ಶಶೀಲ್‌ ನಮೋಶಿ 
ರಾಜಕೀಯ

MLC Election: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ BJPಯ ಶಶೀಲ್‌ ನಮೋಶಿ ಜಯಭೇರಿ; ಕಾಂಗ್ರೆಸ್‌ನ ಮಟ್ಟೂರುಗೆ ಮುಖಭಂಗ!

ಕಾಂಗ್ರೆಸ್‌ ಅಭ್ಯರ್ಥಿ ಶರಣಪ್ಪ‌ ಮಟ್ಟೂರು ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಕಲಬುರಗಿ: ಕರ್ನಾಟಕ ವಿಧಾನಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಹಾಲಿ ವಿಧಾನ ಪರಿಷತ್‌ ಸದಸ್ಯ ಶಶೀಲ್‌ ನಮೋಶಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಶರಣಪ್ಪ‌ ಮಟ್ಟೂರು ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಮೊದಲ ಸುತ್ತಿನ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಶಶೀಲ್ ನಮೋಶಿ ಅವರು ಶರಣಪ್ಪ ಮಟ್ಟೂರು ಅವರಿಗಿಂತ 1,529 ಮತಗಳ ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲೂ ನಮೋಶಿ ಮುನ್ನಡೆ ಮುಂದುವರಿಸಿದ್ದು, 3 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ನಡೆದ ನಾಲ್ಕು ಎಂಎಲ್‌ಸಿ ಚುನಾವಣೆಯಲ್ಲಿ ಸರ್ಕಾರಕ್ಕೆ ಪ್ರಜ್ಞಾವಂತ ಜನ ಪಾಠ ಕಲಿಸಿದ್ದಾರೆ. ನಮ್ಮ ರಾಜ್ಯದ ಶಿಕ್ಷಕರು ಹಾಗೂ ಪದವೀಧರರು ಡಿಕೆಶಿ ಅವರಿಗೆ ಪಾಠ ಕಲಿಸಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ ಅಂತಾ ಹೇಳುವ ಡಿಕೆಶಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ. ಈ ನಾಲ್ಕು ಚುನಾವಣೆಯ ಫಲಿತಾಂಶ ಮುಂಬರುವ 2028ರ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ ಗೆ ಮುಖಭಂಗ: ಬ್ಯಾಲೆಟ್ ಪೇಪರ್ ಮೂಲಕ ನಡೆದ MLC ಚುನಾವಣೆಯಲ್ಲಿ 4 ಸ್ಥಾನ NDA ತೆಕ್ಕೆಗೆ!

'ಯಾವ ರೀತಿಯ ಕ್ರಿಕೆಟ್‌ ಆಡುತ್ತಿದ್ದರೋ ಗೊತ್ತಿಲ್ಲ, 12 ಎಸೆತಗಳಲ್ಲಿ 50 ರನ್‌.. ಖಂಡಿತಾ ಸುಲಭವಲ್ಲ'; ಗುರುವಿನ ಕೊಂಡಾಡಿದ ಅಭಿಷೇಕ್ ಶರ್ಮಾ!

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್​ಗೆ ಮುಖಭಂಗ!

ನನ್ನ ಫ್ಯಾಮಿಲಿ ಬಗ್ಗೆ ಮಾತಾಡೋಕೆ ಯಾರಿಗೂ ಅಧಿಕಾರ ಇಲ್ಲ: ಜೈಲಿನಿಂದಲೇ ಧನ್ವೀರ್​ಗೆ ದರ್ಶನ್ ವಾರ್ನಿಂಗ್!

ದೇವರ ದಯೆಯಿಂದ ನನ್ನ‌ ಆರೋಗ್ಯ ಸ್ಥಿರವಾಗಿದೆ: ಆಸ್ಪತ್ರೆಯಿಂದಲೇ DCM ಪರಮೇಶ್ವರ ಪೋಸ್ಟ್