ಕುಮಾರಸ್ವಾಮಿ - ವಿಜಯೇಂದ್ರ 
ರಾಜಕೀಯ

ಟಾರ್ಗೆಟ್‌ 180: ಕುಮಾರಸ್ವಾಮಿ, ನನ್ನ ಮಧ್ಯೆ CM ರೇಸ್‌ ಸೃಷ್ಟಿಸಬೇಡಿ; ಮುಖ್ಯಮಂತ್ರಿ ಯಾರು ಅನ್ನೋದನ್ನು ಹೈಕಮಾಂಡ್ ನಿರ್ಧರಿಸುತ್ತೆ: ವಿಜಯೇಂದ್ರ

ಇಂದು ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ, ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23 ರಂದು ನಡೆಯಲಿರುವ ಚುನಾವಣೆ ಕುರಿತು ಚರ್ಚಿಸಲು ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಕರೆಯಲಾಗಿತ್ತು.

ಬೆಂಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಹಾಗೂ ನನ್ನ ಮಧ್ಯೆ ಮುಖ್ಯಮಂತ್ರಿ ರೇಸ್‌ ಸೃಷ್ಟಿಸಬೇಡಿ. ಮುಖ್ಯಮಂತ್ರಿ ಯಾರು ಅನ್ನೋದನ್ನ ಹೈಕಮಾಂಡ್‌ ನಿರ್ಧರಿಸುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶನಿವಾರ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.

ಇಂದು ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ, ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23 ರಂದು ನಡೆಯಲಿರುವ ಚುನಾವಣೆ ಕುರಿತು ಚರ್ಚಿಸಲು ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಕರೆಯಲಾಗಿತ್ತು.

ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಮುಂಬರುವ ಬಿಜೆಪಿ-ಜೆಡಿಎಸ್ ಸರ್ಕಾರ ರಚಿಸುವ ಚರ್ಚೆಯ ಜೊತೆಗೆ ಮುಂದಿನ ಸಿಎಂ ಬಗ್ಗೆಯೂ ಚರ್ಚಿಸಲಾಗಿದೆ. ಮುಂದಿನ ಸಿಎಂ ಯಾರು ಅಂತ ಹೈಕಮಾಂಡ್ ನಿರ್ಧಾರ ಮಾಡಲಿದೆ. ಇದರ ಬಗ್ಗೆ ಮುಖಂಡರು, ಕಾರ್ಯಕರ್ತರು ಬಹಿರಂಗ ಚರ್ಚೆ ನಡೆಸಬಾರದು. ಕುಮಾರಸ್ವಾಮಿ-ವಿಜಯೇಂದ್ರ ಪರ ರೇಸ್ ಸೃಷ್ಟಿಸಬಾರದು. ಯಾವುದೇ, ಘೋಷಣೆ ಮಾಡಬಾರದು ಎಂದು ಸೂಚಿಸಿದರು.

ಕಾರ್ಯಕರ್ತರಿಗೆ ಇದರ ಬಗ್ಗೆ ಗೊಂದಲ ಬೇಡ. ಎನ್‌ಡಿಎ ಸರ್ಕಾರ (NDA Govt) ಅಧಿಕಾರಕ್ಕೆ ಬರೋದು ನಿಶ್ಚಿತ. ಸಿಎಂ ಯಾರಾಗಬೇಕು ಅಂತ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.

ಇದೇ ವೇಳೆ ಮಾತವಾಡಿದ ಕುಮಾರಸ್ವಾಮಿ ಅವರು, ಮುಂದಿನ ಎಲ್ಲ ಚುನಾವಣೆಗಳನ್ನೂ ಎನ್‌ಡಿಎ ಮೈತ್ರಿಯಡಿ ಒಗ್ಗಟ್ಟಿನಿಂದ ಎದುರಿಸಬೇಕು. ಬಿಹಾರ ಮಾದರಿಯಲ್ಲಿ ಮುಂದಿನ ಚುನಾವಣೆ ನಡೆಸಬೇಕು. ರಾಜ್ಯದಲ್ಲಿ ನಾವು 180 ಸ್ಥಾನ ಗೆಲ್ಲಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟಾರ್ಗೆಟ್ ಫಿಕ್ಸ್ ಮಾಡಿದರು.

ಕುಮಾರಸ್ವಾಮಿ ಅಭಿಪ್ರಾಯವನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ಸ್ಥಳೀಯ ಕಾರ್ಯಕರ್ತರು, ನಾಯಕರಿಗೆ ಈ ಟಾರ್ಗೆಟ್ ರೀಚ್ ಮಾಡಬೇಕು ಎಂದ ನಿರ್ಣಯಿಸಿದ ದೋಸ್ತಿ ನಾಯಕರು ಬಿಹಾರ ಮಾದರಿಯಲ್ಲಿ ಚುನಾವಣೆ, ಟಾರ್ಗೆಟ್ 180 ಅಂತ ಸಭೆಯಲ್ಲಿ ಘೋಷಣೆ ಮೊಳಗಿಸಿದ್ರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ? ಸತ್ಯಾಂಶವನ್ನು ದೇಶದ ಮುಂದೆ ಬಹಿರಂಗಪಡಿಸಿ: ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಆಗ್ರಹ

CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

‘ಪ್ರಾರ್ಥನೆಯ ದಿನ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ'; ಭಾನುವಾರ ಬ್ಯಾಂಕ್‌ ತೆರೆಯುವ ನಿರ್ಧಾರಕ್ಕೆ ಚರ್ಚ್‌ ಮಂಡಳಿ ವಿರೋಧ!

Asian Games: ಇರಾನ್ ನ್ನು ಮಣಿಸಿ ಚಿನ್ನ ಮುಡಿಗೇರಿಸಿಕೊಂಡ ಭಾರತೀಯ ಪುರುಷರ ಕಬಡ್ಡಿ ತಂಡ

ಕೊನೆಯ ವಿಶ್ವಕಪ್: ಏಕದಿನಕ್ಕೂ ನಿವೃತ್ತಿ ಘೋಷಿಸುವ ಸುಳಿವು ನೀಡಿದ ವಿರಾಟ್ ಕೊಹ್ಲಿ; ಅಭಿಮಾನಿಗಳು ಶಾಕ್!