ಜನಾರ್ದನ ರೆಡ್ಡಿ, ಶ್ರೀರಾಮುಲು ಮತ್ತು ವಿಜಯೇಂದ್ರ 
ರಾಜಕೀಯ

ಕೊನೆಗೂ ಬಳ್ಳಾರಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅನುಮತಿ ಕೊಟ್ಟ ಡಿಕೆಶಿ ಸರ್ಕಾರ!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಬಳ್ಳಾರಿ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

ಬಳ್ಳಾರಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ 8ನೇ ದಿನಕ್ಕೆ ಕಾಲಿಟ್ಟಿದ್ದು, ಸೆಪ್ಟೆಂಬರ್ 10ರಂದು ಬಳ್ಳಾರಿ ತಲುಪಲಿದ್ದು, ಈ ವೇಳೆ ದೊಡ್ಡ ಸಮಾರೋಪ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಬಳ್ಳಾರಿಯ ಎಕ್ಸ್ ಮುನಿಸಿಪಲ್ ಶಾಲಾ ಮೈದಾನದಲ್ಲಿ ಬಿಜೆಪಿ ಸಮಾರೋಪ ಸಮಾರಂಭಕ್ಕೆ ಸಿದ್ಧತೆ ನಡೆಸಿತ್ತು. ಆದರೆ ಶಾಲಾ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯು ಅನುಮತಿ ನಿರಾಕರಿಸಿತ್ತು. ಇದೀಗ ಬಳ್ಳಾರಿ ಜಿಲ್ಲಾಡಳಿತ ಕೊನೆಗೂ ಬಿಜೆಪಿ ಸಮಾವೇಶಕ್ಕೆ ಅನುಮತಿ ನೀಡಿದೆ.

ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಖಂಡಿಸಿ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯು ಸೆಪ್ಟೆಂಬರ್ 10 ರಂದು ಬಳ್ಳಾರಿಯನ್ನು ತಲುಪಲಿದ್ದು, ಅಂದು ಮಧ್ಯಾಹ್ನ 3 ರಿಂದ ರಾತ್ರಿ 8 ಗಂಟೆಯವರೆಗೆ ಸಮಾರೋಪ ಸಮಾವೇಶ ನಡೆಸಲು ಬಿಜೆಪಿ ನಾಯಕರು ಅನುಮತಿ ಕೋರಿದ್ದರು. ಆದರೆ ಶಾಲಾ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯು ಮೈದಾನ ನೀಡಲು ಅನುಮತಿಸಿರಲಿಲ್ಲ. ಈ ಸಂಬಂಧ ಬಿಜೆಪಿ ನಾಯಕರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಮಾತುಕತೆ ನಡೆಸಿದ್ದರು.

ಶಾಸಕ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಬಿಜೆಪಿ ನಾಯಕರಿಂದಲೂ ಸಾಕಷ್ಟು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಅನುಮತಿ ನೀಡಲಾಗಿದೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಬಳ್ಳಾರಿ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

'ಮಣಿಪುರದ ಹೆಮ್ಮೆಯ ಪುತ್ರ'.. 'ನಮ್ಮವರ ಮೇಲೆ ಕೈ ಹಾಕಿದ್ರೆ ಯುದ್ಧವೇ ನಡೆಯಲಿದೆ': Binalakshmi Nepram ಎಚ್ಚರಿಕೆ

ಪರಪ್ಪನ ಅಗ್ರಹಾರ ನಂತರ ಮಂಗಳೂರು ಜೈಲಿನ ಮೇಲೆ ಪೊಲೀಸ್ ದಾಳಿ; 9 ಕೈದಿಗಳಿಂದ 10 ಮೊಬೈಲ್ ವಶ!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ