ಬಿಕೆ ಹರಿಪ್ರಸಾದ್, ಶಾಸಕ ಸುರೇಶ್ ಕುಮಾರ್ 
ರಾಜಕೀಯ

'ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್‌ ಯಂತ್ರವೂ ಸಾಲದು'

ಬಿಜೆಪಿಯವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆಸಿದ ವೈಯಕ್ತಿಕ ದಾಳಿಗಳು ಈ ಸಜ್ಜನ ಸುರೇಶ್ ಕುಮಾರ್ ಕಣ್ಣಿಗೆ ಬಿದ್ದಿಲ್ಲವೇ ಎಂದು ಹರಿಪ್ರಸಾದ್ ಅವರು ಖಾರವಾಗಿಯೇ ಪ್ರಶ್ನಿಸಿದ್ದಾರೆ.

ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿದ ತಕ್ಷಣ 'ಬಿಕೆ ಹರಿಪ್ರಸಾದ್ ಅವರದ್ದು ಹೊಲಸು ಬಾಯಿ' ಎಂದು ಸುರೇಶ್ ಕುಮಾರ್ ಟೀಕಿಸತ್ತಾರೆ. ಆದರೆ ನನ್ನ ರಾಜಕೀಯ ಜೀವನದಲ್ಲಿ ನಾನು ಕೈ ಮತ್ತು ಬಾಯಿ ಹೊಲಸು ಮಾಡಿಕೊಂಡಿಲ್ಲ ಎಂದು ಹರಿಪ್ರಸಾದ್ ಅವರು ತಿರುಗೇಟು ನೀಡಿದ್ದಾರೆ.

ಸುರೇಶ್ ಕುಮಾರ್ ಮಾತ್ರ ಭ್ರಷ್ಟಾಚಾರದ ಹೊಲಸಲ್ಲೇ ಹೊರಲಾಡುತ್ತಿದ್ದಾರೆ. ಅವರ ಮೈಗೆ ಅಂಟಿರುವ ಈ ಹೊಲಸನ್ನು ತೊಳೆಯಲು ವಿಶ್ವದ ಅತೀ ದೊಡ್ಡ ಕೊಳಚೆ ಸಂಸ್ಕರಣಾ ಘಟಕವಾದ ಈಜಿಪ್ಟ್ ನ ನ್ಯೂ ಡೆಲ್ಟಾ ಪ್ಲಾಂಟ್ ನಿಂದಲೂ ಸಾಧ್ಯವಿಲ್ಲ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆಸಿದ ವೈಯಕ್ತಿಕ ದಾಳಿಗಳು ಈ ಸಜ್ಜನ ಸುರೇಶ್ ಕುಮಾರ್ ಕಣ್ಣಿಗೆ ಬಿದ್ದಿಲ್ಲವೇ ಎಂದು ಹರಿಪ್ರಸಾದ್ ಅವರು ಖಾರವಾಗಿಯೇ ಪ್ರಶ್ನಿಸಿದ್ದಾರೆ.

ಇದೇ ವೇಳೆ ಸುರೇಶ್ ಕುಮಾರ್ ಅವರ ವಿರುದ್ಧ ಮುನ್ನೂರು ಕೋಟಿ ರೂಪಾಯಿ ಟೆಂಡರ್ ಅಕ್ರಮದ ಗಂಭೀರ ಆರೋಪ ಮಾಡಿದ ಹರಿಪ್ರಸಾದ್ ಅವರು, ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ನಿಧಿ ಹಾಗೂ ಪಾಲಿಕೆಯ ವಿವಿಧ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಬಾಹಿರವಾಗಿ ಹಸ್ತಕ್ಷೇಪ ಮಾಡಿದ್ದಾರೆ. ಸುಮಾರು 300 ಕೋಟಿ ರೂಪಾಯಿ ಮೊತ್ತದ ಅಕ್ರಮ ಎಸಗಿರುವ ಬಗ್ಗೆ ಈಗಾಗಲೇ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ ಎಂದು ಹೇಳಿದ್ದಾರೆ.

2020ರಲ್ಲಿ ನಡೆದ 72.25 ಕೋಟಿ ರೂಪಾಯಿ ಮೊತ್ತದ ರಸ್ತೆ ಮತ್ತು ಚರಂಡಿ ಕಾಮಗಾರಿಯಲ್ಲಿ, ಕಡಿಮೆ ಬಿಡ್ ಮಾಡಿದ್ದ ಅರ್ಹ ಗುತ್ತಿಗೆದಾರರನ್ನು ಕೈಬಿಟ್ಟು ತಮಗೆ ಬೇಕಾದವರಿಗೆ ಲಾಭ ಮಾಡಿಕೊಡಲು ಅಧಿಕಾರಿಗಳ ಮೇಲೆ ಶಾಸಕರು ಒತ್ತಡ ಹೇರಿದ್ದಾರೆ. ಇದು ಟಿವಿಸಿಸಿ ಮುಖ್ಯ ಎಂಜಿನಿಯರ್ ಕಚೇರಿಯ ಟಿಪ್ಪಣಿಯಲ್ಲೇ ದಾಖಲಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಿ: ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ SDPI ಆಗ್ರಹ: CMಗೆ ಪತ್ರ

'ಸೌದಿ ಅರೇಬಿಯಾ ಮ್ಯಾಟ್ರಲ್ಲಿ ತಲೆ ಹಾಕಿದ್ರೋ ಹುಷಾರ್..': 'ಬ್ಲಡ್ ಬ್ರದರ್' ಪಾಕ್`ಗೆ ಹೌತಿ ಬಂಡುಕೋರರ ಧಮ್ಕಿ!

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು, ಲೈಂಗಿಕ ಕಿರುಕುಳ

ನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್; Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ! Video