ಬಿಕೆ ಹರಿಪ್ರಸಾದ್, ಪ್ರದೀಪ್ ಈಶ್ವರ್ ಸಾಂದರ್ಭಿಕ ಚಿತ್ರ 
ರಾಜಕೀಯ

CM ಅಭ್ಯರ್ಥಿ ಹೇಳಿಕೆ ಎಫೆಕ್ಟ್?: ಮುಂದಿನ ಬಾರಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬೇಡಿ- ಕಾಂಗ್ರೆಸ್ ಮುಖಂಡರಿಂದಲೇ KPCC ಅಧ್ಯಕ್ಷರಿಗೆ ದೂರು

ಈ ಸಂಬಂಧ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನೊಳಗೊಂಡ ನಿಯೋಗ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದೆ.

ಚಿಕ್ಕಬಳ್ಳಾಪುರ: 25 ವರ್ಷಗಳ ಬಳಿಕ ನಾನು ಸಿಎಂ ಆಗಬೇಕು ಎಂಬ ಆಸೆ ಇದೆ ಎಂದು ಹೇಳಿದ್ದ ಶಾಸಕ ಪ್ರದೀಪ್ ಈಶ್ವರ್‌ ಅವರಿಗೆ ಸೋಮವಾರ ಕಾಂಗ್ರೆಸ್ ಮುಖಂಡರೇ ಬಿಗ್ ಶಾಕ್ ನೀಡಿದ್ದು, ಮುಂದಿನ ಬಾರಿ ಅವರಿಗೆ ಟಿಕೆಟ್ ನೀಡಬೇಡಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಿಗೆ ದೂರು ನೀಡಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್‌ನ ಕೆಲ ಮುಖಂಡರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನೊಳಗೊಂಡ ನಿಯೋಗ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ, ದೂರು ನೀಡಿದೆ ಎನ್ನಲಾಗಿದೆ.

ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿ, ಪಕ್ಷ ಸಂಘಟನೆ ಹಾಗೂ ಸ್ಥಳೀಯ ಚುನಾವಣೆಗಳ ಕುರಿತು ಹಲವು ಅಹವಾಲುಗಳನ್ನು ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರದೀಪ್ ಈಶ್ವರ್ ಕ್ಷೇತ್ರಕ್ಕೆ ಸರಿಯಾಗಿ ಬರುತ್ತಿಲ್ಲ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಕರೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಗಳ ಸುರಿಮಳೆ ಸುರಿಸಿದ್ದಾರೆ.

ನಿಷ್ಠಾವಂತ ಕಾರ್ಯಕರ್ತರಿಗೆ ನಾಮನಿರ್ದೇಶನ ಸ್ಥಾನಗಳನ್ನು ನೀಡುತ್ತಿಲ್ಲ. ಸ್ಥಳೀಯ ಚುನಾವಣೆಗಳಲ್ಲಿ ಶಾಸಕರು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗಿದ್ದು, ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬಾರದು ಎಂದು ಮುಖಂಡರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡವರಿಗೆ ಬಿಕ್ ಶಾಕ್; ದಂಡ ವಸೂಲಿಗೆ ವಿದ್ಯುತ್ ಬಿಲ್ ಲಿಂಕ್ ಮಾಡಿ: ಸುಪ್ರೀಂ ಕೋರ್ಟ್

ತೈಲಾಘಾತಕ್ಕೆ ಷೇರುಪೇಟೆ ತತ್ತರ: ಒಂದೇ ತಿಂಗಳಲ್ಲಿ ಸೆನ್ಸೆಕ್ಸ್-ನಿಫ್ಟಿ ಶೇ.5ಕ್ಕೂ ಹೆಚ್ಚು ಕುಸಿತ; 17 ಲಕ್ಷ ಕೋಟಿ ರೂ ನಷ್ಟ

ನೇಪಾಳದಲ್ಲಿ ಮತ್ತೊಂದು ಭಯಾನಕ ಭೂಕುಸಿತ; 6 ಸೆಕೆಂಡ್‌ನಲ್ಲಿ ಬೆಟ್ಟವೇ ಕಣ್ಮರೆ, ಕನಿಷ್ಠ 24 ಮಂದಿ ಸಾವು, 14 ಮಂದಿ ನಾಪತ್ತೆ, Video

ಹಿಂದು ವಿರೋಧಿ ಬಾಯಲ್ಲಿ 'ಓಂ ಕಾಳಿ, ಜೈ ಕಾಳಿ' ಘೋಷಣೆ: CM ಜೋಸೆಫ್ ವಿಜಯ್ ಎದುರಿಸಲು ಉದಯನಿಧಿ ಸ್ಟಾಲಿನ್ ಹೊಸ ತಂತ್ರ!

ಕೋರ್ಟ್​ನಲ್ಲಿ ಸತತ ಮೂರು ಗಂಟೆಗಳ ಕಾಲ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿದ ಪ್ರದೋಷ್; ದರ್ಶನ್ ಬಗ್ಗೆ ಹೇಳಿದ್ದೇನು?