ಮಲಯಾಳಂ ನಟ, ರಾಜಕಾರಣಿ ಸುರೇಶ್ ಗೋಪಿಯವರಿಂದ ಸೀಬೆ ಗಿಡ ಸ್ವೀಕರಿಸುತ್ತಿರುವ ಮೋದಿ 
ವಿಶೇಷ

ಪ್ರಧಾನಿ ನರೇಂದ್ರ ಮೋದಿ ಮನೆಯಂಗಳ ತಲುಪಿದ ಕೇರಳ ಬಾಲಕಿಯ ಸೀಬೆ ಗಿಡ!

ಸಾವಯವ ಕೃಷಿಯ ಕನಸನ್ನು ಹೊತ್ತಿರುವ ಜಯಲಕ್ಷ್ಮಿ ಎನ್ನುವ 10ನೇ ತರಗತಿಯ ಬಾಲಕಿಗೆ ಸೇರಿದ ಗಿಡ ಅದು. ಈ ಹಿಂದೆ ಜಯಲಕ್ಷ್ಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು ಎನ್ನುವುದು ವಿಶೇಷ.

ಕೊಲ್ಲಂ: ಪ್ರಧಾನಿ ನರೇಂದ್ರ ಮೋದಿ ನಿವಾಸದ ಅಂಗಳದ ಉದ್ಯಾನವನದಲ್ಲಿ ಇನ್ನುಮುಂದೆ ಕೇರಳ ಬಾಲಕಿಯ ಸೀಬೆ ಗಿಡ ಹೂ ಬಿಡಲಿದೆ. ಸಾವಯವ ಕೃಷಿಯ ಕನಸನ್ನು ಹೊತ್ತಿರುವ ಜಯಲಕ್ಷ್ಮಿ ಎನ್ನುವ 10ನೇ ತರಗತಿಯ ಬಾಲಕಿಗೆ ಸೇರಿದ ಗಿಡ ಅದು. ಆಕೆ ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಪಂಡಲಂ ಊರಿನ ನಿವಾಸಿ.

ಬಾಲಕಿ ಜಯಲಕ್ಷ್ಮಿ ಬೆಳೆಸಿದ ಗಿಡವನ್ನು ಮಲಯಾಲಂ ಚಿತ್ರನಟ, ರಾಜಕಾರಣಿ ಸುರೇಶ್ ಗೋಪಿ ಉಡುಗೊರೆಯಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ್ದಾರೆ. ಜಯಲಕ್ಷ್ಮಿ ಆ ಗಿಡವನ್ನು ಸುರೇಶ್ ಗೋಪಿಯವರಿಗೆ ಉಡುಗೊರೆಯಾಗಿ ನೀಡಿದ್ದಳು.

ಜಯಲಕ್ಷ್ಮಿ ತನ್ನ ಮನೆಯ ಅಂಗಳದಲ್ಲಿ ಸಾವಯವ ಉದ್ಯಾನವನ ನಿರ್ಮಿಸಿದ್ದಾಳೆ. ಅದೇ ಕಾರಣಕ್ಕೆ ರಾಜ್ಯ ಸರ್ಕಾರದಿಂದ ಪ್ರಶಸ್ತಿಯನ್ನೂ ಪಡೆದಿದ್ದಾಳೆ. 

ಈ ಹಿಂದೆ ಜಯಲಕ್ಷ್ಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು ಎನ್ನುವುದು ವಿಶೇಷ. ಪತ್ರದಲ್ಲಿ ಸಾವಯವ ಕೃಷಿಯತ್ತ ಹೊರಳಲು ಯುವಜನತೆಗೆ ಸ್ಫೂರ್ತಿ ಮತ್ತು ಪ್ರೋತ್ಸಾಹ ನೀಡಬೇಕೆಂದು ಆಕೆ ಮೋದಿಯವರಲ್ಲಿ ಮನವಿ ಮಾಡಿಕೊಂಡಿದ್ದಳು.

ತನ್ನ ಗಿಡ ಪ್ರಧಾನಿ ಮೋದಿಯವರನ್ನು ತಲುಪುತ್ತದೆ ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ ಎಂದು ಜಯಲಕ್ಷ್ಮಿ ಪ್ರತಿಕ್ರಿಯಿಸಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT