ಕೆಎನ್ ರಾಜಣ್ಣ online desk
ರಾಜಕೀಯ

ಸ್ಟಿಂಗ್ ಫ್ಯಾಕ್ಟರಿಗಳು ಎಲ್ಲಾ ಕಡೆ ಓಪನ್ ಆಗಿವೆ; ನೋಡಲೂ ಅಸಹ್ಯ, ಕೇಳಲೂ ಅಸಹ್ಯ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ

ಪ್ರತಿಯೊಬ್ಬರೂ ತಮ್ಮದೇ ಆದ ‘ಸ್ಟಿಂಗ್ ಆಪರೇಷನ್ ಫ್ಯಾಕ್ಟರಿ’ಯನ್ನು ಹೊಂದಿರುವಂತಿದೆ. ಕರ್ನಾಟಕ ರಾಜಕೀಯದಲ್ಲಿ ಇಂತಹ ಕಾರ್ಯಾಚರಣೆಗಳು ಸಾಮಾನ್ಯವಾಗಿದ್ದು, ರಾಜಕಾರಣಿಗಳು ತಲೆತಗ್ಗಿಸುವಂತೆ ಮಾಡಿವೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ‘ಸ್ಟಿಂಗ್ ಆಪರೇಷನ್’ ಭಾರೀ ಸದ್ದು ಮಾಡುತ್ತಿದ್ದು, ಎಲ್ಲಾ ಕಡೆ‘ಸ್ಟಿಂಗ್ ಫ್ಯಾಕ್ಟರಿಗಳೇ’ ಓಪನ್ ಆಗಿವೆ ಮತ್ತು ಇಂತಹ ಕಾರ್ಯಾಚರಣೆ ಸಾಮಾನ್ಯ ಸಂಗತಿಯಾಗಿಬಿಟ್ಟಿದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’ ರಾಜ್ಯದ ಜನರಿಗೆ ಮಾಡಿದ ಅವಮಾನ ಎಂದು ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರತಿಯೊಬ್ಬರೂ ತಮ್ಮದೇ ಆದ ‘ಸ್ಟಿಂಗ್ ಆಪರೇಷನ್ ಫ್ಯಾಕ್ಟರಿ’ಯನ್ನು ಹೊಂದಿರುವಂತಿದೆ. ಕರ್ನಾಟಕ ರಾಜಕೀಯದಲ್ಲಿ ಇಂತಹ ಕಾರ್ಯಾಚರಣೆಗಳು ಸಾಮಾನ್ಯವಾಗಿದ್ದು, ರಾಜಕಾರಣಿಗಳು ತಲೆತಗ್ಗಿಸುವಂತೆ ಮಾಡಿವೆ. ಇದು ಕರ್ನಾಟಕದ ಜನರಿಗೆ ಮಾಡಿದ ಅವಮಾನ. ಅದನ್ನು ನೋಡಲೂ ಮತ್ತು ಕೇಳಲೂ ಅಸಹ್ಯವಾಗುತ್ತಿದೆ” ಎಂದು ರಾಜಣ್ಣ ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಇನ್ನೂ ಅನೇಕ ತುರ್ತು ಗಂಭೀರ ಸಮಸ್ಯೆಗಳಿರುವಾಗ, ಈ ವಿವಾದವೇಕೆ ಸಾರ್ವಜನಿಕ ಚರ್ಚೆಗಳಲ್ಲಿ ಪ್ರಮುಖ ವಿಷಯವಾಗಿದೆ ಎಂದು ರಾಜಣ್ಣ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ಇಂತಹ ಚಟುವಟಿಕೆಗಳಿಗೆ ಅಂತ್ಯ ಹಾಡಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳು ಈಗಾಗಲೇ ನಡೆಯುತ್ತಿವೆ ಎಂದ ಅವರು, ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದು ಹೇಳಿದರು.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡ ರಾಜಣ್ಣ, ಮಾಜಿ ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ, ಈ ವಿಷಯದಲ್ಲಿ ತಮಗೆ ನೈತಿಕ ಬೆಂಬಲದ ಅಗತ್ಯವಿಲ್ಲ ಎಂದು ಅವರು ಹೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದರು.

“ಸಿದ್ದರಾಮಯ್ಯ ಏನಾದರೂ ತಪ್ಪು ಮಾಡಿದ್ದರೆ, ಅವರು ಇತರರಿಂದ ಬೆಂಬಲವನ್ನು ನಿರೀಕ್ಷಿಸಬಹುದಿತ್ತು. ಆದರೆ ಅವರು ಯಾವುದೇ ತಪ್ಪು ಮಾಡಿಲ್ಲ, ಆದ್ದರಿಂದ ಈ ವಿಷಯದಲ್ಲಿ ಅವರಿಗೆ ಯಾರ ಬೆಂಬಲವೂ ಬೇಕಿಲ್ಲ,” ಎಂದು ರಾಜಣ್ಣ ಹೇಳಿದರು.

ರಾಜಕೀಯ ನಾಯಕರು ಸಾಮಾನ್ಯವಾಗಿ ಇತರರ ಬೆಂಬಲವನ್ನು ಸ್ವಾಗತಿಸುತ್ತಾರೆ, ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಸಿದ್ದರಾಮಯ್ಯ ತೆಗೆದುಕೊಂಡಿರುವ ನಿಲುವು ಅರ್ಥವಾಗುವಂತಹದ್ದೇ ಆಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ತಾವು ಮೈಸೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದಾಗಿಯೂ ಹೇಳಿದ ರಾಜಣ್ಣ, ಮಾಜಿ ಸಿಎಂ, ಶ್ರವಣಬೆಳಗೊಳಕ್ಕೆ ತೆರಳಿದ್ದರಿಂದ ಅದು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು. ಇಂದು ಮಧ್ಯಾಹ್ನ ತಾವು ಮಾಜಿ ಮುಖ್ಯಮಂತ್ರಿಯನ್ನು ಭೇಟಿಯಾಗುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; ಒಟ್ಟು ಮತದಾರರು 4.55 ಕೋಟಿ, 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್!

35 ಎಸೆತಗಳಲ್ಲಿ 100 ರನ್: T20 ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆ ಬರೆದ ಅಭಿಷೇಕ್ ಶರ್ಮಾ!

'ಬಟ್ಟೆ ಹರಿದಿತ್ತು, ರಕ್ತಸ್ರಾವವಾಗುತ್ತಿತ್ತು': ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ್ ಮೇಲೆ ಡೊನಾಲ್ಡ್ ಟ್ರಂಪ್ 'ಕ್ರೂರ' ಅತ್ಯಾಚಾರ!

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಾತು ಮರೆತ ಸರ್ಕಾರ; ಮಸೂದೆ ಮಂಡಿಸಲು ಹಿಂದೇಟು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಸಿಎಂ ಸೇರಿದಂತೆ ಹಲವು ಸಚಿವರು ಆಸ್ಪತ್ರೆಗೆ ದೌಡು! Video