ಚಂದ್ರಯಾನ-2 ಆರ್ಬಿಟರ್ ಸಕ್ರಿಯವಾಗಿದೆ, ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಇಲ್ಲ: ಇಸ್ರೋ ಮುಖ್ಯಸ್ಥ ಶಿವನ್
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅಧ್ಯಕ್ಷ ಕೆ.ಶಿವನ್ ಚಂದ್ರಯಾನ-2 ಬಗ್ಗೆ ಮಾತನಾಡಿದ್ದು, ಚಂದ್ರಯಾನ-2 ಆರ್ಬಿಟರ್ ಸಕ್ರಿಯವಾಗಿದೆ, ಆದರೆ ವಿಕ್ರಮ್ ಲ್ಯಾಂಡರ್ ಜೊತೆ ಸಿಗ್ನಲ್ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ಅಹ್ಮದಾಬಾದ್: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅಧ್ಯಕ್ಷ ಕೆ.ಶಿವನ್ ಚಂದ್ರಯಾನ-2 ಬಗ್ಗೆ ಮಾತನಾಡಿದ್ದು, ಚಂದ್ರಯಾನ-2 ಆರ್ಬಿಟರ್ ಸಕ್ರಿಯವಾಗಿದೆ, ಆದರೆ ವಿಕ್ರಮ್ ಲ್ಯಾಂಡರ್ ಜೊತೆ ಸಿಗ್ನಲ್ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಇಸ್ರೋ ಅಧ್ಯಕ್ಷರು, ವಿಕ್ರಮ್ ಗೆ ಸಂಬಂಧಿಸಿದ ವಿಷಯವಾಗಿ ವಿಶ್ಲೇಷಣೆ ನಡೆಸುವುದಕ್ಕಾಗಿ ರಾಷ್ಟ್ರ ಮಟ್ಟದ ಸಮಿತಿಯನ್ನು ರಚಿಸಿದ್ದು, ವಿಶ್ಲೇಷಣೆ ವರದಿಯ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಸ್ಮಾಲ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಎಸ್ಎಸ್ಎಲ್ ವಿ) ಆದಿತ್ಯ ಎಲ್-1 ಮಿಷನ್ ಹಾಗೂ ಗಗನ್ ಯಾನ್ ಮಿಷನ್ ನಲ್ಲಿ ಇಸ್ರೋ ಸಂಸ್ಥೆ ತೊಡಗಿಸಿಕೊಂಡಿದೆ ಎಂದು ಶಿವನ್ ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.