ವಿಜ್ಞಾನ-ತಂತ್ರಜ್ಞಾನ

ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ: ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆ

Srinivas Rao BV
ನವದೆಹಲಿ: ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ ಹರಡಿ ಹತ್ಯೆ ಪ್ರಕರಣಗಳು ಸಂಭವಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. 
ಕಳೆದ 2 ತಿಂಗಳಲ್ಲಿ ಮಕ್ಕಳ ಕಳ್ಳರ ವದಂತಿಗಳಿಗೆ ಸುಮಾರು 20 ಕ್ಕೂ ಹೆಚ್ಚು ಜನರು ಬಲಿಯಾಗಿದ್ದು ಇತ್ತೀಚೆಗೆ ಮಹಾರಾಷ್ಟ್ರದಲ್ಲಿ 5 ರನ್ನು ಹೊಡೆದು ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿದ್ದ ಕೇಂದ್ರ ಸರ್ಕಾರ ವಾಟ್ಸ್ ಆಪ್ ನಲ್ಲಿ ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ವಾಟ್ಸ್ ಆಪ್ ಗೆ ಸೂಚನೆ ನೀಡಿತ್ತು. ಈಗ ರಾಜ್ಯ ಸರ್ಕಾರಗಳಿಗೂ ಸುತ್ತೋಲೆ ಹೊರಡಿಸಿರುವ ಕೇಂದ್ರ ಸರ್ಕಾರದ ಗೃಹ ಇಲಾಖೆ,  ಜನಸಮೂಹದಿಂದ ನಡೆಯುವ ಹತ್ಯೆಯನ್ನು ತಡೆಗಟ್ಟಬೇಕು ಎಂದು ಹೇಳಿದೆ.
ಕಮ್ಯುನಿಟಿ ಔಟ್ ರೀಚ್ ಕಾರ್ಯಕ್ರಮದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಬೇಕೆಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಇಲಾಖೆ ವಕ್ತಾರರು ಹೇಳಿದ್ದಾರೆ.  ಅಷ್ಟೇ ಅಲ್ಲದೇ ಮಕ್ಕಳ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ತನಿಖೆ ನಡೆಸಿ ಜನರಲ್ಲಿ ಭರವಸೆ ಮೂಡಿಸಿ ಎಂದೂ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ. 
SCROLL FOR NEXT