ಚಂದ್ರಯಾನ-2 ಉಡಾವಣೆ: ನಭಕ್ಕೆ ಚಿಮ್ಮಿದ 'ಬಾಹುಬಲಿ'
ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ...
ಶ್ರೀಹರಿಕೋಟ(ಆಂಧ್ರಪ್ರದೇಶ): ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ.
ಬಾಹುಬಲಿ ಎಂದು ಅಡ್ಡ ಹೆಸರಿನಿಂದ ಕರೆಯಲ್ಪಡುವ ಚಂದ್ರಯಾನ-2 ಗಗನ ನೌಕೆಯನ್ನು ಜಿಎಸ್ಎಲ್ ವಿಎಂಕೆ 3-ಎಂ1 ರಾಕೆಟ್ ನಭಕ್ಕೆ ಕಳುಹಿಸಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಲಾಗಿದೆ.
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಕೊನೆ ಗಳಿಗೆಯಲ್ಲಿ ಮುಂದೂಡಲ್ಪಟ್ಟಿದ್ದ ಚಂದ್ರಯಾನ-2 ನೌಕೆಯನ್ನು ಇಂದು ಇಸ್ರೊ ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಇಸ್ರೋ ವಿಜ್ಞಾನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.