ. ಈ ಸಿಂಡಿಕೇಟ್‌ನಲ್ಲಿ ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದ್ದು, ಅಂಗೈ ಹುಣ್ಣಿಗೆ ಕನ್ನಡಿ ಹುಡುಕುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

ಸ್ಟಿಂಗ್ ಆಪರೇಷನ್ ಯಾರು? ಏಕೆ ಮಾಡಿದ್ರು, ಮಾಸ್ಟರ್ ಮೈಂಡ್ ಯಾರು?

ನಿನ್ನೆ ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿರುವ ಸ್ಟಿಂಗ್‌ ನ್ನು ಜೆಡಿಎಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಹೈಕಮಾಂಡ್‌ಗೆ ವರದಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸ್ಟಿಂಗ್‌ ಮಾಡಿದ್ದು ಯಾರು, ಅದರ ಮಾಸ್ಟರ್‌ ಮೈಂಡ್‌ ಯಾರು, ಅದರ ಕಿಂಗ್‌ಪಿನ್‌ ಯಾರು, ಶೂಟಿಂಗ್‌ ಮಾಡುವಾಗ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥನಿಗೆ ಸಹಕರಿಸಿದ ಕಾಂಗ್ರೆಸ್‌ ಪಕ್ಷದ ಮಹಿಳಾಮಣಿ ಯಾರು ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ.

ಇನ್ನು ಯಾವ ಮುಖ ಇಟ್ಟುಕೊಂಡು ಮುಖ್ಯಮಂತ್ರಿ ದಿಲ್ಲಿ ನಾಯಕರಿಗೆ ವರದಿ ನೀಡುತ್ತಾರೆ ಎಂದು ಖಾರವಾಗಿ ಪ್ರಶ್ನಿಸಿದರು.ಈ ಬಗ್ಗೆ ಅಗತ್ಯವಿದ್ದರೆ ಸಿದ್ದರಾಮಯ್ಯರನ್ನು ಭೇಟಿ ಮಾಡಲು ತಯಾರಿದ್ದೇನೆ. ಅವರು ನಮ್ಮ ಪಕ್ಷದಲ್ಲಿದ್ದವರು. ಅವರನ್ನು ಭೇಟಿ ಮಾಡುವುದಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಪ್ರಶೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಡಿಯಲ್ಲಿ ಚೀನಾ ಕ್ಯಾತೆ: ITBP ಮಹಾನಿರ್ದೇಶಕರ ಹೇಳಿಕೆ ತೀವ್ರ ಆತಂಕಕಾರಿ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮತ್ತೆ ಚೀನಾ ಕ್ಯಾತೆ, ಗಲ್ವಾನ್ ರೀತಿಯ ಸಂಘರ್ಷ; ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯೊಂದಿಗೆ ಮತ್ತೆ ಮುಖಾಮುಖಿ?

ಮೈಸೂರಿನಲ್ಲಿ ದುರಂತ: ನೀರಿನ ಪಂಪ್‌ ಸ್ವಚ್ಛಗೊಳಿಸುವಾಗ ವಿದ್ಯುತ್‌ ಶಾಕ್‌, ರಾಜಸ್ಥಾನ ಮೂಲದ ಯುವಕ ಸಾವು,Video

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್‌ ಅಲರ್ಟ್‌: ಅ.31ರೊಳಗೆ ಪರಿಶೀಲನೆ ಪೂರ್ಣಗೊಳಿಸಿ, ಗಡುವು ವಿಸ್ತರಣೆ ಇಲ್ಲ!

ಹುಬ್ಬಳ್ಳಿ ಮಹಿಳೆ ಕತ್ತು ಸೀಳಿದ ಮಾಂಜಾದಾರ: 'ಮನರಂಜನೆಗಾಗಿ ಮತ್ತೊಬ್ಬರ ಜೀವದ ಜೊತೆ ಆಟವಾಡಬೇಡಿ': DCM ಪರಮೇಶ್ವರ್ ಖಡಕ್ ಎಚ್ಚರಿಕೆ