ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ L-1 ವೀಕ್ಷಣಾಲಯ 
ವಿಜ್ಞಾನ-ತಂತ್ರಜ್ಞಾನ

ಸೂರ್ಯನ ಅಧ್ಯಯನಕ್ಕೆ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್1 ಉಡಾವಣೆಗೆ ಇಸ್ರೋ ಸಿದ್ಧ

ಸೂರ್ಯನ ಕುರಿತು ಹೆಚ್ಚಿನ ಅಧ್ಯಯನಕ್ಕೆ ನೆರವಾಗುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್ 1 ಶೀಘ್ರದಲ್ಲೇ ಉಡಾವಣೆಗೆ ಸಿದ್ಧವಾಗುತ್ತಿದೆ ಎಂದು ಇಸ್ರೋ ಹೇಳಿದೆ. 

ಬೆಂಗಳೂರು: ಸೂರ್ಯನ ಕುರಿತು ಹೆಚ್ಚಿನ ಅಧ್ಯಯನಕ್ಕೆ ನೆರವಾಗುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್ 1 ಶೀಘ್ರದಲ್ಲೇ ಉಡಾವಣೆಗೆ ಸಿದ್ಧವಾಗುತ್ತಿದೆ ಎಂದು ಇಸ್ರೋ ಹೇಳಿದೆ. 

ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ತಯಾರಾಗಿ ಈ ಉಪಗ್ರಹವು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದೆ ಎಂದು ಇಸ್ರೋದ ಬೆಂಗಳೂರು ಪ್ರಧಾನ ಕಚೇರಿ ತಿಳಿಸಿದೆ. 

ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆಯಾಗಬಹುದು ಎಂದು ಇಸ್ರೋ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ(ಮೂರು ಆಯಾಮ ಕಕ್ಷೆಯಲ್ಲಿ) ಇರಿಸುವ ಯೋಜನೆಯಲ್ಲಿದ್ದಾರೆ ವಿಜ್ಞಾನಿಗಳು. 

ಎಲ್ 1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾದ ಉಪಗ್ರಹವು ಸೂರ್ಯನನ್ನು ನಿರಂತರವಾಗಿ ವೀಕ್ಷಿಸುತ್ತದೆ. ಇದು ಸೌರ ಚಟುವಟಿಕೆಗಳನ್ನು ಮತ್ತು ನೈಜ ಸಮಯದಲ್ಲಿ ಬಾಹ್ಯಾಕಾಶ ಹವಾಮಾನದ ಮೇಲೆ ಅದರ ಪರಿಣಾಮವನ್ನು ವೀಕ್ಷಿಸಲು ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತದೆ ಎಂದು ಹೇಳಿದೆ. 

ಬಾಹ್ಯಾಕಾಶ ನೌಕೆಯು ವಿದ್ಯುತ್ಕಾಂತೀಯ, ಕಣ ಮತ್ತು ಕಾಂತೀಯ ಕ್ಷೇತ್ರ ಶೋಧಕಗಳನ್ನು ಬಳಸಿಕೊಂಡು ದ್ಯುತಿಗೋಳ, ವರ್ಣಗೋಳ ಮತ್ತು ಸೂರ್ಯನ ಹೊರಗಿನ ಪದರಗಳನ್ನು ವೀಕ್ಷಿಸಲು ಏಳು ಪೇಲೋಡ್‌ಗಳನ್ನು ಒಯ್ಯುತ್ತದೆ.

ವಿಶೇಷ ವಾಂಟೇಜ್ ಪಾಯಿಂಟ್ L1 ನ್ನು ಬಳಸಿಕೊಂಡು, ನಾಲ್ಕು ಪೇಲೋಡ್‌ಗಳು ನೇರವಾಗಿ ಸೂರ್ಯನನ್ನು ವೀಕ್ಷಿಸುತ್ತವೆ. ಉಳಿದ ಮೂರು ಪೇಲೋಡ್‌ಗಳು L1 ನಲ್ಲಿ ಕಣಗಳು ಮತ್ತು ಕ್ಷೇತ್ರಗಳ ಸ್ಥಳದಲ್ಲೇ ಅಧ್ಯಯನಗಳನ್ನು ನಡೆಸುತ್ತವೆ, ಹೀಗಾಗಿ ಅಂತರಗ್ರಹ ಮಾಧ್ಯಮದಲ್ಲಿ ಸೌರ ಡೈನಾಮಿಕ್ಸ್‌ನ ಪ್ರಸರಣ ಪರಿಣಾಮದ ಪ್ರಮುಖ ವೈಜ್ಞಾನಿಕ ಅಧ್ಯಯನಗಳನ್ನು ಒದಗಿಸುತ್ತದೆ.

"ಆದಿತ್ಯ L1 ಪೇಲೋಡ್‌ಗಳ ಸೂಟ್‌ಗಳು ಕರೋನಲ್ ಹೀಟಿಂಗ್, ಕರೋನಲ್ ಮಾಸ್ ಎಜೆಕ್ಷನ್, ಪ್ರೀ-ಫ್ಲೇರ್ ಮತ್ತು ಫ್ಲೇರ್ ಚಟುವಟಿಕೆಗಳು ಮತ್ತು ಅವುಗಳ ಗುಣಲಕ್ಷಣಗಳು, ಬಾಹ್ಯಾಕಾಶ ಹವಾಮಾನದ ಡೈನಾಮಿಕ್ಸ್, ಕಣ ಮತ್ತು ಕ್ಷೇತ್ರಗಳ ಪ್ರಸರಣ ಇತ್ಯಾದಿಗಳ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಅತ್ಯಂತ ನಿರ್ಣಾಯಕವಾಗಿದೆ ಎಂದು ಇಸ್ರೋ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT