ಸೂರ್ಯ ಗ್ರಹಣ
ಸೂರ್ಯ ಗ್ರಹಣ 
ವಿಜ್ಞಾನ-ತಂತ್ರಜ್ಞಾನ

Solar Eclipse; ನಾಳೆ ವರ್ಷದ ಮೊದಲ ಸೂರ್ಯ ಗ್ರಹಣ: ಎಲ್ಲಿ, ಯಾವಾಗ ಗೋಚರ? ಇಲ್ಲಿದೆ ಮಾಹಿತಿ

Srinivasamurthy VN

ನವದೆಹಲಿ: 2024 ವರ್ಷದ ಮೊದಲ ಸೂರ್ಯಗ್ರಹಣ ನಾಳೆ ಅಂದರೆ ಏಪ್ರಿಲ್ 8 ಸೋಮವಾರ ಸಂಭವಿಸುತ್ತಿದ್ದು, ಭಾರತದಲ್ಲಿ ಈ ಗ್ರಹಣ ಗೋಚರವಾಗುತ್ತಿಲ್ಲ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಚಂದ್ರನ ನೆರಳು ಪೂರ್ತಿಯಾಗಿ ಸೂರ್ಯನ ಮೇಲೆ ಬಿದ್ದಾಗ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಸೂರ್ಯನ ಬೆಳಕು ಭೂಮಿಯ ಮೇಲೆ ಬೀಳುವುದನ್ನು ತಡೆಯುತ್ತದೆ. ಚಂದ್ರನ ನೆರಳು ಭೂಮಿಯ ಮೇಲ್ಮೈಯಲ್ಲಿ ವೇಗವಾಗಿ ಚಲಿಸುವಾಗ ಸೂರ್ಯಗ್ರಹಣ ಗೋಚರವಾಗುತ್ತದೆ. ಸೂರ್ಯನ ಹೊರ ಪದರ ಚಂದ್ರನ ಮೇಲೆ ಸುತ್ತುವರಿದು ಸುಂದರವಾದ ಪ್ರಭಾವಲಯದಂತೆ ಹೊಳೆಯುತ್ತದೆ. ಇದು ನಿರ್ದಿಷ್ಟ ಅವಧಿಯವರೆಗೆ ಮಾತ್ರ ಸಂಭವಿಸುತ್ತದೆ.

ಎಲ್ಲೆಲ್ಲಿ ಗ್ರಹಣ ಗೋಚರ?

ಈ ಬಾರಿ ಸೂರ್ಯಗ್ರಹಣವು ಉತ್ತರ ಅಮೆರಿಕ (north america) ಖಂಡದಾದ್ಯಂತ ಕಾಣಿಸುತ್ತಿದ್ದು, ಮೆಕ್ಸಿಕೋ (Mexico), ಯುನೈಟೆಡ್ ಸ್ಟೇಟ್ಸ್ (United States) ಮತ್ತು ಕೆನಡಾದಲ್ಲಿ (Canada) ಸ್ಥಳೀಯ ಕಾಲಮಾನ ಬೆಳಗ್ಗೆ 11.07ರ ಸುಮಾರಿಗೆ ಸೂರ್ಯಗ್ರಹಣ ಪ್ರಾರಂಭವಾಗಲಿದೆ.

ಪೆಸಿಫಿಕ್ ಕರಾವಳಿಯ ಪ್ರದೇಶದ ಮೆಕ್ಸಿಕೋದಲ್ಲಿ ಮೊದಲು ಸೂರ್ಯಗ್ರಹಣ ಗೋಚರವಾಗಲಿದೆ. ಅಲ್ಲದೆ ಟೆಕ್ಸಾಸ್, ಒಕ್ಲಹೋಮ, ಅರ್ಕಾನ್ಸಾಸ್, ಮಿಸೌರಿ, ಇಲಿನಾಯ್ಸ್, ಕೆಂಟುಕಿ, ಇಂಡಿಯಾನಾ, ಓಹಿಯೋ, ಪೆನ್ಸಿಲ್ವೇನಿಯಾ, ನ್ಯೂಯಾರ್ಕ್, ವರ್ಮೊಂಟ್, ನ್ಯೂ ಹ್ಯಾಂಪ್‌ಶೈರ್ ಮತ್ತು ಮೈನೆ ಮೊದಲಾದ ರಾಜ್ಯಗಳಲ್ಲಿ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುವುದು.

ಟೆಕ್ಸಾಸ್‌ನಲ್ಲಿ ಆರಂಭವಾಗಿ ಮೆಕ್ಸಿಕೋ, ಯುಕಾಟಾನ್ ಪೆನಿನ್ಸುಲಾ, ಗ್ವಾಟೆಮಾಲಾ, ಹೊಂಡಾರುಸ್, ನಿಕರಾಗುವಾ, ಕೋಸ್ಟರಿಕಾದಲ್ಲಿ ಗೋಚರಿಸಿತ್ತು. ಪನಾಮ, ಮಧ್ಯ ಅಮೆರಿಕ, ಉತ್ತರ ಅಮೆರಿಕ, ಕೊಲಂಬಿಯಾ ಮತ್ತು ಬ್ರೆಜಿಲ್‌ನಲ್ಲೂ ಗೋಚರಿಸುವುದರ ಜತೆಗೆ ಅಲಾಸ್ಕಾ ಮತ್ತು ಅರ್ಜೆಂಟೀನಾದಲ್ಲೂ ಗ್ರಹಣ ಸಂಭವಿಸಿತ್ತು. ಹೀಗಾಗಿ ಈ ಭಾಗದಲ್ಲಿ ಮಾತ್ರ ಗ್ರಹಣ ಪರಿಣಾಮ ಉಂಟಾಗಿದೆ. ಭಾರತದಲ್ಲಿ ಇದರ ಪರಿಣಾಮ ಇರುವುದಿಲ್ಲ.

ಭಾರತದಲ್ಲಿ ಗೋಚರ ಇಲ್ಲ

ಈ ಬಾರಿ ಸೂರ್ಯಗ್ರಹಣವು ಭಾರತದಲ್ಲಿ ಗೋಚರವಾಗುವುದಿಲ್ಲ. ಯಾಕೆಂದರೆ ಸೂರ್ಯಗ್ರಹಣ ಸಂಭವಿಸಿದಾಗ ಭಾರತದಲ್ಲಿ ಮಧ್ಯರಾತ್ರಿಯಾಗಿರುತ್ತದೆ.

SCROLL FOR NEXT