2019 ರ ವರ್ಷಾರಂಭದ ವೇಳೆಗೆ ಚಂದ್ರಯಾನ-2 ಉಡಾವಣೆ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-2 ನ್ನು 2019 ರ ವರ್ಷಾರಂಭದಲ್ಲಿ ಉಡಾವಣೆ ಮಾಡುವ ಸಾಧ್ಯತೆಗಳಿವೆ.
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-2 ನ್ನು 2019 ರ ವರ್ಷಾರಂಭದಲ್ಲಿ ಉಡಾವಣೆ ಮಾಡುವ ಸಾಧ್ಯತೆಗಳಿವೆ.
ಜನವರಿ 3 ಅಥವಾ ಫೆ.16 ರಂದು ಚಂದ್ರಯಾನ-2 ನ್ನು ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಅಧ್ಯಕ್ಷ ಕೆ ಶಿವನ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಚಂದ್ರಯಾನ-2 ಮೂಲಕ ಚಂದ್ರನ ದಕ್ಷಿಣ ದೃವ ಅಧ್ಯಯನಕ್ಕಾಗಿ ಇದೇ ಮೊದಲ ಬಾರಿಗೆ ಬಾಹ್ಯಾಕಾಶನೌಕೆಯೊಂದನ್ನು ಕಳಿಸುವ ಹೆಗ್ಗಳಿಗೆ ಭಾರತದ್ದಾಗಲಿದೆ.
ಚಂದ್ರಯಾನ-1 ನ್ನು ಅಕ್ಟೋಬರ್ 2008 ರಲ್ಲಿ ಉಡಾವಣೆ ಮಾಡಲಾಗಿತ್ತು. ಚಂದ್ರಯಾನ-2 ರ ಉಡಾವಣೆ ಈ ವರ್ಷದ ಏಪ್ರಿಲ್ ನಲ್ಲಿ ನಿಗದಿಯಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.