ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿರುವ ನಾಸಾ ಮುಖ್ಯಸ್ಥ 
ವಿಜ್ಞಾನ-ತಂತ್ರಜ್ಞಾನ

ನಾಸಾ ಮುಖ್ಯಸ್ಥರು ಇಂದು ಇಸ್ರೊ ಕೇಂದ್ರಕ್ಕೆ ಭೇಟಿ: ಸಾಥ್ ನೀಡಲಿದ್ದಾರೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮ

ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಅವರು ಇಂದು ಗುರುವಾರ ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಕಡಿಮೆ ಭೂ ಕಕ್ಷೆಯ  ವೀಕ್ಷಣಾಲಯವಾದ NISAR ನ್ನು ವೀಕ್ಷಿಸಲಿದ್ದಾರೆ. ಇವರೊಂದಿಗೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಕೂಡ ಇರಲಿದ್ದಾರೆ.

ಬೆಂಗಳೂರು: ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಅವರು ಇಂದು ಗುರುವಾರ ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಕಡಿಮೆ ಭೂ ಕಕ್ಷೆಯ  ವೀಕ್ಷಣಾಲಯವಾದ NISAR ನ್ನು ವೀಕ್ಷಿಸಲಿದ್ದಾರೆ. ಇವರೊಂದಿಗೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಕೂಡ ಇರಲಿದ್ದಾರೆ.

ನೆಲ್ಸನ್ ಬೆಂಗಳೂರಿನಲ್ಲಿರುವ ಯುಆರ್ ರಾವ್ ಉಪಗ್ರಹ ಕೇಂದ್ರಕ್ಕೆ (URSC) ಭೇಟಿ ನೀಡಲಿದ್ದಾರೆ, ಅಲ್ಲಿ ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಉಪಗ್ರಹವು 2024 ರಲ್ಲಿ ನಿಗದಿತ ಉಡಾವಣೆಗೂ ಮುನ್ನ ಪರೀಕ್ಷೆಗೆ ಒಳಗಾಗುತ್ತಿದೆ.

ನಿನ್ನೆ ಭಾರತಕ್ಕೆ ಆಗಮಿಸಿರುವ ನಾಸಾ ಮುಖ್ಯಸ್ಥರು ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ (ವಿಐಟಿಎಂ) ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 2024 ರಲ್ಲಿ ಉಡಾವಣೆ ಮಾಡಲು ಯೋಜಿಸಿರುವ ಮುಂಬರುವ ಜಂಟಿ NISAR ಮಿಷನ್ ಹೇಗೆ ಬಾಹ್ಯಾಕಾಶದಲ್ಲಿ ಅಮೆರಿಕ ಮತ್ತು ಭಾರತದ ಪಾಲುದಾರಿಕೆಯು ಭೂಮಿಯ ಮೇಲಿನ ಜನರಿಗೆ ಹೇಗೆ ಸಹಾಯ ಮಾಡಲಿದೆ ಎಂದು ಉದಾಹರಣೆ ಸಹಿತ ವಿವರಿಸಿದರು.

ನಿಸಾರ್ ಅಂಕಿಅಂಶಗಳು ಪ್ರಪಂಚದಾದ್ಯಂತದ ಜನರಿಗೆ ನೈಸರ್ಗಿಕ ಸಂಪನ್ಮೂಲಗಳು ಮತ್ತು ಅಪಾಯಗಳನ್ನು ಉತ್ತಮವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ, ಜೊತೆಗೆ ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ವೇಗವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ವಿಜ್ಞಾನಿಗಳಿಗೆ ಮಾಹಿತಿಯನ್ನು ಒದಗಿಸುತ್ತದೆ.

2024 ರ ಅಂತ್ಯದ ವೇಳೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಭಾರತೀಯ ಗಗನಯಾತ್ರಿಗಳಿಗೆ ತರಬೇತಿ ನೀಡಲು ಮತ್ತು ಕಳುಹಿಸಲು ಅಮೆರಿಕ ಸಹಾಯ ಮಾಡುತ್ತದೆ ಎಂದು ನೆಲ್ಸನ್ ಘೋಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT