ನವದೆಹಲಿ: ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಯೋಜನೆ (ಪಿಎಸ್ ಎಲ್‍ವಿ) ಮುಂದುವರಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.
ಅದಕ್ಕಾಗಿ ಕೇಂದ್ರ ಸಂಪುಟ ರು.3,090 ಕೋಟಿ ಮೊತ್ತ ನೀಡಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರದ ಈ ನಿರ್ಧಾರದಿಂದ ಪಿಎಸ್‍ಎಲ್‍ವಿ ಉಡಾವಣೆ, ತಂತ್ರಜ್ಞಾನ ಅಭಿವೃದ್ಧಿಗೆ ನೆರವಾಗಲಿದೆ. ಇದೇ ವೇಳೆ, ದೇಶದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಹಾಲಿ ಇರುವ ನಿಯಮ ಗಳಿಗೆ ಬದಲಾವಣೆ ತರಲು ಕೇಂದ್ರ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.