ಆರ್.ಅಶೋಕ್ ಸಾಂದರ್ಭಿಕ ಚಿತ್ರ 
ರಾಜಕೀಯ

ಬರದ ಬದಲು CM ಬದಲಾವಣೆ ವಿಚಾರದಲ್ಲಿ ಗಮನ ಹರಿಸಿದ್ದಾರೆ, 2028ರಲ್ಲಿ ಕಾಂಗ್ರೆಸ್‌ ಮಣ್ಣು ಮುಕ್ಕುವುದು ಖಚಿತ..!

ಬರದ ವಿಚಾರದಲ್ಲಿ ಸರ್ಕಾರ ಜನರಿಗೆ ದ್ರೋಹ ಮಾಡಿದೆ. ರಾಜ್ಯ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಹಣಕಾಸು ಇಲಾಖೆಯೇ ಬಹಿರಂಗಪಡಿಸಿದೆ. ಸರ್ಕಾರ ತನ್ನ ಕಾರ್ಯವೈಖರಿಯನ್ನು ಸರಿಪಡಿಸಿಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು.

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂಗಾರು ಮಳೆ ಕೊರತೆಯಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರೂ ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಂಗಳವಾರ ಆರೋಪಿಸಿದ್ದಾರೆ.

ಬರದ ಬದಲು ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲೇ ಸರ್ಕಾರ ಗಮನ ಕೇಂದ್ರೀಕರಿಸಿತ್ತು, ಕಾಂಗ್ರೆಸ್‌ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದರು. ಸರ್ಕಾರ ಇದೇ “ಧೋರಣೆ” ಮುಂದುವರಿಸಿದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮಣ್ಣು ಮುಕ್ಕುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ಬರದ ವಿಚಾರದಲ್ಲಿ ಸರ್ಕಾರ ಜನರಿಗೆ ದ್ರೋಹ ಮಾಡಿದೆ. ರಾಜ್ಯ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಹಣಕಾಸು ಇಲಾಖೆಯೇ ಬಹಿರಂಗಪಡಿಸಿದೆ. ಸರ್ಕಾರ ತನ್ನ ಕಾರ್ಯವೈಖರಿಯನ್ನು ಸರಿಪಡಿಸಿಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಇದು ಸರ್ಕಾರಕ್ಕೆ ಪರೀಕ್ಷೆಯ ಸಮಯ. ಈ ಪರೀಕ್ಷೆಯಲ್ಲಿ ಸರ್ಕಾರ ವಿಫಲವಾದರೆ 2028ರಲ್ಲಿ ಶೂನ್ಯಕ್ಕೆ ಇಳಿಯಲಿದೆ ಎಂದು ಹೇಳಿದ್ದಾರೆ.

ಏಪ್ರಿಲ್‌ನಲ್ಲೇ ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂಬ ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಸರ್ಕಾರಕ್ಕೆ ತಲುಪಿತ್ತು. ಆದರೂ ರಾಜ್ಯ ಸರ್ಕಾರ ಎಷ್ಟು ಸಭೆಗಳನ್ನು ನಡೆಸಿತು..?

ಮೇ ಮತ್ತು ಜೂನ್‌ ಬಂದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಎಲ್‌ನಿನೊ ಪರಿಣಾಮ ಉಂಟಾಗಬಹುದು ಎಂದು ಕೇಂದ್ರ ಸರ್ಕಾರ ಸೂಚಿಸಿದ ಬಳಿಕವೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.

ಏಪ್ರಿಲ್‌ನಲ್ಲೇ ಬರಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಕಳುಹಿಸಲಾಗಿತ್ತು. ಆದರೆ, ಬರ ಘೋಷಿಸಲು ಸರ್ಕಾರ ನಾಲ್ಕು ತಿಂಗಳು ತೆಗೆದುಕೊಂಡಿತು ಎಂದು ಹೇಳಿದರು.

ಹಿರಿಯ ಕಾಂಗ್ರೆಸ್‌ ಶಾಸಕರಾದ ಎಚ್‌.ಕೆ. ಪಾಟೀಲ್‌ ಮತ್ತು ಅಪ್ಪಾಜಿ ಸಿ.ಎಸ್‌. ನಾಡಗೌಡ ಸೇರಿದಂತೆ ಹಲವು ಶಾಸಕರು ತಮ್ಮ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ 2ರಂದು ನಾನು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ಇದುವರೆಗೆ ಯಾವುದೇ ಉತ್ತರ ಬಂದಿಲ್ಲ. ಹಾಗಾದರೆ ಜನರಿಗೆ ಸರ್ಕಾರದಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ?” ಎಂದು ಪ್ರಶ್ನಿಸಿದರು. ಇದೇ ವೇಳೆ ಮೋಡ ಬಿತ್ತನೆ ವಿಚಾರದಲ್ಲೂ ಸರ್ಕಾರದ ಕಾರ್ಯವೈಖರಿಯನ್ನೂ ಅವರು ಟೀಕಿಸಿದರು.

ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದರು. ಕಾಂಗ್ರೆಸ್‌ ಶಾಸಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರೂ.28 ಕೋಟಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿದರು.

ಇದೇ ವೇಳೆ ರೈತರ ಬೆಳೆ ಸಾಲ ವಸೂಲಾತಿಗೆ ವಿಧಿಸಿರುವ ತಡೆ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಕ್ಕೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ ಅವರು, ಸಂಕಷ್ಟದಲ್ಲಿರುವ ರೈತರಿಗೆ ಸಾಲ ನೀಡುತ್ತಿರುವ ಖಾಸಗಿ ಹಣಕಾಸುದಾರರ ಚಟುವಟಿಕೆಗಳನ್ನು ನಿಯಂತ್ರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ, ವಿಧಾನ ಪರಿಷತ್‌ನ ಪ್ರತಿಪಕ್ಷ ಸದಸ್ಯರು ಬರಪೀಡಿತ ತಾಲೂಕುಗಳಲ್ಲಿ ಸರ್ಕಾರದ ಸಿದ್ಧತೆ, ಅನುದಾನದ ಬಳಕೆ ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಮಂಗಳವಾರ ಪ್ರಶ್ನೆಗಳನ್ನು ಎತ್ತಿದರು.

ಚರ್ಚೆ ಆರಂಭಿಸಿ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು, ಡಿಕೆ ಶಿವಕುಮಾರ್‌ ಅವರನ್ನು ಟೀಕಿಸಿ, ಬರಪೀಡಿತ ಪ್ರದೇಶಗಳಿಗೆ ಹೆಲಿಕಾಪ್ಟರ್‌ನಲ್ಲಿ ಪ್ರವಾಸ ಕೈಗೊಂಡ ಮೊದಲ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಶಿವಕುಮಾರ್‌ ಮಾಡಲಿದ್ದಾರೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಆರ್ಥಿಕ ಸಂಕಷ್ಟದಲ್ಲಿ ರಾಜ್ಯ ಸರ್ಕಾರ: ಯಾವ ಯೋಜನೆ ಕೈಬಿಡಬೇಕು, ಯಾವುದು ಜಾರಿಗೆ ತರಬೇಕೆಂಬುದು ನನಗೆ ಗೊತ್ತು; ಹಣಕಾಸು ಇಲಾಖೆ ಸಲಹೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆ

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ' ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು!