ಆರ್ ಅಶೋಕ್ 
ರಾಜಕೀಯ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಇನ್ಸ್​​ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಭಾನುವಾರ ಟಿ. ನರಸೀಪುರ ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್​​ಪೆಕ್ಟರ್ ಧನಂಜಯ್ ಅವರು ನೀಡಿದ ಹೇಳಿಕೆ ಇದೀಗ ಆಡಳಿರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಇನ್ಸ್​​ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಭಾನುವಾರ ಟಿ. ನರಸೀಪುರ ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಇನ್‌ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಗಣೇಶನ ಮೂರ್ತಿ ಹಿಡಿದು ಮೆರವಣಿಗೆ ಹಾಗೂ ಅಹೋರಾತ್ರಿ ಧರಣಿಗೆ ಮುಂದಾದ ಪ್ರತಿ ಪಕ್ಷ ನಾಯಕ ಆರ್. ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಹಿಂದೂ ವಿರೋಧಿ ಹಾಗೂ ತಾಲಿಬಾನಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದ ಬಿಜೆಪಿ ನಾಯಕರು, ಅಧಿಕಾರಿಯನ್ನು ಅಮಾನತು ಮಾಡುವವರೆಗೂ ಅಹೋರಾತ್ರಿ ಧರಣಿ ನಡೆಸುವುದಾಗಿ ಪಟ್ಟುಹಿಡಿದರು. ಆದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆ ಧಾವಿಸಿತು.

ಪ್ರತಿಭಟನಾಕಾರರು ಗಣೇಶನ ವಿಗ್ರಹವನ್ನು ಕೈಯಲ್ಲಿ ಹಿಡಿದು ಮೆರವಣಿಗೆ ನಡೆಸಲು ಮುಂದಾದಾಗ, ಪೊಲೀಸರು ಅವರನ್ನು ತಡೆದು ಬಲವಂತವಾಗಿ ಪೊಲೀಸ್ ವಾಹನಗಳಲ್ಲಿ ಸ್ಥಳದಿಂದ ಕರೆದೊಯ್ದು ವಶಕ್ಕೆ ಪಡೆದರು. ಸದ್ಯ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್​​ಪೆಕ್ಟರ್ ಧನಂಜಯ್ ಅವರು ಮಸೀದಿ ಮುಂದೆ ಪಟಾಕಿ ಸಿಡಿಸಿದ್ರೆ, ಗ್ರಹಚಾರ ಬಿಡಿಸ್ತೇನೆ ಎಂದು ಎಚ್ಚರಿಕೆ ನೀಡಿದ ವಿಡಿಯೋ ವೈರಲ್ ಆಗಿತ್ತು.

ಇನ್ಸ್​​ಪೆಕ್ಟರ್ ಧನಂಜಯ್​ ಅವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಠಾಣೆಗೆ ನುಗ್ಗುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ: ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

'ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ': ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಚಾಲೆಂಜ್!

WTC 2025-27: ಕೇವಲ 9 ಪಂದ್ಯಗಳಲ್ಲೇ ICC ಟೆಸ್ಟ್ ಚಾಂಪಿಯನ್ ಷಿಪ್ ನಿಂದ ಪಾಕಿಸ್ತಾನ ಕಿಕೌಟ್!

ಪ್ರಿಯಾಂಕ್ ಖರ್ಗೆ ಪರಪ್ಪನ ಅಗ್ರಹಾರ ಜೈಲು ಸೇರುವ ಕಾಲ ಹತ್ತಿರ ಬಂದಿದೆ: ಪ್ರತಾಪ್ ಸಿಂಹ ತಿರುಗೇಟು

ದೆಹಲಿಯಲ್ಲಿ ಮತ್ತೊಂದು ಅವಘಡ: ಸ್ವರೂಪ್ ನಗರದಲ್ಲಿ ಭಾರಿ ಬೆಂಕಿ ಅವಘಡ; 6 ಜನರಿಗೆ ಗಾಯ, ಭರದಿಂದ ಸಾಗಿದ ಕಾರ್ಯಾಚರಣೆ!