ಪ್ರಿಯಾಂಕ್ ಖರ್ಗೆ 
ರಾಜಕೀಯ

'ಪೊಲೀಸರ ನಿರ್ದೇಶನವೇ ಬಿಜೆಪಿಗರಿಗೆ ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ': ಪ್ರತಿಭಟನೆ ಎಂಬ ಸದಾರಮೆ ನಾಟಕವೇಕೆ?; ಪ್ರಿಯಾಂಕ್ ಖರ್ಗೆ

ನಿಮ್ಮದೇ ಹೇಳಿಕೆಯಂತೆ, ನೀವೀಗ "ಧರ್ಮ ರಾಜಕಾರಣ" ಶುರು ಮಾಡಿರುವುದು ನಾಯಕ ಎನಿಸಿಕೊಳ್ಳುವುದಕ್ಕಾ ಅಥವಾ ಅಭದ್ರತೆಯಲ್ಲಿರುವ ವಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ಟಿ. ನರಸಿಪುರದಲ್ಲಿ ಗಣೇಶೋತ್ಸವದ ಮೇಲೆ ವಿಧಿಸಿರುವ ನಿರ್ಬಂಧಗಳು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ ಎಚ್ಚರಿಕೆಯು ಇದೀಗ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಖ್ ಖರ್ಗೆ, ಅಹಿತಕರ ಘಟನೆಗಳಾಗದಂತೆ ಮುಂಜಾಗ್ರತಾ ಕ್ರಮವಾಗಿ ಅನುಮತಿ ನೀಡಲಾದ ರೂಟ್ ಮ್ಯಾಪ್ ನಂತೆಯೇ ಗಣಪತಿ ಮೆರವಣಿಗೆ ಸಾಗಬೇಕು ಎಂಬ ಪೊಲೀಸರ ನಿರ್ದೇಶನವೇ ಬಿಜೆಪಿಗರಿಗೆ ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ ಎಂದು ಭಾವಿಸಿದ್ದಾರೆ ಎಂದಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಪ್ರತಿಭಟನೆ ಎಂಬ ಸದಾರಮೆ ನಾಟಕ ಮಾಡಲು ಹಿಂದುತ್ವದ ವೇಷ ತೊಟ್ಟು ಮೈಸೂರಿನ ಟಿ. ನರಸೀಪುರಕ್ಕೆ ತೆರಳಿರುವ ಅಶೋಕ ಅವರೇ, ಈ ಹಿಂದೆ ನಿಮ್ಮದೇ ಬಾಯಿಯಿಂದ ಉದುರಿದ ಅಣಿಮುತ್ತುಗಳನ್ನು ಒಮ್ಮೆ ಕೇಳಿಸಿಕೊಂಡು ಆತ್ಮವಿಮರ್ಶೆ ಮಾಡಿಕೊಳ್ಳಿ! ಎಂದು ಆರ್ ಅಶೋಕ ಅವರ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ನಿಮ್ಮದೇ ಹೇಳಿಕೆಯಂತೆ, ನೀವೀಗ "ಧರ್ಮ ರಾಜಕಾರಣ" ಶುರು ಮಾಡಿರುವುದು ನಾಯಕ ಎನಿಸಿಕೊಳ್ಳುವುದಕ್ಕಾ ಅಥವಾ ಅಭದ್ರತೆಯಲ್ಲಿರುವ ವಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕಾ?. ಅಶೋಕ್ ಅವರೇ, ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಮತ್ತು ರಾಜ್ಯದಲ್ಲಿ ಕೋಮುಸಂಘರ್ಷ ನಿಗ್ರಹಿಸುವ ವಿಷಯದಲ್ಲಿ ನಾನು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ, ಪೊಲೀಸರ ಮೇಲೆ ನಿಮ್ಮ ದರ್ಪ ದೌರ್ಜನ್ಯಗಳನ್ನು ಸಹಿಸುವುದೂ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಟಿ.ನರಸಿಪುರದಲ್ಲಿ ಗಣೇಶೋತ್ಸವದ ಮೇಲೆ ವಿಧಿಸಿರುವ ನಿರ್ಬಂಧಗಳು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಅವರ ಹೇಳಿಕೆ ಹಾಗೂ ಷರತ್ತುಗಳನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ವಿರುದ್ಧ ಮೋದಿ ಎಚ್ಚರಿಕೆ! Video

‘ಹೂಡಿಕೆ ತರಲು ಹೋಗಿದ್ದಾರೋ?, ಸ್ನೇಹಿತನ Race ನೋಡಲು ಹೋಗಿದ್ದಾರೋ?’.. ವಿಜಯ್‌ಗೆ DMK ಪ್ರಶ್ನೆ, 'ತಪ್ಪೇನು?' TVK ಖಡಕ್ ತಿರುಗೇಟು

ಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆ

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!