ನವದೆಹಲಿ: ಭಾರತ ಮತ್ತು ಶ್ರೀಲಂಕಾ ಸಂಪರ್ಕಿಸುವ ರಾಮಸೇತು ನೈಸರ್ಗಿಕವಾಗಿ ಸೃಷ್ಟಿಯಾದುದಲ್ಲ. ಮಾನವ ನಿರ್ಮಿತವೆಂದು ಅಮೆರಿಕದ ವಿಜ್ಞಾನಿಗಳು ಸಾರಿದ್ದು ಇದರೊಂದಿಗೆ ರಾಮಸೇತುವಿನ ಅಸ್ತಿತ್ವದ ಕುರಿತ ಪ್ರಶ್ನೆಗೊಂದು ಸಿಹಿ ಉತ್ತರ ಸಿಕ್ಕಿದೆ.
ಅಮೆರಿಕದ ಡಿಸ್ಕವರಿ ಕಮ್ಯೂನಿಕೇಷನ್ ಸೈನ್ಸ್ ಚಾನೆಲ್ ಸಾಕ್ಷ್ಯಚಿತ್ರವೊಂದನ್ನು ತಯಾರಿಸಿದ್ದು ಇದರಲ್ಲಿ ರಾಮಸೇತುವಿನ ಅಸ್ತಿತ್ವದ ಕುರಿತಂತೆ ವೈಜ್ಞಾನಿಕ ಉತ್ತರಗಳನ್ನು ಪಡೆಯಲಾಗಿದೆ. ಜಗತ್ತಿನ ವಿಶಿಷ್ಟ ಸಂಗತಿಗಳ ಬಗ್ಗೆ ಸಾಕ್ಷ್ಯಚಿತ್ರ ನಿರ್ಮಿಸಿ ಪ್ರಸಾರ ಮಾಡುವಲ್ಲಿ ಹೆಸರುವಾಸಿಯಾಗಿರುವ ಡಿಸ್ಕವರಿ ಚಾನೆಲ್ ಈ ಕಾರ್ಯಕ್ರಮ ಪ್ರಸಾರವಾಗಲಿದೆ.
ರಾಮಸೇತು ಮಾನವ ನಿರ್ಮಿಸಿದ್ದು ಎಂದು ಇದುವರೆಗೆ ಹೇಳುತ್ತಲೇ ಬರಲಾಗಿತ್ತು. ಆದರೆ ಕೆಲವು ಸರ್ಕಾರಗಳು ಒಪ್ಪಿರಲಿಲ್ಲ. ಈಗ ಡಿಸ್ಕವರಿ ಚಾನೆಲ್ ವೈಜ್ಞಾನಿಕವಾಗಿ ಉತ್ತರ ಕಂಡುಕೊಂಡಿದೆ.