ಶ್ರವಣಬೆಳಗೊಳ: 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಯಚೂರಿನಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಸಮಿತಿ ನಿರ್ಧರಿಸಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ರಾಯಚೂರಿನಲ್ಲಿ 82ನೇ ಸಮ್ಮೇಳನವನ್ನು ನಡೆಸಲು ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ.
ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ 81ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಮಾತನಾಡಿದ ಪುಂಡಲೀಕ ಹಾಲಂಬಿ ಅವರು ಅಧಿಕೃತವಾಗಿ ಘೋಷಿಸಿದರು.
ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಮಿತಿ ಅಧ್ಯಕ್ಷ ಹಾಲಂಬಿ, 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆ ಬಗ್ಗೆ ಈ ಹಿಂದೆ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ಹಾವೇರಿಯಲ್ಲಿ ನಡೆಸಬೇಕೆಂದು ತೀರ್ಮಾನಿಸಲಾಗಿತ್ತು. ಆದರೆ ಅನೇಕ ಕಾರಣಗಳಿಂದ ಶ್ರವಣಬೆಳಗೊಳಕ್ಕೆ ವರ್ಗಾವಣೆ ಮಾಡಬೇಕಾಯಿತು. ಆದರೆ 82ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆಗೆ ಯಾವುದೇ ಕಾರಣಗಳು ಬಂದರೂ ತಪ್ಪುವುದಿಲ್ಲ, ರಾಯಚೂರಿನಲ್ಲಿಯೇ ಆಯೋಜಿಸಲಾಗುವುದು ಎಂದರು.