ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧ Online Image
ರಾಜಕೀಯ

ಕರ್ನಾಟಕದ 4 ನಾಲ್ಕು MLC ಸ್ಥಾನಗಳಿಗೆ ಚುನಾವಣೆ ಘೋಷಣೆ; ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿದ ಆಯೋಗ

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಚುನಾವಣಾ ಆಯೋಗವು ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಕೇಂದ್ರ ಚುನಾವಣಾ ಆಯೋಗವು (ECI) ಕರ್ನಾಟಕದಲ್ಲಿ ಖಾಲಿಯಿರುವ ನಾಲ್ಕು ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯದಲ್ಲಿ ನಾಲ್ಕು ಸ್ಥಾನಕ್ಕೆ ಚುನಾವಣೆ

ಇದೇ ನವೆಂಬರ್ 11 ರಂದು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಶಾಸಕ ಚಿದಾನಂದ ಎಂ ಗೌಡ, ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಶಾಸಕ ಎಸ್.ವಿ. ಸಂಕನೂರ್, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಶಾಸಕ ಶಶೀಲ್ ಜಿ. ನಮೋಶಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಶಾಸಕ ಪುಟ್ಟಣ್ಣ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತಿದ್ದು, ಈ ನಾಲ್ವರ ಸ್ಥಾನಗಳನ್ನು ಭರ್ತಿ ಮಾಡಲು ಕೇಂದ್ರ ಚುನಾವಣಾ ಆಯೋಗವು ಮತದಾನ ದಿನಾಂಕ ಘೋಷಣೆಮಾಡಿದೆ. ಇನ್ನು ಈ ನಾಲ್ವರು ಶಾಸಕರು 2020 ರಲ್ಲಿ ಬಿಜೆಪಿಯಿಂದ ಆಯ್ಕೆಆಗಿದ್ದರು. ಆದರೆ, 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಪುಟ್ಟಣ್ಣ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

ಮುಂದುವರೆದು, ಈಗಾಗಲೇ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿವೆ. ಅದರಂತೆ, ಬಿಜೆಪಿ ಈಗಾಗಲೇ 3 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಒಂದು ಸ್ಥಾನವನ್ನು ಬಿಟ್ಟುಕೊಡುವ ಸಾಧ್ಯತೆಯಿದೆ. ಆ ಪ್ರಕಾರ, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ಜಿ. ನಮೋಶಿ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಕೆ.ಎಂ. ಸುರೇಶ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಇನ್ನು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಇದವರೆಗೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಹಾಗಾಗಿ, ಈ ಕ್ಷೇತ್ರವನ್ನ ಜೆಡಿಎಸ್ ಜೊತೆಗಿನ ಮೈತ್ರಿಯ ಕಾರಣದಿಂದ ಬಿಟ್ಟುಕೊಡುವ ಸಾಧ್ಯತೆಯಿದೆ. ಮತ್ತೊಂದೆಡೆ, ಕಾಂಗ್ರೆಸ್ ಪಕ್ಷದಿಂದ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಹೆಸರುಗಳು ಘೋಷಣೆಯಾಗಿವೆ.

ಕರ್ನಾಟಕದೊಂದಿಗೆ ನಾಲ್ಕು ರಾಜ್ಯಗಳಲ್ಲೂ ಚುನಾವಣೆ

ಕರ್ನಾಟಕದೊಂದಿಗೆ ಬಿಹಾರ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ವಿಧಾನ ಪರಿಷತ್ (MLC) ದ್ವೈವಾರ್ಷಿಕ ಚುನಾವಣೆಗಳ ವೇಳಾಪಟ್ಟಿಗಳು ಅಧಿಕೃತವಾಗಿ ಪ್ರಕಟವಾಗಿದೆ. ಅದರಂತೆ, ಉತ್ತರ ಪ್ರದೇಶ: ಒಟ್ಟು 11 ಸ್ಥಾನಗಳು (5 ಪದವೀಧರರ ಮತ್ತು 6 ಶಿಕ್ಷಕರ ಕ್ಷೇತ್ರಗಳು), ಬಿಹಾರ: ಒಟ್ಟು 8 ಸ್ಥಾನಗಳು (4 ಪದವೀಧರರ ಮತ್ತು 4 ಶಿಕ್ಷಕರ ಕ್ಷೇತ್ರಗಳು), ಮಹಾರಾಷ್ಟ್ರ: ಒಟ್ಟು 5 ಸ್ಥಾನಗಳು (3 ಪದವೀಧರರ ಮತ್ತು 2 ಶಿಕ್ಷಕರ ಕ್ಷೇತ್ರಗಳು) ಕೂಡ ಕರ್ನಾಟಕದೊಂದಿಗೆ ಚುನಾವಣೆ ಎದುರಿಸಲಿದೆ.

ಹಾಗಾದ್ರೆ, ಚುನಾವಣೆ ಯಾವಾಗ?

ಏತನ್ಮಧ್ಯೆ, ಚುನಾವಣಾ ಆಯೋಗದ ಪ್ರಕಾರ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ರಾಜ್ಯಗಳ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 29 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದ್ದು, ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ, ಈ ಎಲ್ಲ ಕ್ಷೇತ್ರಗಳಿಗೆ 2026ರ ಅಕ್ಟೋಬರ್ 23 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ

'ಚೀಟಿಂಗ್ ಸಮರ್ಥಿಸುತ್ತಿಲ್ಲ.. ಆದ್ರೆ ವ್ಯವಸ್ಥೆ ಸರಿಯಾಗಬೇಕು, ಸಾಹಿಲ್ ಸಾವಿಗೆ ನ್ಯಾಯಬೇಕು': ಪ್ರತಿಭಟನಾ ನಿರತ IIT Bombay ವಿದ್ಯಾರ್ಥಿಗಳು!

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 ‘ಟ್ರಂಪ್ ಟಿವಿ’ ಸ್ಟ್ರೀಮಿಂಗ್ ಆರಂಭ..!

ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ ಮಹಾ ಚರ್ಚೆ; ಸರ್ಕಾರದ ನಿಲುವೇನು..?

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!