ಖ್ಯಾತ ಸಾಹಿತಿ, ರಂಗಭೂಮಿ, ಸಿನಿಮಾ ನಟರೂ ಆಗಿದ್ದ ನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ [81] ಸೊಮವಾರ ಬೆಳಿಗ್ಗೆ ಅಸುನೀಗಿದ್ದಾರೆ. ಎಲ್ಲಾ ಸೀಮೆಗಳನ್ನು ಮೀರಿದ್ದ ಮಹಾನ್ ಪ್ರತಿಭೆ ಗಿರೀಶ್ ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ, ನಾಟಕಕಾರರಾಗಿ, ಚಲನಚಿತ್ರರಂಗದ ನಟರಾಗಿ ಹೆಸರಾಗಿದ್ದವರು.
ಕಾರ್ನಾಡರು 1934 ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ, ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದ ಇವರು ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಮುಗಿಸಿದ್ದರು.ನಂತರ ತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದ ಕಾರ್ನಾಡರು ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಎನಿಸಿಕೊಂಡಿದ್ದಾರೆ.ಚೆನ್ನೈ ನಲ್ಲಿ ವೃತ್ತಿಜೀವನ ಪ್ರಾರಂಭಿಸಿ ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ, ಇಂಗ್ಲೆಂಡಿನಲ್ಲಿ ನೆಹರೂ ಸೆಂಟರಿನ ಅಧ್ಯಕ್ಷರಾಗಿ, ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ತಮ್ಮ 42ನೇ ವಯಸ್ಸಿನಲ್ಲಿ ಕೊಡಗಿನ ವೀರಯೋಧ ಕೋದಂಡೇರ ಗಣಪತಿಯವರ ಪುತ್ರಿ, ಡಾ.ಸರಸ್ವತಿ ಗಣಪತಿಯವರನ್ನು ವಿವಾಹವಾದ ಇವರಿಗೆ ಶಾಲ್ಮಲಿ ರಾಧಾ ಮತ್ತು ರಘು ಅಮಯ್ ಇಬ್ಬರು ಮಕ್ಕಳಿದ್ದಾರೆ.
ಮಾ ನಿಷಾಧ - ಏಕಾಂಕ ನಾಟಕ, ಯಯಾತಿ - 1961, ತುಘಲಕ್ - 1964, ಹಯವದನ - 1972, ಅಂಜುಮಲ್ಲಿಗೆ - 1977, ಹಿಟ್ಟಿನ ಹುಂಜ ಅಥವಾ ಬಲಿ - 1980, ನಾಗಮಂಡಲ - 1990, ತಲೆದಂಡ - 1991, ಅಗ್ನಿ ಮತ್ತು ಮಳೆ - 1995, ಟಿಪ್ಪುವಿನ ಕನಸುಗಳು - 1997, ಒಡಕಲು ಬಿಂಬ - 2005, ಮದುವೆ ಅಲ್ಬಮ್, ಫ್ಲಾವರ್ಸ - 2012 ಬೆಂದ ಕಾಳು ಆನ್ ಟೋಸ್ಟ ಇವು ಅವರ ಪ್ರಮುಖ ನಾಟಕಗಳಾದರೆ ಆಡಾಡತ ಆಯುಷ್ಯ ಎಂಬುದು ಅವರ ಆತ್ಮಕಥನ.
ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡತಿ, ಉತ್ಸವ್ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿದ್ದ ಕಾರ್ನಾಡರು ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸೂಫಿ ಪಂಥ, ಕನಕ ಪುರಂದರ ಸಾಕ್ಷಚಿತ್ರಗಳನ್ನು ನಿರ್ದೇಶನ ಂಆಡಿದ್ದಾರೆ. ಸಾಹಿತ್ಯಕ್ಷೇತ್ರದಲ್ಲಿ ನಾಟಕಗಳನ್ನು ಮಾತ್ರ ರಚಿಸಿ ಜ್ಞಾನಪೀಠ ಪ್ರಶಸ್ತಿಗೆ ಪುರಸ್ಕೃತರಾದವರಲ್ಲಿ ಕಾರ್ನಾಡರು ಮೊದಲಿಗರು ಎನ್ನುವುದು ಇನ್ನೊಂದು ವಿಶೇಡ್ಶ.ಕಾರ್ನಾಡರ ಕೃತಿಗಳು ಇಂಗ್ಲಿಷ್ ಭಾಷೆಯೂ ಸೇರಿದಂತೆ.ವಿದೇಶ ಬಾಷೆಗಳಲ್ಲಿಯೂ ಅನುವಾದವಾಗಿ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಧೀರ ರಣ ವಿಕ್ರಮ, ರುದ್ರ ತಾಂಡವ, ಸವಾರಿ-2, ಯಾರೇ ಕೂಗಾಡಲಿ. ಕಂಪೇಗೌಡ, ಆ ದಿನಗಳು, ತನನಂ ತನನಂ, ಎ.ಕೆ-47 ಮುಂತಾದ ಪ್ರಸಿದ್ಧ ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದರು. ಅಲ್ಲದೇ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳ ಸಿನಿಮಾಗಳಲ್ಲೂ ಗಿರೀಶ್ ಕಾರ್ನಾಡ್ ನಟಿಸಿ ದೇಶದಲ್ಲಿ ದೊಡ್ಡ ಹೆಸರು ಮಾಡಿದ್ದರು.
ಹೀಗೆ ರಂಗಬುಮಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಗಿರೀಶ್ ಕಾರ್ನಾಡ್ ಸಲ್ಲಿಸಿರುವ ಸೇವೆ ಪರಿಗಣಿಸಿ ಅನೇಕ ಪುರಸ್ಕಾರಗಳು ಲಭಿಸಿದೆ. ಅವುಗಳಲ್ಲಿ .ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,, ಗುಬ್ಬಿ ವೀರಣ್ಣ ಪ್ರಶಸ್ತಿ,, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ,ಪದ್ಮಶ್ರೀ -1974, ಪದ್ಮಭೂಷಣ -1992, ಜ್ಞಾನಪೀಠ -1998, ಕಾಳಿದಾಸ ಸಮ್ಮಾನ್ - 1998 ಪ್ರಮುಖವಾದವು.
-- ರಾಘವೇಂದ್ರ ಅಡಿಗ ಎಚ್ಚೆನ್.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos