ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ಅವರು ಮಸೀದಿ ಮುಂದೆ ಪಟಾಕಿ ಸಿಡಿಸಿದ್ರೆ, ಗ್ರಹಚಾರ ಬಿಡಿಸ್ತೇನೆ ಎಂದು ಎಚ್ಚರಿಕೆ ನೀಡಿದ್ದು, ಆಡಳಿರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಇನ್ಸ್ಪೆಕ್ಟರ್ ಧನಂಜಯ್ ಅವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.
ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಮಾಜಿ ಸಂಸದನಿಗೆ ತಿರುಗೇಟು ನೀಡಿದ್ದರು.
ಇದೀಗ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಅವರು, ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ ಎಂದು ಎಕ್ಸ್ ನಲ್ಲಿ ಪೋಸ್ಟ್ ಹಾಕುವ ಮೂಲಕ ಚಾಲೆಂಜ್ ಮಾಡಿದ್ದಾರೆ.
ಮೈಸೂರಿನ ಗಲ್ಲಿ ರೌಡಿ ಒಬ್ಬ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಧಮ್ಕಿ ಹಾಕಿದ್ದಾನೆ.
ನುಗ್ಗಿ ತೋರಿಸು, ನಾನು ನಿನ್ನನ್ನು challenge ಮಾಡ್ತೀನಿ, ನಿನಗೆ ಪರಪ್ಪನ ಅಗ್ರಹಾರ guarantee!!
ತಾಕತ್ತಿದ್ದರೆ try ಮಾಡು ಮಗ!
All the best, ರಣಹೇಡಿ ಎಂದು ಪ್ರದೀಪ್ ಈಶ್ವರ ಅವರು ಪೋಸ್ಟ್ ಮಾಡಿದ್ದಾರೆ.