ಡಿಕೆ.ಶಿವಕುಮಾರ್  
ರಾಜಕೀಯ

ಪ್ರಜಾಸೇವಾ ಸಭೆಯಲ್ಲೇ ಲಂಚಕ್ಕೆ ಮಾನ್ಯತೆ ನೀಡುವ ಪ್ರಯತ್ನವಾಗಿದೆ, ಲಂಚ ಕೇಳಿದರೆ ನನಗೆ ಕರೆ ಮಾಡಿ ಎನ್ನುವ ನೀವು; ನಿಮ್ಮದೇ ಸಚಿವರ ಲಂಚದ ಹೇಳಿಕೆಗೆ ಮೌನವೇಕೆ..?

ಭ್ರಷ್ಟರನ್ನು ಬಡಿದು ಹಾಕುತ್ತೇನೆ, ಲಂಚ ಕೇಳಿದರೆ ನನಗೆ ಕರೆ ಮಾಡಿ ಎಂದು ಹೇಳುವ ನೀವು, ನಿಮ್ಮದೇ ಸಚಿವರು ಲಂಚಕ್ಕೆ ಬಹಿರಂಗ ಪ್ರೋತ್ಸಾಹ ನೀಡಿದರೂ ಸುಮ್ಮನಿದ್ದೀರಿ.

ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಟ್ಟ ಬಳಿಕ ಅವರಿಗೆ ‘ಗೌರವಯುತವಾಗಿ ಟಿಪ್ಸ್ ಕೊಡುವುದು ನಿಮ್ಮ ಧರ್ಮ’ ಎಂಬ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸಕಲೇಶಪುರದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಶಿವಲಿಂಗೇಗೌಡ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಪ್ರಜಾಸೇವಾ ಶುಲ್ಕ’ದ ಹೆಸರಿನಲ್ಲಿ ಲಂಚಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಪ್ರಜಾಸೇವಾ ಶುಲ್ಕದ ಹೆಸರು - ಗೌರವಯುತ ಲಂಚ” ಎಂದು ಟೀಕಿಸಿದ್ದಾರೆ.

ಪ್ರಜಾಸೇವೆ ಆಂದೋಲನ ಸಭೆಯಲ್ಲೇ ಸಚಿವರು ಅಧಿಕಾರಿಗಳಿಗೆ ಹಣ ನೀಡುವುದನ್ನು ಪ್ರೋತ್ಸಾಹಿಸುವ ರೀತಿಯಲ್ಲಿ ಮಾತನಾಡಿದ್ದಾರೆ, ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಭ್ರಷ್ಟರನ್ನು ಬಡಿದು ಹಾಕುತ್ತೇನೆ, ಲಂಚ ಕೇಳಿದರೆ ನನಗೆ ಕರೆ ಮಾಡಿ ಎಂದು ಹೇಳುವ ನೀವು, ನಿಮ್ಮದೇ ಸಚಿವರು ಲಂಚಕ್ಕೆ ಬಹಿರಂಗ ಪ್ರೋತ್ಸಾಹ ನೀಡಿದರೂ ಸುಮ್ಮನಿದ್ದೀರಿ ಎಂದು ಟೀಕಿಸಿದ್ದಾರೆ.

ಈ ನಡುವೆ ರಾಜ್ಯ ಬಿಜೆಪಿ ಘಟಕವೂ ಸಚಿವರ ಹೇಳಿಕೆಯನ್ನು ಟೀಕಿಸಿದ್ದು, “ಅಧಿಕಾರಿಗಳು ಕೆಲಸ ಮಾಡಿಕೊಟ್ಟರೆ ಲಂಚ ಕೊಡೋದು ಧರ್ಮವಂತೆ”. ಶಿವಲಿಂಗೇಗೌಡರ ಹೇಳಿಕೆಯಿಂದ ಕಾಂಗ್ರೆಸ್ ಸರ್ಕಾರದ ‘ಅಸಲಿತನ’ ಬಯಲಾಗಿದೆ ಎಂದು ಕಿಡಿಕಾರಿದೆ.

ಈ ನಡುವೆ, ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ ನೀಡಿದ್ದಾರೆ. ತಾವು ಅಧಿಕಾರಿಗಳಿಗೆ ಲಂಚ ನೀಡುವಂತೆ ಹೇಳಿಲ್ಲ, ಬದಲಾಗಿ ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವ ನೀಡಬೇಕು ಎಂಬ ಅರ್ಥದಲ್ಲಿ ಮಾತನಾಡಿದ್ದಾಗಿ ಅವರು ಹೇಳಿದ್ದಾರೆ.

ವೈರಲ್ ಆಗಿರುವುದು ತಮ್ಮ ಮಾತಿನ ಒಂದು ತುಣುಕು ಮಾತ್ರವಾಗಿದ್ದು, ಅದಕ್ಕೂ ಮುನ್ನ ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ಲಂಚ ನೀಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದಾಗಿ ಸಚಿವರು ತಿಳಿಸಿದ್ದಾರೆ.

ಪ್ರಜಾಸೇವಾ ಆಂದೋಲನದ ವೇಳೆ ಜನರ ಅಹವಾಲುಗಳನ್ನು ಆಲಿಸುವ ಸಂದರ್ಭದಲ್ಲಿ ನೀಡಿದ ಹೇಳಿಕೆಯನ್ನು ವಿಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ ಎಂದು ಶಿವಲಿಂಗೇಗೌಡ ಆರೋಪಿಸಿದ್ದಾರೆ. ಹೀಗಾಗಿ ಸಚಿವರ ಹೇಳಿಕೆ ಹಾಗೂ ನಂತರದ ಸ್ಪಷ್ಟನೆ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!