ಎಚ್ ಡಿ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ  
ರಾಜಕೀಯ

'ಸಿದ್ದರಾಮಯ್ಯನವರನ್ನು ಅತಿ ಹೆಚ್ಚು ಅವಮಾನಿಸಿದ್ದು ಕುಮಾರಸ್ವಾಮಿ; ಕಂಡವರ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಮನೆಮುರುಕ'

ಸಿದ್ದರಾಮಯ್ಯನವರ ವಿಷಯವನ್ನಿಟ್ಟುಕೊಂಡು ಒಮ್ಮೆ ಮುಖ್ಯಮಂತ್ರಿಗಳ ಕಡೆ ಬೆರಳು ತೋರಿಸುತ್ತಾರೆ, ಮತ್ತೊಮ್ಮೆ ಜಮೀರ್ ಅಹಮದ್ ಅವರ ಕಡೆ ಕೈ ತೋರಿಸುತ್ತಾರೆ, ಇನ್ನೊಮ್ಮೆ ಖರ್ಗೆ ಕುಟುಂಬದ ಕಡೆ ಕೈ ತೋರಿಸುತ್ತಾರೆ.

ಬೆಂಗಳೂರು: ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ಮಾತು, ಇದು ಮಾನ್ಯ ಕುಮಾರಸ್ವಾಮಿಯವರನ್ನು ವಿವರಿಸಬಹುದಾದ ಅತ್ಯುತ್ತಮ ಸಾಲುಗಳು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ನಿನ್ನೆ ಏನು ಮಾತನಾಡಿದ್ದೆ, ಮೊನ್ನೆ ಏನು ಮಾತನಾಡಿದ್ದೆ, ಇಂದು ಏನು ಮಾತನಾಡುತ್ತಿದ್ದೇನೆ, ನಾಳೆ ಏನು ಮಾತನಾಡುತ್ತೇನೆ ಎಂಬುದರ ಸ್ಪಷ್ಟತೆ ಸ್ವತಃ ಕುಮಾರಸ್ವಾಮಿಯವರಿಗೇ ಇಲ್ಲ.

ಸಿದ್ದರಾಮಯ್ಯನವರ ವಿಷಯವನ್ನಿಟ್ಟುಕೊಂಡು ಒಮ್ಮೆ ಮುಖ್ಯಮಂತ್ರಿಗಳ ಕಡೆ ಬೆರಳು ತೋರಿಸುತ್ತಾರೆ, ಮತ್ತೊಮ್ಮೆ ಜಮೀರ್ ಅಹಮದ್ ಅವರ ಕಡೆ ಕೈ ತೋರಿಸುತ್ತಾರೆ, ಇನ್ನೊಮ್ಮೆ ಖರ್ಗೆ ಕುಟುಂಬದ ಕಡೆ ಕೈ ತೋರಿಸುತ್ತಾರೆ. ಕಂಡವರ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವುದನ್ನು ಮನೆಮುರುಕತನ ಎನ್ನುತ್ತಾರೆ. “ಮನೆಮುರುಕತನ” ಎಂಬ ಪದದ ಅರ್ಥ ನಿಮಗೆ ತಿಳಿದಿದೆ ಎಂದುಕೊಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯನವರನ್ನು ಅತಿ ಹೆಚ್ಚು ಅವಮಾನಿಸಿದವರು ಯಾರಾದರೂ ಇದ್ದರೆ, ಅದು ಕುಮಾರಸ್ವಾಮಿಯವರು ಮಾತ್ರ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಿದವರು ಯಾರಾದರೂ ಇದ್ದರೆ, ಅದು ಕುಮಾರಸ್ವಾಮಿಯವರು ಮಾತ್ರ. ಇದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಸ್ಪಷ್ಟವಾಗಿ ಗೋಚರಿಸುವ ಸತ್ಯ. ಸಿದ್ದರಾಮಯ್ಯನವರ ರಾಜಕೀಯ ಜೀವನದುದ್ದಕ್ಕೂ ಎಡೆಬಿಡದೆ ಕಾಡಿದವರು, ಇಂದು ಖರ್ಗೆ ಕುಟುಂಬದ ಕಡೆ ತಿರುಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕುಮಾರಸ್ವಾಮಿಯವರೇ,

ನಿಮ್ಮ ಐಟಿ ಸೆಲ್‌ನ ಹುಡುಗರು ವಿಚಾರಣೆಗೆ ಹಾಜರಾಗುತ್ತಿಲ್ಲವೇಕೆ?

ಸ್ಟಿಂಗ್ ವಿಡಿಯೋ ಬಹಿರಂಗಪಡಿಸುವಲ್ಲಿ ನಮ್ಮವರ ಪಾತ್ರವಿಲ್ಲ ಎಂದು ಧೈರ್ಯವಾಗಿ ಹೇಳುವ ನೈತಿಕತೆಯನ್ನು ತೋರುತ್ತಿಲ್ಲವೇಕೆ?

ವಿಡಿಯೋ ಅಪ್‌ಲೋಡ್ ಮಾಡಿದ್ದನ್ನು ವಿರೋಧಿಸುತ್ತಿಲ್ಲವೇಕೆ?

ಅಕ್ಕ ಸಮ್ಮೇಳನದ ಹೆಸರಿನಲ್ಲಿ ಅಮೆರಿಕಕ್ಕೆ ಹೋಗಿ ನಡೆಸಿದ ಷಡ್ಯಂತ್ರವೇನು?

ಮಾತನಾಡುತ್ತೀರಾ, ಕುಮಾರಣ್ಣಾ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಸ್ವತಃ ತಮ್ಮ ಸಹೋದರನ ಕುಟುಂಬದ ಬೆಳವಣಿಗೆಯನ್ನೂ ಸಹಿಸದ ಕುಮಾರಸ್ವಾಮಿಯವರು ನಮ್ಮನ್ನು ಸಹಿಸಬಲ್ಲರೇ? ಕುಮಾರಸ್ವಾಮಿಯವರೇ, ಕಿಂಚಿತ್ತಾದರೂ ಮಾತಿನಲ್ಲಿ ಘನತೆ ಬೆಳೆಸಿಕೊಳ್ಳಿ, ಸತ್ಯ ಹೇಳುವುದನ್ನು ರೂಢಿಸಿಕೊಳ್ಳಿ, ನಡತೆಯಲ್ಲಿ ತೂಕ ಹೆಚ್ಚಿಸಿಕೊಳ್ಳಿ ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನವ ಬೆಂಗಳೂರು ನಿರ್ಮಾಣದತ್ತ ಡಿಕೆಶಿ ದೃಢ ಹೆಜ್ಜೆ: ₹1 ಲಕ್ಷ ಕೋಟಿ ಯೋಜನೆ; ಟನಲ್ ರೋಡ್ ಸೇರಿ 500 ಕಿ.ಮೀ ಹೊಸ ರಸ್ತೆ ನಿರ್ಮಾಣ!

CEC ವಿರುದ್ಧ ಇಂಡಿಯಾ ಒಕ್ಕೂಟದಿಂದ ಸಾರ್ವಜನಿಕ ದೋಷಾರೋಪಣೆ: ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆ!

KPSC: ರಾಜ್ಯ ಸರ್ಕಾರಕ್ಕೆ ಭಾರಿ ಶಾಕ್; ಸುಪ್ರೀಂ ನಲ್ಲಿ 2022 ರ ವಿಶೇಷ ಕಾಯ್ದೆ ರದ್ದು! 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು!

ಬೇರೆಯವರಿಗೆ ಉಪದೇಶ ನೀಡುವುದು ನಿಲ್ಲಿಸಿ; ವಾರಾಣಸಿ, ನಾಗ್ಪುರ ಬಿಜೆಪಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್‌ ತಿರುಗೇಟು

Israel polls: ಅರಬ್ ಪಾರ್ಟಿಗಳೇ 'ಕಿಂಗ್ ಮೇಕರ್' ಆಗೋ ಸಾಧ್ಯತೆ; ಅಧಿಕಾರದಿಂದ ನೆತನ್ಯಾಹು ಕಿತ್ತೆಸೆಯಲು ಪ್ಲಾನ್!