ಹುಬ್ಬಳ್ಳಿ ಸಮೀಪದ ಖಾದಿ ಫೆಡರೇಶನ್‌ನ ಮಹಿಳಾ ಉದ್ಯೋಗಿಗಳು ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರೀಯ ಧ್ವಜ ಬೇಡಿಕೆಯನ್ನು ಪೂರೈಸಲು ಪೂರ್ಣ ಸಮಯ ಕೆಲಸ ಮಾಡುತ್ತಾರೆ 
ವಿಶೇಷ

ತ್ರಿವರ್ಣ ಧ್ವಜದಂತೆಯೇ ಹುಬ್ಬಳ್ಳಿಯ ರಾಷ್ಟ್ರಧ್ವಜ ತಯಾರಿಕಾ ಘಟಕ ಉದ್ಯಮದಲ್ಲಿ ಉತ್ತುಂಗಕ್ಕೆ!

ಹುಬ್ಬಳ್ಳಿಯಲ್ಲಿರುವ ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ 1.75 ಕೋಟಿ ರೂಪಾಯಿಗಳಷ್ಟು ವಹಿವಾಟು ನಡೆಸುವ ಗುರಿ ಹೊಂದಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿರುವ ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ 1.75 ಕೋಟಿ ರೂಪಾಯಿಗಳಷ್ಟು ವಹಿವಾಟು ನಡೆಸುವ ಗುರಿ ಹೊಂದಿದೆ.

ಕಳೆದ ವರ್ಷ ಸ್ವಾತಂತ್ರ್ಯದ 75 ವರ್ಷಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ‘ಹರ್ ಘರ್ ತಿರಂಗ’ ಅಭಿಯಾನವನ್ನು ಘೋಷಿಸಿದ ಬಳಿಕ ಇದು ಸತತ ಎರಡನೇ ವರ್ಷ 1.5 ಕೋಟಿ ರೂಪಾಯಿಗಿಂತಲೂ ಹೆಚ್ಚು ಗಳಿಕೆ ಮಾಡುತ್ತಿದೆ. ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಖಾದಿ ಉತ್ಪನ್ನ ಮತ್ತು ರಾಷ್ಟ್ರಧ್ವಜ ತಯಾರಿಕಾ ಘಟಕದ ನಿರ್ವಹಣೆ ಮಾಡುತ್ತಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘದ ಪದಾಧಿಕಾರಿಗಳು, ಘಟಕವು ಏಪ್ರಿಲ್ 2023 ರಿಂದ ಜುಲೈ 2023 ರ ನಡುವೆ 1.10 ಕೋಟಿ ರೂಪಾಯಿ ಮೌಲ್ಯದ ವಿವಿಧ ಗಾತ್ರದ ಧ್ವಜಗಳನ್ನು ಮಾರಾಟ ಮಾಡಿದೆ ಎಂದು ಹೇಳುತ್ತಾರೆ. 

“ಹರ್ ಘರ್ ತಿರಂಗಾ ಅಭಿಯಾನದಿಂದ ಕಳೆದ ಎರಡು ವರ್ಷಗಳಲ್ಲಿ ನಮ್ಮ ವ್ಯಾಪಾರ ಸುಧಾರಿಸಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹುಬ್ಬಳ್ಳಿ ಘಟಕಕ್ಕೆ ದೇಶದ ನಾನಾ ಭಾಗಗಳಿಂದ ಆರ್ಡರ್ ಗಳು ಬರುತ್ತವೆ. ಭಾರತದ ಪ್ರಮುಖ ಕಟ್ಟಡಗಳಾದ ರಾಷ್ಟ್ರಪತಿ ಭವನ, ಕೆಂಪು ಕೋಟೆ ಮತ್ತು ಸಂಸತ್ತಿನ ಮೇಲೆ ಹಾರುವ ತ್ರಿವರ್ಣ ಧ್ವಜ ಹುಬ್ಬಳ್ಳಿಯಲ್ಲಿ ತಯಾರಾಗುತ್ತವೆ. ಪ್ರಪಂಚದಾದ್ಯಂತದ ಭಾರತೀಯ ರಾಯಭಾರ ಕಚೇರಿಗಳಲ್ಲಿ ನಮ್ಮಲ್ಲಿ ತಯಾರಾದ ರಾಷ್ಟ್ರೀಯ ಧ್ವಜವನ್ನು ಹಾರಿಸಲಾಗುತ್ತದೆ ಎಂದು ಖಾದಿ ಫೆಡರೇಶನ್‌ನ ಅಧಿಕಾರಿಯೊಬ್ಬರು ಹೇಳುತ್ತಾರೆ. ಹುಬ್ಬಳ್ಳಿ ಘಟಕದಲ್ಲಿ ವರ್ಷವಿಡೀ ವಿವಿಧ ಗಾತ್ರದ ಧ್ವಜಗಳನ್ನು ಸಿದ್ಧಪಡಿಸಲಾಗುತ್ತದೆಯಂತೆ.

ಬೆಂಗೇರಿ ಖಾದಿ ಘಟಕದಲ್ಲಿ ರಾಷ್ಟ್ರಧ್ವಜಕ್ಕೆ ಹೊಲಿಗೆ, ಇಸ್ತ್ರಿ ಮತ್ತು ಪ್ಯಾಕಿಂಗ್ ಮಾಡುವ ಕೆಲಸ ಮಾಡುವ ಮಹಿಳಾ ಕಾರ್ಮಿಕರನ್ನು ಹೊಂದಿದೆ. ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಬೇಡಿಕೆಗಳು ಮತ್ತು ಮಾರಾಟಗಳು ಹೆಚ್ಚಾಗುತ್ತವೆ. ಸರ್ಕಾರವು ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಇತರ ಸರ್ಕಾರಿ ಕಚೇರಿಗಳಲ್ಲಿ ಖಾದಿ ಧ್ವಜವನ್ನು ಬಳಸುವುದನ್ನು ಕಡ್ಡಾಯಗೊಳಿಸಿದ ನಂತರ, ಖಾದಿ ಧ್ವಜಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಅಧಿಕಾರಿ ಹೇಳಿದರು.

ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವವನ್ನು ಆಚರಿಸುವ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಖಾದಿ ಧ್ವಜದಿಂದ ಮಾಡಿದ ರಾಷ್ಟ್ರಧ್ವಜವನ್ನು ಬಳಸುವುದು ಮುಖ್ಯವಾಗಿದೆ. ಖಾದಿ ಭಾರತದ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ಉತ್ತರ ಕರ್ನಾಟಕದ ಸಾವಿರಾರು ಮಹಿಳೆಯರಿಗೆ ಉದ್ಯೋಗ ನೀಡುತ್ತದೆ.

ರಾಷ್ಟ್ರಧ್ವಜಗಳಿಗೆ ಖಾದಿ ವಸ್ತುಗಳನ್ನು ಬಾಗಲಕೋಟೆಯ ಸಣ್ಣ ಖಾದಿ ಘಟಕಗಳಲ್ಲಿ ತಯಾರಿಸಲಾಗುತ್ತದೆ. ನಂತರ ಅವುಗಳನ್ನು ಹುಬ್ಬಳ್ಳಿಯಲ್ಲಿ ಹೊಲಿಗೆ ಮಾಡಿ ಪ್ಯಾಕ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ವಿವರಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT