ಆರ್ ಅಶೋಕ್, ಡಿ ಕೆ ಶಿವಕುಮಾರ್  
ರಾಜಕೀಯ

ಅಭಿವೃದ್ಧಿ ಇಲ್ಲ, ಅನುದಾನವೂ ಇಲ್ಲ; GBA ಹೆಸರಲ್ಲಿ ಬೆಂಗಳೂರನ್ನು 5 ಪಾಲಿಕೆಗಳಾಗಿ ಒಡೆದು ಲೂಟಿ; ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ರಾಜ್ಯ ಸರ್ಕಾರದಿಂದ ನಿಗಮಗಳಿಗೆ ಬರಬೇಕಿದ್ದ ವಿಶೇಷ ಮೂಲಸೌಕರ್ಯ ಬಂಡವಾಳ ಬೆಂಬಲ ಯೋಜನೆಯ 2,199.99 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೆಸರಿನಲ್ಲಿ ಬೆಂಗಳೂರನ್ನು ಐದು ಪ್ರತ್ಯೇಕ ನಗರ ಪಾಲಿಕೆಗಳಾಗಿ ವಿಭಜಿಸಿ ಕಾಂಗ್ರೆಸ್ ಸರ್ಕಾರ ಬೊಕ್ಕಸ ಲೂಟಿ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್ ಅವರು, ಬೆಂಗಳೂರಿನ ಅಭಿವೃದ್ಧಿಗೆ ಸೂಕ್ತ ಯೋಜನೆ ಹಾಗೂ ಅಗತ್ಯ ಅನುದಾನ ಇಲ್ಲ. ಜನರಿಂದ ಸಂಗ್ರಹವಾಗುವ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದೇ ವೇಳೆ ‘ಗ್ರೇಟರ್ ಬೆಂಗಳೂರು’ ಎಂದು ಹೆಸರು ಬದಲಾಯಿಸಿ ಬೆಂಗಳೂರನ್ನು ಐದು ಪ್ರತ್ಯೇಕ ನಗರ ಪಾಲಿಕೆಗಳನ್ನಾಗಿ ವಿಭಜಿಸಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯೇ ಎಂದು ಪ್ರಶ್ನಿಸಿರುವ ಅವರು, ರೂ.20,220.48 ಕೋಟಿ ಬಜೆಟ್ ಗಾತ್ರದ ಅಂಕಿ-ಅಂಶಗಳನ್ನು ತೋರಿಸಿ ಸರ್ಕಾರ ಬೀಗುತ್ತಿದೆ. ಆದರೆ, ಬೆಂಗಳೂರಿನ ಅಭಿವೃದ್ಧಿಯ ವಾಸ್ತವ ಸ್ಥಿತಿ ಬೇರೆಯೇ ಇದೆ ಎಂದು ಟೀಕಿಸಿದ್ದಾರೆ.

ವರ್ಷ ಮುಗಿಯುತ್ತಾ ಬಂದರೂ ಬೆಂಗಳೂರಿನಲ್ಲಿ ಒಂದು ರೂಪಾಯಿ ಅಭಿವೃದ್ಧಿ ಕಾರ್ಯವೂ ನಡೆದಿಲ್ಲ. ವರ್ಷದ ಮೊದಲ ಆರು ತಿಂಗಳು ಸಿಬ್ಬಂದಿ ನೇಮಕ, ಕಚೇರಿ ವ್ಯವಸ್ಥೆ ಹಾಗೂ ಕಡತ ಹಂಚಿಕೆಯಲ್ಲೇ ಕಳೆದಿದ್ದು, ಉಳಿದ ಅವಧಿಯಲ್ಲಿ ಬಜೆಟ್ ಕ್ರಿಯಾ ಯೋಜನೆ ಮತ್ತು ಟೆಂಡರ್ ಪ್ರಕ್ರಿಯೆಯಲ್ಲೇ ಸಮಯ ಮುಗಿಯುತ್ತಿದೆ.

ಹಾಗಾದರೆ ಬೆಂಗಳೂರಿನ ಜನರಿಗೆ ಮೂಲಸೌಕರ್ಯ ಸೌಲಭ್ಯಗಳು ಸಿಗುವುದು ಯಾವಾಗ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದಿಂದ ನಿಗಮಗಳಿಗೆ ಬರಬೇಕಿದ್ದ ವಿಶೇಷ ಮೂಲಸೌಕರ್ಯ ಬಂಡವಾಳ ಬೆಂಬಲ ಯೋಜನೆಯ 2,199.99 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ. ಅದೇ ರೀತಿ ರಾಜ್ಯ ಹಣಕಾಸು ಆಯೋಗದಿಂದ ನೀಡಬೇಕಿದ್ದ ರೂ. 250 ಕೋಟಿ ವಿಶೇಷ ಅನುದಾನವೂ ಇನ್ನೂ ಬಿಡುಗಡೆಯಾಗದೆ ಕಾಗದದಲ್ಲೇ ಉಳಿದಿದೆ.

ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ‘ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್’ (B-SMILE) ಸಂಸ್ಥೆಗೆ ವರ್ಗಾಯಿಸುವ ಮೂಲಕ ನಗರ ಪಾಲಿಕೆಗಳ ಪಾತ್ರವನ್ನು ಸೀಮಿತಗೊಳಿಸಲಾಗಿದೆ. ಪಾಲಿಕೆಗಳನ್ನು ಕೇವಲ ಕಸ ವಿಲೇವಾರಿ ಮತ್ತು ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಸೀಮಿತಗೊಳಿಸಲಾಗಿದೆ. ಉದ್ಯಾನವನಗಳು ಹಾಗೂ ಕೆರೆಗಳ ಅಭಿವೃದ್ಧಿಗೂ ಅಗತ್ಯ ಅನುದಾನ ನೀಡಲಾಗುತ್ತಿಲ್ಲ ಎಂದು ದೂರಿದ್ದಾರೆ.

ತೆರಿಗೆದಾರರ ಹಣವನ್ನು ಲೂಟಿ ಮಾಡುವುದು, ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಜೇಬು ತುಂಬಿಸಿಕೊಳ್ಳುವುದು ಹಾಗೂ ಬೆಂಗಳೂರಿನ ಜನರಿಗೆ ಧೂಳು, ಗುಂಡಿ ಮತ್ತು ನರಕಯಾತನೆ ನೀಡುವುದೇ ನಿಮ್ಮ ಬ್ರಾಂಡ್ ಬೆಂಗಳೂರು ಪರಿಕಲ್ಪನೆಯೇ’ ಎಂದು ಟೀಕಿಸಿದ್ದಾರೆ.

ಕಮಿಷನ್ ದಂಧೆಗಾಗಿ ಯೋಜನೆಗಳ ಹಂಚಿಕೆ ನಾಟಕ ಮಾಡುವುದನ್ನು ಬಿಟ್ಟು, ಪಾಲಿಕೆಗಳಿಗೆ ಬರಬೇಕಿರುವ 2,199.99 ಕೋಟಿ ರೂ. ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬೆಂಗಳೂರಿನ ರಸ್ತೆ ಹಾಗೂ ಮೂಲಸೌಕರ್ಯ ದುರಸ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಬೆಂಗಳೂರಿನ ಜನರ ಆಕ್ರೋಶದ ಪ್ರತಿಭಟನೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ಸಂಘರ್ಷ-ಕಚ್ಚಾ ತೈಲ ಬೆಲೆ ಏರಿಕೆ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 789 ಅಂಕ ಇಳಿಕೆ, 24 ಸಾವಿರಕ್ಕಿಂತ ಕೆಳಗೆ ಕುಸಿದ Nifty

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನೇಪಾಳ ಪ್ರವಾಹ ಮಹಾ ದುರಂತ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ, ನಾಪತ್ತೆಯಾಗಿರುವ 4,858 ಮಂದಿಗಾಗಿ ಮುಂದುವರೆದ ಕಾರ್ಯಾಚರಣೆ..!

ಗೃಹಲಕ್ಷ್ಮಿ ನಕಲಿ ಖಾತೆಗಳಿಗೆ ಕಡಿವಾಣ: ಮನೆ-ಮನೆ ಸಮೀಕ್ಷೆಗೆ ಸರ್ಕಾರ ಮುಂದು, ಸಮೀಕ್ಷೆ ತಪ್ಪಿಸಿದ್ರೆ ನಿಲ್ಲಲಿದೆ 2,000 ರೂ. ಹಣ..!

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಜಸ್ಟ್ ಮಿಸ್; ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ 17 ಮಂದಿ ಕನ್ನಡಿಗರು!