ಚಂದ್ರಯಾನ-2 
ವಿಜ್ಞಾನ-ತಂತ್ರಜ್ಞಾನ

ಚಂದ್ರಯಾನ-2 ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ- ಇಸ್ರೋ

ನಿನ್ನೆ ನಭದತ್ತ ಚಿಮ್ಮಿದ ಚಂದ್ರಯಾನ-2 ಗಗನ ನೌಕೆ ಉತ್ತಮವಾಗಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಇಸ್ರೋ ಇಂದು ತಿಳಿಸಿದೆ.

ಬೆಂಗಳೂರು: ನಿನ್ನೆ ನಭದತ್ತ ಚಿಮ್ಮಿದ ಚಂದ್ರಯಾನ-2 ಗಗನ ನೌಕೆ ಉತ್ತಮವಾಗಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಇಸ್ರೋ ಇಂದು ತಿಳಿಸಿದೆ. 
ಚಂದ್ರಯಾನ-2 ಉಪಗ್ರಹವನ್ನು ಹೊತ್ತ ಜಿಎಸ್ ಎಲ್ ವಿ-ಮಾರ್ಕ್ 3 ವಾಹಕ ಆಂಧ್ರಪ್ರದೇಶದ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭದತ್ತ ಚಿಮ್ಮಿತ್ತು. 
ಆರ್ಬಿಟರ್, ಲ್ಯಾಂಡರ್ ಮತ್ತು ರೋವರ್ ಗಳ ವೈಜ್ಞಾನಿಕ ಪರಿಕರಗಳನ್ನು ಹೊತ್ತ ಚಂದ್ರಯಾನ-2 ಉಪಗ್ರಹ  ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ.ಇದರಲ್ಲಿ ಯಾವುದೇ ಅನುಮಾನವಿಲ್ಲ ಪೂರ್ವ ನಿಗದಿಯಂತೆ ಸೆಪ್ಟೆಂಬರ್ 7 ರಂದು ಚಂದ್ರನ ಮೈಲ್ಮೆ ತಲುಪಲಿದೆ ಎಂದು  ಇಸ್ರೋ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ. 
ಈಗ ಸ್ವಲ್ಪ ಪ್ರಮಾಣದಲ್ಲಿ ಮೈಲಿಗಲು ಸಾಧಿಸಲಾಗಿದೆ.ಅದನೆಲ್ಲಾ ಈಗ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಆದರೆ, ಆ ಸಂದರ್ಭ ಬಂದಾಗ ಎಲ್ಲವನ್ನೂ ವಿವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ರೋ ನಿರ್ಮಿತ  ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಪಗ್ರಹ ಚಂದ್ರನ ಮೇಲ್ಮೆ ಬಗ್ಗೆ ಅಧ್ಯಯನ ನಡೆಸಲಿದೆ. ಇದು ಯಶಸ್ವಿಯಾದರೆ ರಷ್ಯಾ, ಅಮೆರಿಕಾ, ಚೀನಾ ನಂತರ ಚಂದ್ರನ ಪ್ರವೇಶ ಮಾಡಲಿರುವ ನಾಲ್ಕನೇ ರಾಷ್ಟ್ರ ಭಾರತವಾಗಲಿದೆ .
 ರಾಕೆಟ್ ನಿಂದ ಚಂದ್ರಯಾನ-2 ಉಪಗ್ರಹ ಪ್ರತ್ಯೇಕಗೊಂಡ ಬಳಿಕ ಬೆಂಗಳೂರಿನಲ್ಲಿರುವ  ಇಸ್ರೋ ನಿಯಂತ್ರಣ ಕೇಂದ್ರ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!