ಫಿಲಿಪ್ಸ್ ಸಂಸ್ಥೆಯಿಂದ ಮೊಬೈಲ್ ಸಂಜೀವಿನಿ ಆ್ಯಪ್ ಬಿಡುಗಡೆ (ಸಂಗ್ರಹ ಚಿತ್ರ) 
ವಿಜ್ಞಾನ-ತಂತ್ರಜ್ಞಾನ

ಫಿಲಿಪ್ಸ್ ನಿಂದ `ಮೊಬೈಲ್ ಸಂಜೀವಿನಿ' ಅಪ್ಲಿಕೇಷನ್

ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಫಿಲಿಪ್ಸ್ ಕಂಪನಿ ಶುಶ್ರೂಷಕಿಯರಿಗೆ ನೆರವಾಗುವ `ಮೊಬೈಲ್ ಸಂಜೀವಿನಿ' ಎಂಬ ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಿದೆ...

ಬೆಂಗಳೂರು: ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಫಿಲಿಪ್ಸ್ ಕಂಪನಿ ಶುಶ್ರೂಷಕಿಯರಿಗೆ ನೆರವಾಗುವ `ಮೊಬೈಲ್ ಸಂಜೀವಿನಿ' ಎಂಬ ಮೊಬೈಲ್ ಅಪ್ಲಿಕೇಷನ್  ಬಿಡುಗಡೆ ಮಾಡಿದೆ.

ಖಾಸಗಿ ಹೋಟೆಲ್‍ನಲ್ಲಿ ನಡೆದ  ಫಿಲಿಪ್ಸ್ ಡಿಜಿಟಲ್ ಹೆಲ್ತ್ ಕೇರ್ ಕಾನ್ ಕ್ಲೇವ್2015ರಲ್ಲಿ ಮಾತನಾಡಿದ ಫಿಲಿಪ್ಸ್ ಇನ್ನೋವೇಷನ್ ಕ್ಯಾಂಪಸ್ ಸಿಇಒ ಶ್ರೀನಿವಾಸ್ ಪ್ರಸಾದ್ ಈ ವಿಷಯ  ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕಿಯರು ರೋಗಿಗಳ ಕುಟುಂಬಗಳಿಗೆ ಸಂಬಂಧಿಸಿದ ದತ್ತಾಂಶಗಳನ್ನು ಹೊರುವ ಬದಲು ಈ ಅಪ್ಲಿಕೇಷನ್ ಬಳಸಿದರೆ  ಹೆಚ್ಚು ಉಪಯೋಗವಾಗಲಿದೆ ಎಂದು ಹೇಳಿದರು. ಸ್ಮಾರ್ಟ್ಫೋನ್ ಬಳಸುವಂತಹವರು ಈ ಅ್ಯಪ್ ಡೌನ್‍ಲೋಡ್ ಮಾಡಿಕೊಳ್ಳಬಹುದು. 2025ರ ವೇಳೆಗೆ ಮೂರು ಬಿಲಿಯನ್ ಜನರಿಗೆ  ತಲುಪುವ ಗುರಿ ಹೊಂದಲಾಗಿದೆ. ಈ ಮೂಲಕ ಆರೋಗ್ಯ ಸೇವೆ ಒದಗಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್, ಡಿಜಿಟಲ್ ಹಾಗೂ ಕ್ಲೌಡ್ ತಂತ್ರಜ್ಞಾನಗಳನ್ನು ಮೊಬೈಲ್ ಅಪ್ಲಿಕೇಷನ್‍ನಲ್ಲಿ  ಅಳವಡಿಸಲಾಗಿದೆ ಎಂದು ತಿಳಿಸಿದರು. ಮೆಡ್‍ವೆಲ್ ವೆಂಚರ್ಸ್ ಅಧ್ಯಕ್ಷ ವಿಶಾಲ್ ಬಾಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video