ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಒಡಿಶಾದ ಕರಾವಳಿ ತೀರ ಪ್ರದೇಶದಿಂದ ಇಂದು ಪರಮಾಣು ಕಾರ್ಯತಂತ್ರದ ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಬಾಲಸೂರ್ : ಒಡಿಶಾದ ಕರಾವಳಿ ತೀರ ಪ್ರದೇಶದಿಂದ ಇಂದು ಪರಮಾಣು ಕಾರ್ಯತಂತ್ರದ ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ ಬೆಳಗ್ಗೆ 8-30ರ ಸುಮಾರಿನಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿದೆ.
ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ ಉಡಾಯಿಸಲಾದ ಸ್ವದೇಶಿ ನಿರ್ಮಿತ ಅಗ್ನಿ-5 ಅಂತರ ಖಂಡಾಂತರ ಕ್ಷಿಪಣಿ ಯಶಸ್ವಿಯಾದ ಬೆನ್ವಲ್ಲೇ ಈಗ ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಗೊಂಡಿದೆ.
ಅಗ್ನಿ-4 ಕ್ಷಿಪಣಿ ಪರಮಾಣು ಹಾಗೂ ಸಾಂಪ್ರದಾಯಿಕ ಶಸಾಸ್ತ್ರಗಳನ್ನು ಕೊಂಡೊಯ್ಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.