ಟ್ವಿಟರ್(ಸಂಗ್ರಹ ಚಿತ್ರ) 
ವಿಜ್ಞಾನ-ತಂತ್ರಜ್ಞಾನ

ಸಾಮಾಜಿಕ ಜಾಲತಾಣಗಳಲ್ಲಿ ಉಗ್ರರ ಸಂದೇಶ ಹೇಗೆ ಹರಡುತ್ತದೆ?: ನಡೆಯುತ್ತಿದೆ ಸಂಶೋಧನೆ

ವಾಷಿಂಗ್ ಟನ್: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುವ ಭಯೋತ್ಪಾದಕ ಸಂಘಟನೆಗಳ ಮಾಹಿತಿಯ ಮಾದರಿಯ ಬಗ್ಗೆ ಸಂಶೋಧಕರು ಅಧ್ಯಯನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಹರಡುವ ಮಾಹಿತಿ, ಹಾಗೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಜನರ ಗುಂಪುಗಳ ಬಗ್ಗೆ ಅಧ್ಯಯನ ನಡೆಯಲಿದೆ. 
ಅರಿಜೋನ ಸ್ಟೇಟ್ ವಿಶ್ವವಿದ್ಯಾನಿಲಯದಿಂದ ಅಧ್ಯಯನ ನಡೆಯುತ್ತಿದ್ದು, ವಿಧ್ವಂಸಕ ಕೃತ್ಯ, ಹಿಂಸೆಯನ್ನು ಅಂತರ್ಜಾಲದಲ್ಲಿ ಉತ್ತೇಜಿಸುವ ಉಗ್ರಗಾಮಿಗಳ ಜಾಲವನ್ನು ಪತ್ತೆಮಾಡುವುದಕ್ಕೆ ಸಹಕಾರಿಯಾಗಲಿದೆ ಎಂದು ವಾಷಿಂಗ್ ಟನ್ ನ ಸ್ಥಳೀಯ ಪತ್ರಿಕೆ ವರದಿ ಮಾಡಿದೆ.  
ಇಸೀಸ್ ನಂತಹ ಉಗ್ರ ಸಂಘಟನೆಗಳು ತಾವು ವಾಸಿಸುವ ಸಮಾಜದಿಂದ ದೂರದಲ್ಲಿದ್ದೇವೆ ಎಂದು ಭಾವಿಸುತ್ತಾರೆ. ಪಾಶ್ಚಾತ್ಯ ರಾಷ್ಟ್ರಗಳಿಂದ ಹೊಸ ತಂಡಗಳನ್ನು ನೇಮಕ ಮಾಡಿಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು ಅಧ್ಯಯನದಲ್ಲಿ ನಿರತರಾಗಿರುವ ಸಂಶೋಧಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಸಮಾಜದಿಂದ ದೂರ ಸರಿದಿರುವ ವ್ಯಕ್ತಿಗಳು  ಪ್ರಚಾರದ ಸಾಂಪ್ರದಾಯಿಕ ರೂಪಗಳಿಗಿಂತಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದ ಚಿತ್ರಗಳಿಗೆ ಬಲಿಯಾಗುತ್ತಾರೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ. ಆದ್ದರಿಂದ  ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುವ ಭಯೋತ್ಪಾದಕ ಸಂಸ್ಥೆಗಳ ಮಾಹಿತಿಯ ಮಾದರಿಯ ಬಗ್ಗೆ  ಹೆಚ್ಚಿನ ಅಧ್ಯಯನ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ