ವಿಶೇಷ

ರಾಷ್ಟ್ರಪತಿಗಳ ಮುಂದೆ ‘ಸ್ವಚ್ಛ ಭಾರತ’ ಕುರಿತು ಭಾಷಣ ಮಾಡಿದ ಉಡುಪಿ ಬಾಲಕಿ

ಅಪರೂಪದ ಅವಕಾಶದಲ್ಲಿ, ಉಡುಪಿಯ ಪಾಜಕದ ಆನಂದತೀರ್ಥ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ಅವಂತಿಕಾ ವಿ ರಾವ್ ಅವರು ಈ ವಾರದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಭಾಷಣ ಮಾಡಿದ್ದಾರೆ.

ಉಡುಪಿ: ಅಪರೂಪದ ಅವಕಾಶದಲ್ಲಿ, ಉಡುಪಿಯ ಪಾಜಕದ ಆನಂದತೀರ್ಥ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ಅವಂತಿಕಾ ವಿ ರಾವ್ ಅವರು ಈ ವಾರದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಭಾಷಣ ಮಾಡಿದ್ದಾರೆ.

ಅವಂತಿಕಾ, ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದು, ಈ ಸ್ಪರ್ಧೆಯಲ್ಲಿ 30 ಮಿಲಿಯನ್ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಇದರಲ್ಲಿ 29 ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.

ಆವಂತಿಕಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ 28 ವಿದ್ಯಾರ್ಥಿಗಳು ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದರು. ಅವರಲ್ಲಿ, ಆವಂತಿಕಾ ಮತ್ತು ಇನ್ನೊಬ್ಬ ವಿದ್ಯಾರ್ಥಿ ರಾಜಸ್ಥಾನದ ನಾಗೌರ್‌ನ ಕುಶಿ ಪ್ರಜಾಪತಿ ಅವರು ರಾಷ್ಟ್ರಪತಿಗಳ ಮುಂದೆ ಮಾತನಾಡುವ ಅವಕಾಶವನ್ನು ಪಡೆದರು.

ಅವಂತಿಕಾ ಭಾರತದ ರಾಷ್ಟ್ರಪತಿಗಳ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಮೂರು ನಿಮಿಷಗಳ ಭಾಷಣದಲ್ಲಿ ಅವರು ಸ್ವಚ್ಛ ಭಾರತ ಮತ್ತು ಅದನ್ನು ಸಾಧಿಸಲು ಪ್ರತಿಯೊಬ್ಬರೂ ಹೇಗೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಒತ್ತಿ ಹೇಳಿದರು ಮತ್ತು ನಮ್ಮ ಸ್ವಚ್ಛತೆಯ ಪ್ರಜ್ಞೆಯು ಇತರರಿಗೆ ಸ್ಫೂರ್ತಿ ನೀಡಬೇಕು" ಎಂದರು.

ವಿಜೇತರನ್ನು ಅಭಿನಂದಿಸಿದ ರಾಷ್ಟ್ರಪತಿ ಮುರ್ಮು ಅವರು, ‘ಅಮೃತ ಕಾಲ’ದ ಸಂದರ್ಭದಲ್ಲಿ ‘ಭವ್ಯ ಭಾರತ ನಿರ್ಮಾಣಕ್ಕೆ ನಾನು ಮಾಡಲಿರುವ ಐದು ಕೆಲಸಗಳು’ ಎಂಬ ಪ್ರಬಂಧ ಸ್ಪರ್ಧೆಯ ವಿಷಯ ಪ್ರಸ್ತುತವಾಗಿದೆ. ಭಾರತವು ತನ್ನ 100ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವಾಗ, ಈ ಯುವ ಮನಸ್ಸುಗಳು ಇಡೀ ದೇಶದ ಒಳಿತಿಗಾಗಿ ಕೊಡುಗೆ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಕ್ಕಳು ದೊಡ್ಡ ಕನಸು ಕಾಣಬೇಕು ಮತ್ತು ಅವರ ಕನಸುಗಳನ್ನು ನನಸಾಗಿಸಲು ಶ್ರಮಿಸಬೇಕು ಎಂದು ರಾಷ್ಟ್ರಪತಿಗಳು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT