ಉಡಾವಣೆಗೆ ಸಜ್ಜಾದ ಜಿಎಸ್ಎಲ್ ವಿ ಎಫ್ 05 ಉಡಾವಣಾ ವಾಹಕ (ಚಿತ್ರಕೃಪೆ: ಇಸ್ರೋ) 
ವಿಜ್ಞಾನ-ತಂತ್ರಜ್ಞಾನ

ಅತ್ಯಾಧುನಿಕ ಹವಾಮಾನ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ!

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅತ್ಯಾಧುನಿಕ ಮತ್ತು ಮುಂದುವರೆದ ಹವಾಮಾನ ಉಪಗ್ರಹ ಇನ್ಸಾಟ್ 3ಡಿಆರ್ ಉಡಾವಣೆಗೆ ಸಜ್ಜಾಗಿದ್ದು, ಗುರುವಾರ ಉಡಾವಣೆಗೆ ಸಮಯ ನಿಗದಿಪಡಿಸಲಾಗಿದೆ.

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅತ್ಯಾಧುನಿಕ ಮತ್ತು ಮುಂದುವರೆದ ಹವಾಮಾನ ಉಪಗ್ರಹ ಇನ್ಸಾಟ್ 3ಡಿಆರ್ ಉಡಾವಣೆಗೆ ಸಜ್ಜಾಗಿದ್ದು, ಗುರುವಾರ ಉಡಾವಣೆಗೆ  ಸಮಯ ನಿಗದಿಪಡಿಸಲಾಗಿದೆ.

ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ  ಮಾಡಲಾಗಿತ್ತು. ಇದಾದ ಬಳಿಕ 2015ರ ಆಗಸ್ಟ್ ನಲ್ಲಿ ಜಿಸ್ಯಾಟ್-6 ಉಪಗ್ರಹವನ್ನು ಜಿಎಸ್ ಎಲ್ ವಿ-ಡಿ6 ಉಡಾವಣಾ ವಾಹಕದ ಮೂಲಕ ಇದೇ ಶ್ರೀಹರಿಕೋಟಾದಿಂದ ಉಡಾವಣೆ ಮಾಡಿ  ಇಸ್ರೋ ಯಶಸ್ಸು ಸಾಧಿಸಿತ್ತು. ಇದರ ಮುಂದುವರೆದ ಭಾಗವಾಗಿ ನಾಳೆ ಇನ್ಸಾಟ್ 3ಡಿಆರ್ ಉಪಗ್ರಹವನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ  ಕೇಂದ್ರದಿಂದ ಉಡಾವಣೆ ಮಾಡಲು ಇಸ್ರೋ ಸಕಲ ಸಿದ್ಧತೆ ಪೂರ್ಣಗೊಳಿಸಿದೆ.

ಸ್ಕಾಟ್‍ಸ್ಯಾಟ್ ದೇಶೀಯವಾಗಿ ಅಭಿವೃದ್ಧಿಪಡಿಸಿದ ಹವಾಮಾನ ಮುನ್ಸೂಚನೆ ನೀಡುವ ಉಪಗ್ರಹವಾಗಿದೆ. ಸಾಗರದ ಮೇಲ್ಭಾಗದಲ್ಲಿ ಬೀಸುವ ಮಾರುತಗಳನ್ನು ವೀಕ್ಷಿಸುವ ಮೂಲಕ  ಚಂಡಮಾರುತವನ್ನು ಮೊದಲೇ ಗ್ರಹಿಸಿ ಎಚ್ಚರಿಕೆ ನೀಡುತ್ತದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ. ಸ್ಕಾಟ್‍ಸ್ಯಾಟ್ ಉಪಗ್ರಹವನ್ನು ಅಲ್ಜೇರಿಯಾದ ಉಪಗ್ರಹದ ಜತೆ ಉಡಾವಣೆ  ಮಾಡಲು ಉದ್ದೇಶಿಸಲಾಗಿದ್ದು, ಜಿಎಸ್ಎಲ್ ವಿ ಎಫ್ 05 ಉಡಾವಣಾ ವಾಹಕ 2, 211 ಕೆಜೆ ತೂಕವಿರುವ ಈ ಉಪಗ್ರಹ ಸೇರಿದಂತೆ ಈ ಅಲ್ಜೇರಿಯಾ ಉಪಗ್ರಹವನ್ನು ಹೊತ್ತು ಕಕ್ಷೆಗೆ ಸಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT